Narendra Modi : ಸಂಸದರೊಂದಿಗೆ ’ದಿ ಸಾಬರಮತಿ ರಿಪೋರ್ಟ್’ ಸಿನೆಮಾ ವೀಕ್ಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ….!

Narendra Modi – 2002ರಲ್ಲಿ ನಡೆದ ಗೋಧ್ರಾ ದುರಂತಕ್ಕೆ (Godhra Train Tragedy) ಕಾರಣವಾದ ಘಟನೆಗಳ ಆಧಾರದ ಮೇಲೆ ನಿರ್ಮಾಣವಾದ ‘ದಿ ಸಾಬರಮತಿ ರಿಪೋರ್ಟ್’ (The Sabarmati Report) ಚಿತ್ರ ಬಿಡುಗಡೆಯಾಗಿದ್ದು, ಈ ಸಿನೆಮಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಸಂಸದ್ ಭವನದ ಬಾಲಯೋಗಿ ಸಭಾಂಗಣದಲ್ಲಿ (Narendra Modi) ಪ್ರಧಾನಿ ನರೇಂದ್ರ ಮೋದಿ, ಸಂಸದರು ಹಾಗೂ ಚಿತ್ರತಂಡದವರು ಭಾಗಿಯಾಗಿ ಸಿನೆಮಾ ವೀಕ್ಷಣೆ ಮಾಡಿದ್ದಾರೆ. ಬಳಿಕ ಸೋಷಿಯಲ್ ಮಿಡಿಯಾದಲ್ಲಿ ’ದಿ ಸಾಬರಮತಿ ರಿಪೋರ್ಟ್’ ಸಿನೆಮಾ ಹಾಗೂ ಚಿತ್ರತಂಡವನ್ನು ಪ್ರಶಂಸೆ ಮಾಡಿದ್ದಾರೆ.

Narendra modi watched the sabaramathi report movie 0

‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಣೆ ಮಾಡಿದ್ದಾರೆ. ಡಿ.2 ರಂದು ಸಂಸತ್ ಭವನದ ಬಾಲಯೋಗಿ ಸಭಾಂಗಣದಲ್ಲಿ ಸಂಸದರು ಹಾಗೂ ಚಿತ್ರತಂಡದೊಂದಿಗೆ ವೀಕ್ಷಣೆ ಮಾಡಿದ್ದಾರೆ. ನರೇಂದ್ರ ಮೋದಿ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಸಚಿವ ಜೆಪಿ ನಡ್ಡಾ ಕೂಡ ಸಿನಿಮಾ ವೀಕ್ಷಿಸಿದರು. ಚಿತ್ರತಂಡದವರಾದ ವಿಕ್ರಾಂತ್ ಮಾಸಿ, ಏಕ್ತಾ ಕಪೂರ್​, ರಿದ್ಧಿ ಡೋಗ್ರ, ನಿರ್ದೇಶಕ ಧೀರಜ್ ಮೊದಲಾದವರು ಸಹ ಮೋದಿ ಜೊತೆ ಕುಳಿತು ಸಿನಿಮಾ ನೋಡಿದ್ದಾರೆ. ಬಳಿಕ ಮೋದಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ‘ಎನ್​ಡಿಎ ಸಂಸದರ ಜೊತೆಗೂಡಿ ದಿ ಸಾಬರಮತಿ ರಿಪೋರ್ಟ್​ ಸಿನಿಮಾ ನೋಡಿದೆ. ಚಿತ್ರತಂಡದ ಪ್ರಯತ್ನಕ್ಕೆ ನಾನು ಶ್ಲಾಘನೆ ವ್ಯಕ್ತಪಡಿಸುತ್ತೇನೆ’ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

ನರೇಂದ್ರ ಮೋದಿಯವರ ಪೋಸ್ಟ್ ಇಲ್ಲಿದೆ ನೋಡಿ: Click Here

ದಿ ಸಾಬರಮತಿ ರಿಪೋರ್ಟ್ (The Sabarmati Report) ಸಿನೆಮಾವನ್ನು ಧೀರಜ್ ಸರ್ನಾ ನಿರ್ದೇಶನ ಮಾಡಿದ್ದು, ಈ ಸಿನೆಮಾ ನ.15 ರಂದು ಬಿಡುಗಡೆಯಾಗಿದೆ.‌  ಸಿನೆಮಾ ಬಿಡುಗಡೆಯಾದ ಮೊದಲನೇ ದಿನವೇ 1.10 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಏಕ್ತಾ ಕಪೂರ್​, ಶೋಭಾ ಕಪೂರ್​, ಅಮೂಲ್ ವಿ. ಮೋಹನ್, ಅನ್ಶೂಲ್ ಮೋಹನ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಕ್ರಾಂತ್ ಮಾಸಿ, ರಾಶಿ ಖನ್ನಾ, ರಿಧಿ ಡೋಗ್ರ, ಬರ್ಕಾ ಸಿಂಗ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 2002ರ ಫೆಬ್ರವರಿ 27ರಂದು ನಡೆದ ಗೋದ್ರಾ ರೈಲು ದುರಂತದ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಮೂಡಿಬಂದಿದೆ. ಹಲವು ರಾಜ್ಯಗಳಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರಿಂದ ಹೊಗಳಿಕೆ ಸಿಕ್ಕ ಹಿನ್ನೆಲೆಯಲ್ಲಿ ಸಿನೆಮಾತಂಡ ಪುಲ್ ಖುಷ್ ಆಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Next Post

Job Alert: Army Ordnance Corps ನಲ್ಲಿವೆ 723 ಹುದ್ದೆಗಳು, ಅರ್ಜಿ ಸಲ್ಲಿಕೆ ಆರಂಭ…!

Tue Dec 3 , 2024
Job Alert – ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ ನಲ್ಲಿ ಖಾಲಿಯಿರುವ 723 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಭಾರತೀಯ ಸೇನೆಗೆ ಸಾಮಾಗ್ರಿ ಮತ್ತು ವ್ಯವಸ್ಥಾಪನಾ ಬೆಂಬಲ ಒದಗಿಸುವಂತಹ ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ ನಲ್ಲಿ ಹಲವು ಹುದ್ದೆಗಳ ಭರ್ತಿಗೆ ನೇಮಕಾತಿ (Job Alert) ಪ್ರಕ್ರಿಯೆ ಆರಂಭಿಸಲಾಗಿದೆ. ಮೆಟೀರಿಯಲ್‌ ಅಸಿಸ್ಟಂಟ್‌, ಜೂನಿಯರ್‌ ಆಫೀಸ್‌ ಅಸಿಸ್ಟಂಟ್‌, ಟ್ರೇಡ್ಸ್‌ಮ್ಯಾನ್‌ ಮೇಟ್‌ ಸೇರಿ ಒಟ್ಟು 723 ಹುದ್ದೆಗಳಿದ್ದು, ಅರ್ಹ ಹಾಗೂ ಆಸಕ್ತರು ಡಿ.2 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, […]
Army Ordnance Corps 723 posts
error: Content is protected !!