Nepal Plane Crash ಬುಧವಾರ (ಜು.24) ಕಠ್ಮಂಡುವಿನ ತ್ರಿಭವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೂರ್ಯ ಏರ್‌ಲೈನ್ಸ್ ವಿಮಾನವೊಂದು ಟೇಕಾಫ್ ಆಗುವ ವೇಳೆ ಪತನಗೊಂಡಿದೆ. ಈ ವಿಮಾನದಲ್ಲಿ ಏರ್ ಸ್ಟಾಫ್ ಸಿಬ್ಬಂದಿ ಸೇರಿದಂತೆ 19 ಮಂದಿ ಇದ್ದರು ಎನ್ನಲಾಗಿದೆ. ಸದ್ಯ ಪರಿಹಾರ ಹಾಗೂ ರಕ್ಷಣಾ ಕಾರ್ಯ ಬರದಿಂದ ಸಾಗುತ್ತಿದೆ.
ಸದ್ಯ ಲಭ್ಯವಿರುವ ಮಾಹಿತಿಯ ಪ್ರಕಾರ ಸೂರ್ಯ ಏರ್‌ಲೈನ್ಸ್ ವಿಮಾನ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಖರಾಗೆ ಹಾರುತ್ತಿತ್ತು ಎನ್ನಲಾಗಿದೆ. (Nepal Plane Crash) ವಿಮಾನದಲ್ಲಿ ಸಾಮಾನ್ಯ ಪ್ರಯಾಣಿಕರಿಲಿಲ್ಲ, ಆದರೆ ತಾಂತ್ರಿಕ ತಂಡದ 19 ಸದಸ್ಯರು ವಿಮಾನದಲ್ಲಿದ್ದರು. ಪರಿಹಾರ ಹಾಗೂ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ಪತನದ ಬಳಿಕ ವಿಮಾನದಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ ಎಂದು ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿ ಹೇಳಿದ್ದಾರೆ ಎಂದು ಕೆಲವೊಂದು ಮಾದ್ಯಮಗಳು ವರದಿ ಮಾಡಿದೆ.
https://x.com/ShekharPujari2/status/1815996639397474636
ವಿಮಾನ ಪತನವಾಗುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ವೈದ್ಯಕೀಯ ತಂಡ ಸಿಬ್ಬಂದಿ ಆಗಮಿಸಿದ್ದಾರೆ. ಗಾಯಾಳು ಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬುಲೆನ್ಸ್ ಬಂದು ನಿಂತಿವೆ. ಅಪಘಾತಕ್ಕೆ ಕಾರಣ ಏನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ ದುರ್ಘಟನೆಗೆ ಒಳಗಾದ ವಿಮಾನದಲ್ಲಿ 19 ಮಂದಿ ಸಂಚಾರ ನಡೆಸುತ್ತಿದ್ದರು ಎಂದು ಹೇಳಲಾಗ್ತಿದ್ದು, ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಅನ್ನೋದರ ಕುರಿತ ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಪಘಾತ ನಡೆದ ಸ್ಥಳದಿಂದ ಇದುವರೆಗೆ ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಪೈಲೆಟ್ ಕ್ಯಾಪ್ಟನ್ ಮನೀಶ್ ಶಾಕ್ಯಾ (37) ಎಂಬುವವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.