ಕಾರಿನ ಪಾರ್ಕಿಂಗ್ ನಲ್ಲೆ ಮಹಿಳೆಯ ಮೇಲೆ ಅತ್ಯಾಚಾರ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ, ವೈರಲ್ ಆದ ವಿಡಿಯೋ….!

ನಾಗರೀಕ ಸಮಾಜದಲ್ಲಿ ಆಗಾಗ ಅತ್ಯಾಚಾರಗಳಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತದೆ. ಅತ್ಯಾಚಾರಿಗಳಿಗೆ ಕಠಿಣ ಕಾನೂನು ಜಾರಿಯಲ್ಲಿದ್ದರೂ ಕೆಲವರು ಮೃಗಗಳಂತೆ ಮಹಿಳೆಯರ ಮೇಲೆ ದೌರ್ಜನ್ಯವನ್ನು ಎಸಗುತ್ತಿರುತ್ತಾರೆ. ಇದೀಗ ಮಹಿಳೆಯೊಬ್ಬರನ್ನು ಹಿಂಬದಿಯಿಂದ ಬೆಲ್ಟ್ ಅನ್ನು ಕತ್ತಿಗೆ ಹಾಕಿ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಈ ವಿಡಿಯೋ ಅಲ್ಲಿನ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಅತ್ಯಾಚಾರಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೂ ಈ ಘಟನೆ ನ್ಯೂಯಾರ್ಕ್ ನಗರದಲ್ಲಿ ನಡೆದಿದೆ ಎನ್ನಲಾಗಿದೆ.

women raped in newyark city 1

ನ್ಯೂಯಾರ್ಕ್ ನಗರದ ಕಾರು ಪಾರ್ಕಿಂಗ್ ಪಕ್ಕದಲ್ಲಿರುವ ಪುಟಾಪಾಥ್ ಮೇಲೆ 45 ವರ್ಷದ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಆಕೆಯ ಮೇಲೆ ಅತ್ಯಾಚಾರ ನಡೆದಿದೆ. ನಡೆದುಕೊಂಡು ಹೋಗುತ್ತಿರುವ ಅಪರಿಚಿತ ವ್ಯಕ್ತಿಯೋರ್ವ ಮುಖಕ್ಕೆ ಮಾಸ್ಕ್ ಧರಿಸಿಕೊಂಡು ದಾಳಿ ಮಾಡಿದ್ದಾನೆ. ಬೆಲ್ಟ್ ನ್ನು ಹಿಂಬದಿಯಿಂದ ಆಕೆಯ ಕತ್ತಿಗೆ ಹಾಕಿದ್ದಾನೆ. ಬಳಿಕ ಆಕೆ ಏಕಾಏಕಿ ನೆಲಕ್ಕೆ ಉರುಳಿದ್ದಾಳೆ. ಬಿಡಿಸಿಕೊಳ್ಳಲು ತುಂಬಾನೆ ಪ್ರಯತ್ನ ಮಾಡಿದ್ದಾಳೆ. ಆದರೂ ಸಹ ಆಕೆಗೆ ಬಿಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬೆಲ್ಟ್ ಮತಷ್ಟು ಬಿಗಿಯಾಗಿ, ಮಹಿಳೆ ಪ್ರಜ್ಞೆ ತಪ್ಪಿದ್ದಾಳೆ. ಬಳಿಕ ಮಹಿಳೆಯನ್ನು ಎಳೆದುಕೊಂಡು ಹೋಗಿ ಎರಡು ಕಾರು ಪಾರ್ಕ್ ಮಾಡಿರುವ ನಡುವೆ ಆಕೆಯ ಬಳಿಯಿದ್ದ ವಸ್ತುಗಳು ಹಾಗೂ ಹಣವನ್ನು ಕಸಿದುಕೊಂಡಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ವೆಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.

ಇನ್ನೂ ಮಹಿಳೆ ಕಾರು ಪಾರ್ಕಿಂಗ್ ನಲ್ಲಿ ಪ್ರಜ್ಞಾಹೀನ ಸ್ಥೀತಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳಿಯರು ಆಕೆ ನೆರವಿಗೆ ಧಾವಿಸಿದ್ದಾರೆ. ಆಕೆಯ ಪರಿಸ್ಥಿತಿಯನ್ನು ಅರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಮಹಿಳೆಯ ಸ್ಥಿತಿ ಸ್ಥಿರವಾಗಿದೆ. ಅತ್ಯಾಚಾರ ಮಾಡಿದವನು ಪರಾರಿಯಾಗಿದ್ದಾನೆ. ಮಹಿಳೆಯ ಕಡೆಯವರು ಈ ಸಂಬಂಧ ದೂರು ಸಹ ದಾಖಲು ಮಾಡಿದ್ದಾರೆ. ಮಹಿಳೆ ತೀವ್ರ ಆಘಾತಕ್ಕೆ ಒಳಗಾಗಿದ್ದು, ಆಕೆ ಚೇತರಿಸಿಕೊಳ್ಳು ಹಲವು ದಿನಗಳ ಅವಶ್ಯಕತೆಯಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.

ಇನ್ನೂ ಸಿಸಿಟಿವಿಯನ್ನು ನ್ಯೂಯಾರ್ಕ್ ಪೊಲೀಸರು ಪರಿಶೀಲನೆ ನಡೆಸಿದ್ದು, ಪರಾರಿಯಾದ ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ನ್ಯೂಯಾರ್ಕ್ ನಲ್ಲಿ ಇಂತಹುದೇ ಘಟನೆಗಳು ನಡೆದಿರುವ ಸಾದ್ಯತೆಯಿರುವ ಬಗ್ಗೆ ಹಾಗೂ ವ್ಯವಸ್ಥಿತ ಗ್ಯಾಂಗ್ ಒಂದು ಈ ಕೃತ್ಯಗಳನ್ನು ನಡೆಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *

Scroll to Top