Narendra Modi – 2002ರಲ್ಲಿ ನಡೆದ ಗೋಧ್ರಾ ದುರಂತಕ್ಕೆ (Godhra Train Tragedy) ಕಾರಣವಾದ ಘಟನೆಗಳ ಆಧಾರದ ಮೇಲೆ ನಿರ್ಮಾಣವಾದ ‘ದಿ ಸಾಬರಮತಿ ರಿಪೋರ್ಟ್’ (The Sabarmati Report) ಚಿತ್ರ ಬಿಡುಗಡೆಯಾಗಿದ್ದು, ಈ ಸಿನೆಮಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಸಂಸದ್ ಭವನದ ಬಾಲಯೋಗಿ ಸಭಾಂಗಣದಲ್ಲಿ (Narendra Modi) ಪ್ರಧಾನಿ ನರೇಂದ್ರ ಮೋದಿ, ಸಂಸದರು ಹಾಗೂ ಚಿತ್ರತಂಡದವರು ಭಾಗಿಯಾಗಿ ಸಿನೆಮಾ ವೀಕ್ಷಣೆ ಮಾಡಿದ್ದಾರೆ. ಬಳಿಕ ಸೋಷಿಯಲ್ ಮಿಡಿಯಾದಲ್ಲಿ ’ದಿ ಸಾಬರಮತಿ ರಿಪೋರ್ಟ್’ ಸಿನೆಮಾ ಹಾಗೂ ಚಿತ್ರತಂಡವನ್ನು ಪ್ರಶಂಸೆ ಮಾಡಿದ್ದಾರೆ.
‘ದಿ ಸಾಬರಮತಿ ರಿಪೋರ್ಟ್’ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಣೆ ಮಾಡಿದ್ದಾರೆ. ಡಿ.2 ರಂದು ಸಂಸತ್ ಭವನದ ಬಾಲಯೋಗಿ ಸಭಾಂಗಣದಲ್ಲಿ ಸಂಸದರು ಹಾಗೂ ಚಿತ್ರತಂಡದೊಂದಿಗೆ ವೀಕ್ಷಣೆ ಮಾಡಿದ್ದಾರೆ. ನರೇಂದ್ರ ಮೋದಿ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವ ಜೆಪಿ ನಡ್ಡಾ ಕೂಡ ಸಿನಿಮಾ ವೀಕ್ಷಿಸಿದರು. ಚಿತ್ರತಂಡದವರಾದ ವಿಕ್ರಾಂತ್ ಮಾಸಿ, ಏಕ್ತಾ ಕಪೂರ್, ರಿದ್ಧಿ ಡೋಗ್ರ, ನಿರ್ದೇಶಕ ಧೀರಜ್ ಮೊದಲಾದವರು ಸಹ ಮೋದಿ ಜೊತೆ ಕುಳಿತು ಸಿನಿಮಾ ನೋಡಿದ್ದಾರೆ. ಬಳಿಕ ಮೋದಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ‘ಎನ್ಡಿಎ ಸಂಸದರ ಜೊತೆಗೂಡಿ ದಿ ಸಾಬರಮತಿ ರಿಪೋರ್ಟ್ ಸಿನಿಮಾ ನೋಡಿದೆ. ಚಿತ್ರತಂಡದ ಪ್ರಯತ್ನಕ್ಕೆ ನಾನು ಶ್ಲಾಘನೆ ವ್ಯಕ್ತಪಡಿಸುತ್ತೇನೆ’ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
ನರೇಂದ್ರ ಮೋದಿಯವರ ಪೋಸ್ಟ್ ಇಲ್ಲಿದೆ ನೋಡಿ: Click Here
ದಿ ಸಾಬರಮತಿ ರಿಪೋರ್ಟ್ (The Sabarmati Report) ಸಿನೆಮಾವನ್ನು ಧೀರಜ್ ಸರ್ನಾ ನಿರ್ದೇಶನ ಮಾಡಿದ್ದು, ಈ ಸಿನೆಮಾ ನ.15 ರಂದು ಬಿಡುಗಡೆಯಾಗಿದೆ. ಸಿನೆಮಾ ಬಿಡುಗಡೆಯಾದ ಮೊದಲನೇ ದಿನವೇ 1.10 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಏಕ್ತಾ ಕಪೂರ್, ಶೋಭಾ ಕಪೂರ್, ಅಮೂಲ್ ವಿ. ಮೋಹನ್, ಅನ್ಶೂಲ್ ಮೋಹನ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಕ್ರಾಂತ್ ಮಾಸಿ, ರಾಶಿ ಖನ್ನಾ, ರಿಧಿ ಡೋಗ್ರ, ಬರ್ಕಾ ಸಿಂಗ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 2002ರ ಫೆಬ್ರವರಿ 27ರಂದು ನಡೆದ ಗೋದ್ರಾ ರೈಲು ದುರಂತದ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ಮೂಡಿಬಂದಿದೆ. ಹಲವು ರಾಜ್ಯಗಳಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರಿಂದ ಹೊಗಳಿಕೆ ಸಿಕ್ಕ ಹಿನ್ನೆಲೆಯಲ್ಲಿ ಸಿನೆಮಾತಂಡ ಪುಲ್ ಖುಷ್ ಆಗಿದೆ ಎನ್ನಲಾಗಿದೆ.