Sunday, June 22, 2025
HomeStateNamma Clinics : ಬೆಂಗಳೂರು ನಗರ ಜಿಲ್ಲೆಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶಗಳು: 48 ಹುದ್ದೆಗಳಿಗೆ ನೇರ...

Namma Clinics : ಬೆಂಗಳೂರು ನಗರ ಜಿಲ್ಲೆಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶಗಳು: 48 ಹುದ್ದೆಗಳಿಗೆ ನೇರ ಸಂದರ್ಶನ…!

Namma Clinics- ಬೆಂಗಳೂರು ನಗರ ಜಿಲ್ಲೆಯ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನವನ್ನು ಆಹ್ವಾನಿಸಲಾಗಿದೆ. ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ (National Urban Health Mission) ಅಡಿಯಲ್ಲಿ ಪಿಎಂ – ಅಭೀಮ್ (PM-ABHIM) ಯೋಜನೆಯಡಿ ಈ ನೇಮಕಾತಿ ನಡೆಯಲಿದೆ. ಒಟ್ಟು 48 ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಲಾಗಿದೆ.

Namma Clinics –  ನೇಮಕಾತಿಯ ಪ್ರಮುಖಾಂಶಗಳು:

  • ಒಟ್ಟು ಹುದ್ದೆಗಳು: 48
  • ನೇಮಕಾತಿ ಪ್ರಾಧಿಕಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ
  • ಯೋಜನೆ: ಪಿಎಂ – ಅಭೀಮ್, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ
  • ನೇಮಕಾತಿ ವಿಧಾನ: ನೇರ ಸಂದರ್ಶನ
  • ಗುತ್ತಿಗೆ ಅವಧಿ: ನಿಯಮಾನುಸಾರ
  • ಕಾರ್ಯನಿರ್ವಹಿಸುವ ಸ್ಥಳ: ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ, ಅತ್ತಿಬೆಲೆ, ಬೊಮ್ಮಸಂದ್ರ, ಚಂದಾಪುರ, ಜಿಗಣಿ, ಸರ್ಜಾಪುರ, ದೊಮ್ಮಸಂದ್ರ, ಆನೇಕಲ್, ಹುಣಸಮಾರನಹಳ್ಳಿ, ಮಾದನಾಯಕನಹಳ್ಳಿ, ಚಿಕ್ಕಬಾಣಾವರದಲ್ಲಿರುವ ನಮ್ಮ ಕ್ಲಿನಿಕ್‌ಗಳು.

Namma Clinics –  ಖಾಲಿ ಇರುವ ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ ಮಾಸಿಕ ವೇತನ (ರೂ.)
ವೈದ್ಯಾಧಿಕಾರಿಗಳು 19 60,000
ಶುಶ್ರೂಷಣಾಧಿಕಾರಿಗಳು 16 18,714
ಪ್ರಯೋಗಶಾಲಾ ತಂತ್ರಜ್ಞರು 13 16,515

Namma Clinics – ಹುದ್ದೆವಾರು ವಿದ್ಯಾರ್ಹತೆ ಮತ್ತು ವಯೋಮಿತಿ:

ವೈದ್ಯಾಧಿಕಾರಿಗಳು (Medical Officer):

  • ವಿದ್ಯಾರ್ಹತೆ: ಎಂಬಿಬಿಎಸ್ (MBBS) ಪದವಿ ಮತ್ತು ಕಡ್ಡಾಯವಾಗಿ ಇಂಟರ್ನ್‌ಶಿಪ್ ಪೂರ್ಣಗೊಳಿಸಿ ಕರ್ನಾಟಕ ವೈದ್ಯಕೀಯ ಮಂಡಳಿ (Karnataka Medical Council – KMC) ಯಲ್ಲಿ ನೋಂದಾಯಿಸಿರಬೇಕು.
  • ಗರಿಷ್ಠ ವಯೋಮಿತಿ: 60 ವರ್ಷಗಳು.

ಶುಶ್ರೂಷಣಾಧಿಕಾರಿಗಳು (Nursing Officer):

  • ವಿದ್ಯಾರ್ಹತೆ: ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಿಂದ ಬಿಎಸ್‌ಸಿ ನರ್ಸಿಂಗ್ (B.Sc Nursing) / ಜಿಎನ್‌ಎಂ (GNM) ತರಬೇತಿ ಮತ್ತು ಕರ್ನಾಟಕ ನರ್ಸಿಂಗ್ ಕೌನ್ಸಿಲ್ (Karnataka Nursing Council – KNC) ನಲ್ಲಿ ನೋಂದಾಯಿಸಿರಬೇಕು. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ವಯೋಮಿತಿ: ಸಾಮಾನ್ಯ ವರ್ಗದವರಿಗೆ 35 ವರ್ಷ, ಒಬಿಸಿ (OBC) ವರ್ಗದವರಿಗೆ 38 ವರ್ಷ, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.

Read this also : ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಕೂಡಲೇ ಅರ್ಜಿ ಸಲ್ಲಿಸಿ…!

ಪ್ರಯೋಗಶಾಲಾ ತಂತ್ರಜ್ಞರು (Laboratory Technician):

  • ವಿದ್ಯಾರ್ಹತೆ:
    • ಎಸ್‌ಎಸ್‌ಎಲ್‌ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಮೂರು ವರ್ಷದ ಕೋರ್ಸ್‌ನಲ್ಲಿ ಉತ್ತೀರ್ಣತೆ ಹೊಂದಿರಬೇಕು.
    • ಅಥವಾ ದ್ವಿತೀಯ ಪಿಯುಸಿ (PUC) ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ 2 ವರ್ಷದ ಕೋರ್ಸ್‌ನಲ್ಲಿ ಉತ್ತೀರ್ಣತೆ ಹೊಂದಿರಬೇಕು.
  • ನೋಂದಣಿ: ಪ್ರಯೋಗಶಾಲಾ ತಂತ್ರಜ್ಞರು ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿಯನ್ನು ಹೊಂದಿರಬೇಕು.
  • ವಯೋಮಿತಿ: ಸಾಮಾನ್ಯ ವರ್ಗದವರಿಗೆ 35 ವರ್ಷ, ಒಬಿಸಿ ವರ್ಗದವರಿಗೆ 38 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.

Namma Clinics –  ನೇಮಕಾತಿ ವಿಧಾನ:

ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಹ ಮೀಸಲಾತಿ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮಾತ್ರ ಸಾಮಾನ್ಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ನೇರ ಸಂದರ್ಶನದ ವಿವರಗಳು:

  • ದಿನಾಂಕ: 19-05-2025
  • ಸಮಯ: ಬೆಳಿಗ್ಗೆ 11:00 ಗಂಟೆಗೆ
  • ವಿಳಾಸ: ಜಿಲ್ಲಾ ಆರ್‌.ಸಿ.ಹೆಚ್‌ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ, ಹಳೇ ಟಿ.ಬಿ ಆಸ್ಪತ್ರೆ, ಹಳೇ ಮದ್ರಾಸ್ ರಸ್ತೆ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಹತ್ತಿರ, ಇಂದಿರಾನಗರ, ಬೆಂಗಳೂರು – 560038.

ಸೂಚನೆ: ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲೆಗಳು ಮತ್ತು ಅವುಗಳ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular