ರಾಜ್ಯದಲ್ಲಿ ಕಾಂಗ್ರೇಸ್ ದುರಾಡಳಿತಕ್ಕೆ ಬೇಸತ್ತ ಜನತೆ ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಎನ್.ಡಿ.ಎ ಮೈತ್ರಿಗೆ ಸಂಪೂರ್ಣ ಬೆಂಬಲ ನೀಡಲಿದ್ದಾರೆ. ಅದೇ ಮಾದರಿಯಲ್ಲಿ ಗುಡಿಬಂಡೆ-ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲೂ ಸಹ ಎನ್.ಡಿ.ಎ ಮೈತ್ರಿ (NDA Alliance) ಕೂಟದ ಜಯಭೇರಿ ಶುರುವಾಗಿದೆ ಎಂದು ಕ್ಷೇತ್ರದ ಬಿಜೆಪಿ ಮುಖಂಡ ಹರಿನಾಥರೆಡ್ಡಿ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಗಜನಾಣ್ಯ ಪಟ್ಟುಸಾಲೆಯಲ್ಲಿ ಎನ್.ಡಿ.ಎ ಮೈತ್ರಿಕೂಟದ ವತಿಯಿಂದ ಹಮ್ಮಿಕೊಂಡಿದ್ದ ಹೆಲ್ಮೆಟ್ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

NDA Alliance – ಗ್ಯಾರಂಟಿ ಹೆಸರಲ್ಲಿ ರಾಜ್ಯ ದಿವಾಳಿ
ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೇಸ್ ಸರ್ಕಾರ ಕರ್ನಾಟಕವನ್ನು ದಿವಾಳಿ ಮಾಡುತ್ತಿದೆ. ರಾಜ್ಯದಲ್ಲಿ ಅಭಿವೃದ್ದಿ ಸಂಪೂರ್ಣವಾಗಿ ಶೂನ್ಯವಾಗಿದೆ. ಅದರ ಜೊತೆಗೆ ಕ್ಷೇತ್ರದಲ್ಲೂ ಸಹ ಅಭಿವೃದ್ದಿ ಶೂನ್ಯವಾಗಿದೆ. ರಸ್ತೆಗಳು ಸಂಪೂರ್ಣವಾಗಿ ಹದೆಗಟ್ಟೆದೆ. ರಸ್ತೆಗಳು ಹದೆಗಟ್ಟಿವೆ, (NDA Alliance) ಗ್ರಾಮೀಣ ಭಾಗಗಳಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿವೆ. ಇದನ್ನೆಲ್ಲಾ ಗಮನಿಸಿದ ಮತದಾರರು ಎನ್.ಡಿ.ಯ ಕಡೆ ಮುಖ ಮಾಡುತ್ತಿದ್ದಾರೆ. ಅದರ ಭಾಗವಾಗಿಯೇ ಗುಡಿಬಂಡೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನ, ಪಿ.ಎಲ್.ಡಿ ಬ್ಯಾಂಕ್, ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮಂಡಳಿ ಇದೀಗ ಎನ್.ಡಿ.ಎ ಮೈತ್ರಿ ಕೂಟದ ಪಾಲಾಗಿದೆ. ಅದೇ ರೀತಿ ಆದಷ್ಟು ಶೀಘ್ರದಲ್ಲೇ ಹಾಲು ಒಕ್ಕೂಟದ ಚುನಾವಣೆಯೂ ಸಹ ನಡೆಯಲಿದೆ. ಅದರಲ್ಲೂ ಎನ್.ಡಿ.ಎ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ ಎಂದರು.
