Mumbai: ಮುಂಬೈನ ಜೋಗೇಶ್ವರಿ ಪ್ರದೇಶದಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಐದು ಪುರುಷರು ಸಾಮೂಹಿಕ ಅತ್ಯಾಚಾರ ಮಾಡಿದ ನಂತರ, ಅವಳನ್ನು ದಾದರ್ ರೈಲ್ವೆ ನಿಲ್ದಾಣದಲ್ಲಿ ಎಸೆದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ಕ್ರೂರ ಘಟನೆ ಫೆಬ್ರವರಿ 26ರಂದು ಸಂಜಯನಗರ ಪ್ರದೇಶದಲ್ಲಿ ನಡೆದಿದ್ದು, ಆರೋಪಿಗಳು ಅತ್ಯಾಚಾರ ಮಾಡಿದ ನಂತರ ಬಾಲಕಿಯನ್ನು ರೈಲ್ವೆ ನಿಲ್ದಾಣದ ಬಳಿ ಬಿಟ್ಟು ಪಲಾಯನ ಮಾಡಿದ್ದಾರೆ.
Mumbai – ಅತ್ಯಾಚಾರವೆಸಗಿ ರೈಲ್ವೆ ನಿಲ್ದಾಣದಲ್ಲಿ ಬಿಟ್ಟು ಪರಾರಿಯಾದ ಕಾಮುಕರು
ಮುಂಬೈನ ಜೋಗೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಜಯನಗರ ಪ್ರದೇಶದಲ್ಲಿ ಈ ಭಯಾನಕ ಘಟನೆ ಫೆ.26 ರಂದು ನಡೆದಿದೆ. ಆರೋಪಿಗಳಲ್ಲಿ ಓರ್ವ ಸಂತ್ರಸ್ತ ಬಾಲಕಿಯನ್ನು ಕೋಣೆಯೊಳಗೆ ಕರೆದೊಯ್ದಿದ್ದ. ಅದಾಗಲೇ ಅಲ್ಲಿ ನಾಲ್ಕು ಮಂದಿ ಇದ್ದರು ಎನ್ನಲಾಗಿದೆ. ಐದು ಮಂದಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು. ಬಳಿಕ ದಾದರ್ ರೈಲ್ವೆ ನಿಲ್ದಾಣದ ಬಳಿ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾರೆ. ಮಾರನೆ ದಿನ ಫೆ.27 ರಂದು ದಾದರ್ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ಸಂಕ್ಯೆ 12 ರಲ್ಲಿ ಬಿದ್ದಿದ್ದ ಸಂತ್ರಸ್ತೆಯನ್ನು ರೈಲ್ವೆ ಪೊಲೀಸರು ನೋಡಿದ್ದಾರೆ.

Mumbai – ಆರೋಪಿಗಳ ವಿರುದ್ದ ಪ್ರಕರಣ ದಾಖಲು
ಇನ್ನೂ ಸಂತ್ರಸ್ತೆಯ ಸ್ಥಿತಿಯನ್ನು ಕಂಡ ಅಧಿಕಾರಿಗಳು ಆಕೆಯ ವಿಶ್ವಾಸ ಗಳಿಸಿ ಅಪರಾಧಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಬಾಲಕಿಯನ್ನು ಕೂಡಲೇ ಜೋಗೇಶ್ವರಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಬಳಿಕ ಪೊಲೀಸರು ಸಂತ್ರಸ್ತೆಯ ಹೇಳಿಕೆಯಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸಂಬಂಧಿತ ವಿಭಾಗಗಳು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಇತರ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
Mumbai – ಆರೋಪಿಗಳ ಬಂಧನ
ಇನ್ನೂ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐದು ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಆರೋಪಿಗಳು ಎ.ಸಿ. ಮೆಕ್ಯಾನಿಕ್ ಗಳಾಗಿದ್ದರಂತೆ. ಸದ್ಯ ಹೆಚ್ಚು ಸಾಕ್ಷ್ಯಗಳನ್ನು ಸಂಗ್ರಹಿಸಲು ಹಾಗೂ ಸಂತ್ರಸ್ತೆಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.