ಸಮಾಜದಲ್ಲಿ ಪ್ರೀತಿಸಿ ತಮ್ಮ ಪ್ರೀತಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಮದುವೆಯಾಗುವ ಅನೇಕ ಜೋಡಿಗಳನ್ನು ನೋಡಿದ್ದೇವೆ. ಅದೇ ರೀತಿ ಪ್ರೀತಿಗೆ ಪೋಷಕರು ಒಪ್ಪಲಿಲ್ಲ ಎಂಬ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಜೋಡಿಗಳ ಬಗ್ಗೆ ಸಹ ಕೇಳಿದ್ದೇವೆ. ಆದರೆ ಇಲ್ಲೊಂದು ಜೋಡಿ ಪ್ರೀತಿಸಿ ಮದುವೆ ಸಹ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ವಿಜಯಪುರ ನಗರದ ಹೊರವಲಯದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಮನೋಜ್ ಕುಮಾರ್ ಪೋಳ (30), ರಾಖಿ (23) ನೇಣಿಗೆ ಶರಣಾದ ದಂಪತಿಯಾಗಿದ್ದಾರೆ. ನಾಲ್ಕು ತಿಂಗಳ ಹಿಂದೆಯಷ್ಟೆ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ನೇಣಿಗೆ ಶರಣಾಗಿದ್ದಾರೆ. ಪರಸ್ಪರ ಇಬ್ಬರೂ ನಾಲ್ಕು ತಿಂಗಳಿನಿಂದ ಪ್ರೀತಿಸಿಕೊಂಡು ಮದುವೆಯಾಗಿದ್ದಾರೆ. ಕಳೆದ ಸೋಮವಾರ ತಡರಾತ್ರಿ ಊಟ ಮಾಡಿದ ಬಳಿಕ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೋಜ್ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದಾಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೂ ಮನೆಯಲ್ಲಿ ಯಾರು ಇಲ್ಲದ ವೇಳೆ ಈ ನವ ದಂಪತಿ ನೇಣಿಗೆ ಶರಣಾಗಿದ್ದಾರೆ. ಮನೋಜ್ ಕುಮಾರ್ ತಾಯಿ ಭಾರತಿ ತಮ್ಮ ಮಗಳ ಊರಿಗೆ ಹೋಗಿದ್ದರಂತೆ. ಊರಿನಿಂದ ವಾಪಸ್ಸಾದ ಬಳಿಕ ಮನೆಯಲ್ಲಿ ದಂಪತಿ ನೇಣು ಹಾಕಿಕೊಂಡಿರುವುದು ತಿಳಿದಿದೆ. ಇನ್ನೂ ಜೋಡಿಯ ಆತ್ಮಹತ್ಯೆಗೆ ನಿಖರ ಕಾರಣ ಮಾತ್ರ ತಿಳಿದು ಬಂದಿಲ್ಲ. ಇನ್ನೂ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದಂತಹ ಜಲನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯ ಕುರಿತು ತನಿಖೆ ನಡೆಸಿದ ಬಳಿಕ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾದರೂ ಏಕೆ ಎಂಬ ಮಾಹಿತಿ ಹೊರಬೀಳಲಿದೆ ಎಂದು ತಿಳಿದುಬಂದಿದೆ.