ವಾಹನ ಸವಾರರ ಪ್ರಾಣ ರಕ್ಷಣೆಗೆ ‘ಉಚಿತ ಹೆಲ್ಮೆಟ್’ ಅಭಿಯಾನ
ಈಗಾಗಲೇ ಚಿಕ್ಕಬಳ್ಳಾಪುರದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಬಳಕೆ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ವಾಹನ ಸವಾರರ ಪ್ರಾಣ ಉಳಿಸುವಂತಹ ಉದ್ದೇಶದಿಂದ ಎನ್.ಡಿ.ಎ (NDA Alliance) ವತಿಯಿಂದ ಕ್ಷೇತ್ರದಲ್ಲಿರುವ ಎಲ್ಲಾ ದ್ವಿಚಕ್ರ ವಾಹನ ಸವಾರರಿಗೆ ಉಚಿತವಾಗಿ ಹೆಲ್ಮೆಟ್ ನೀಡಲಾಗುತ್ತದೆ. ಈ ಕಾರ್ಯಕ್ರಮದ ಉದ್ಘಾಟನೆಗೆ ಸಂಸದರಾದ ಡಾ.ಕೆ.ಸುಧಾಕರ್ ರವರು ಆಗಮಿಸಲಿದ್ದಾರೆ. ಅಂದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
“ಗೃಹಲಕ್ಷ್ಮಿ ಹಣ ಗುಳುಂ”: ಪಿ.ಎನ್. ಕೇಶವರೆಡ್ಡಿ ಆರೋಪ
ಬಳಿಕ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಮಾತನಾಡಿ, ಕಾಂಗ್ರೇಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ರಾಜ್ಯದಲ್ಲಿ ಆರ್ಥಿಕತೆ ಅದೋಗತಿಗೆ ತಲುಪುತ್ತಿದೆ. ಗ್ಯಾರಂಟಿಗಳನ್ನು ಕೊಡುತ್ತಿದ್ದೀವಿ ಅಂತಾ ಎಲ್ಲಾ ಹಣವನ್ನು ಅದಕ್ಕೆ ಬಳಸುತ್ತಿದ್ದಾರೆ. ಇದರಿಂದ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ಎಲ್ಲಾ ನಿಗಮ ಮಂಡಳಿಗಳ ಅನುದಾನ ಹಾಗೂ ಅದರಲ್ಲಿರುವ ಹಣವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಇದರಿಂದ ಆಯಾ ನಿಗಮ ಮಂಡಳಿಗಳ ವ್ಯಾಪ್ತಿಯ ಸಮುದಾಯಕ್ಕೆ ಸೌಲಭ್ಯಗಳು ಸಿಗುತ್ತಿಲ್ಲ. ಗೃಹ ಲಕ್ಷ್ಮೀ ಯೋಜನೆಯ 5 ಸಾವಿರ ಕೋಟಿ ಹಣವನ್ನು ಗುಳುಂ ಮಾಡಿದ್ದಾರೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ನಾನು ಸಂಚಾರ ಮಾಡಿದ್ದೇನೆ. ಒಂದು ರಸ್ತೆ ಸಹ ಸರಿಯಿಲ್ಲ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ (NDA Alliance) ಹರಿನಾಥರೆಡ್ಡಿ ಎಂ.ಎಲ್.ಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ. ಅವರನ್ನು ನಾವೆಲ್ಲರೂ ಗೆಲ್ಲಿಸಿಕೊಂಡು ಕ್ಷೇತ್ರವನ್ನು ಅಭಿವೃದ್ದಿ ಮಾಡಬೇಕು. ಅದೇ ರೀತಿ ಮುಂಬರುವ ಗ್ರಾಪಂ, ಜಿಪಂ, ತಾಪಂ ಹಾಗೂ ಪಟ್ಟಣ ಪಂಚಾಯತಿಗಳ ಚುನಾವಣೆಗಳಲ್ಲಿ ಎನ್.ಡಿ.ಎ ಕೂಟವನ್ನು ಗೆಲ್ಲಿಸಬೇಕು ಎಂದರು. Read this also : 10 ಸಾವಿರ ಸಂಬಳ ಇದ್ರೂ ಪರ್ಸನಲ್ ಲೋನ್ (Personal Loan) ಸಿಗುತ್ತಾ? ಹೌದು, ಆದ್ರೆ ಈ ವಿಷಯಗಳು ನಿಮಗೆ ತಿಳಿದಿರಲಿ..!
ಸಭೆಯಲ್ಲಿ ಉಪಸ್ಥಿತರಿದ್ದ ಪ್ರಮುಖರು
ಕಾರ್ಯಕ್ರಮದಲ್ಲಿ (NDA Alliance) ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥರೆಡ್ಡಿ, ಮುಖಂಡರಾದ ಜೆ.ಪಿ.ಚಂದ್ರಶೇಖರ್, ಜೆಡಿಎಸ್ ಅಧ್ಯಕ್ಷ ಮಂಜುನಾಥರೆಡ್ಡಿ ಹೆಲ್ಮೆಟ್ ವಿತರಣಾ ಕಾರ್ಯಕ್ರಮದ ಕುರಿತು ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಈ ಸಮಯದಲ್ಲಿ ಮುಖಂಡರಾದ ಗಜನಾಣ್ಯ ನಾಗರಾಜು, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಅಶ್ವತ್ಥರೆಡ್ಡಿ, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಗಂಗಿರೆಡ್ಡಿ, ಮುಂಖಡರಾದ ಪಾವಜೇನಹಳ್ಳಿ ನಾಗರಾಜರೆಡ್ಡಿ, ಬೈರಾರೆಡ್ಡಿ, ಅಪ್ಸರ್ ಪಾಷ, ವೇಣುಗೋಪಾಲ್, ಚಲಪತಿ, ಗಾಂಧಿ ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.
