Mysore Dasara 2024 – ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಈ ಬಾರಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವೊಂದು ಮಹತ್ತರ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಅಕ್ಟೋಬರ್ 3 ರಿಂದ ಅಕ್ಟೋಬರ್ 12 ರವರೆಗೆ ಒಟ್ಟು 21 ದಿನಗಳ ಕಾಲ ದೀಪಾಲಂಕಾರದ ಜೊತೆಗೆ ಅದ್ದೂರಿಯಾಗಿ (Mysore Dasara 2024) ಮಹೋತ್ಸವ ನಡೆಸಲು ತೀರ್ಮಾನಿಸಲಾಗಿದೆ.
ಈ ಸಂಬಂಧ ಬೆಂಗಳೂರಿನಲ್ಲಿ ನಡೆದ (Mysore Dasara 2024) ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯಅಕ್ಟೋಬರ್ 3 ರಿಂದ 12 ನೇ ರವರಗೆ ದಸರಾ ಮಹೋತ್ಸವ ನಡೆಯಲಿದೆ. ಅ.3ರಂದು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಅ.12ನೇ ತಾರೀಕು ಜಂಬೂ ಸವಾರಿ ನಡೆಯಲಿದೆ. ದಸರಾ ಮಹೋತ್ಸವವನ್ನು (Mysore Dasara 2024) ಯಾರು ಉದ್ಘಾಟನೆ ಮಾಡಬೇಕು ಎಂಬುದರ ತೀರ್ಮಾನ ಮಾಡಲು ಸಭೆಯಲ್ಲಿ ಸರ್ವಾನುಮತದಿಂದ ನನಗೆ ಅಧಿಕಾರ ಕೊಟ್ಟಿದ್ದು, ಕಾರ್ಯಕಾರಿ ಸಮಿತಿ ಮಾಡಿ ಅಲ್ಲಿ ಕೆಲ ನಿರ್ಣಯ ಮಾಡಲಾಗುತ್ತದೆ. ಈ ಬಾರಿ ಅದ್ಧೂರಿ, ಆಕರ್ಷಣೆ ಯಾಗಿ ದಸರಾ ಆಚರಣೆ ಮಾಡುತ್ತೇವೆ ಎಂದು ತಿಳಿಸಿದರು.
ದಸರಾ ಉತ್ಸವ (Mysore Dasara 2024) ಜನರ ಉತ್ಸವ ಆಗಬೇಕು. ಕೊರೊನಾ – ಬರದ ಕಾರಣಕ್ಕೆ ಕಳೆದ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡಲಾಗಲಿಲ್ಲ, ಆದರೆ ಈ ಬಾರಿಯ ದಸರಾ ಅದ್ಧೂರಿಯಾಗಿ ನಡೆಸೋಣ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ (Mysore Dasara 2024) ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು. ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ ಕೆಲಸಗಳ ಪ್ರದರ್ಶನ ಮತ್ತು ತಿಳುವಳಿಕೆ ಮೂಡಿಸಬೇಕು. ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ. (Mysore Dasara 2024) ಐತಿಹಾಸಿಕ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನಾವು ನೀಡುತ್ತೇವೆ. ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಬೇಕು. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು. ‘ಕರ್ನಾಟಕ ಸಂಭ್ರಮ -50’ ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು. ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. (Mysore Dasara 2024) ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಆಯೋಜನೆ ಮಾಡುವುದಕ್ಕಿಂತ ಈ ಬಾರಿಯ ದಸರಾದಲ್ಲಿ ವಿಶೇಷತೆ ಇರಲಿ ಎಂದರು.
ಇನ್ನೂ ಕಳೆದ ಬಾರಿ ದಸರಾ (Mysore Dasara 2024) ಮಹೋತ್ಸವಕ್ಕೆ 30 ಕೋಟಿ ರೂ. ಖರ್ಚು ಮಾಡಿದ್ದೆವು. ಈ ಬಾರಿ ವಿಜೃಂಭಣೆಯಿಂದ ಮಾಡೋಕೆ ಎಷ್ಟು ಖರ್ಚಾಗುತ್ತೋ ಅಷ್ಟು ಅನುದಾನ ನೀಡಲು ಕ್ರಮ ವಹಿಸಲಾಗುತ್ತದೆ. ಜೊತೆಗೆ ಗೋಲ್ಡ್ ಕಾರ್ಡ್ ದುರ್ಬಳಕೆ ಆಗದೇ ಇರೋ ರೀತಿ ಸಚಿವ ಮಹದೇವಪ್ಪ ಕ್ರಮ ತಗೆದುಕೊಳ್ತಾರೆ. (Mysore Dasara 2024) ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.