ರಾಜ್ಯ ರಾಜಕಾರಣದಲ್ಲಿ ‘ನವೆಂಬರ್ ಕ್ರಾಂತಿ’ಯ (November Kranti) ಮಾತುಗಳು ಮತ್ತೆ ಸದ್ದು ಮಾಡಿವೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ನವೆಂಬರ್ 21ರಂದು ಮುಖ್ಯಮಂತ್ರಿಯಾಗಿ (CM) ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪತ್ರಕರ್ತರ ಪ್ರಶ್ನೆಗೆ ಕೆಂಡಾಮಂಡಲವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ‘ಒಳ ರಾಜಕೀಯ’ದ (Inner Politics) ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ.

November Kranti – “ನಿನಗೆ ಹೇಳಿದ್ರಾ? ನಿನಗೆ ಹೇಗೆ ಗೊತ್ತಾಯ್ತು?” – ಸಿಎಂ ಸಿದ್ದು ಗರಂ!
“ನವೆಂಬರ್ 21ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಅನ್ನೋ ಸುದ್ದಿ ಇದೆಯಲ್ಲ, ಅದ್ರಲ್ಲಿ ಎಷ್ಟು ಸತ್ಯ?” ಎಂದು ಪತ್ರಕರ್ತರೊಬ್ಬರು ಕೇಳಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಾಮಂಡಲರಾದರು. ಏರು ಧ್ವನಿಯಲ್ಲಿ ಪ್ರತಿಕ್ರಿಯಿಸಿದ ಅವರು, “ನಿನಗೆ ಹೇಳಿದ್ರಾ? ನಿನ್ಗೆ ಹೇಗೆ ಗೊತ್ತಾಯ್ತು? ಯಾವ ಪತ್ರಿಕೆಯಲ್ಲಿ ನೋಡಿದೀಯಾ? ನಾನು ಎಲ್ಲ ಪತ್ರಿಕೆ ಓದುತ್ತೇನೆ. ನಾನು ಎಲ್ಲೂ ನೋಡಿಲ್ಲ” ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಈ ಕೋಪದ ಪ್ರತಿಕ್ರಿಯೆ ಈಗ ಕಾಂಗ್ರೆಸ್ ಒಳ ರಾಜಕೀಯದ ಚರ್ಚೆಗೆ ಮತ್ತಷ್ಟು ಇಂಬು ಕೊಟ್ಟಿದೆ. ಸಿಎಂ ಮತ್ತು ಡಿಸಿಎಂ ನಡುವಿನ ‘ಅಧಿಕಾರ ಹಂಚಿಕೆ’ ವಿವಾದ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.
November Kranti – ಡಿಕೆಶಿ ಕಡೆಯಿಂದ ‘ನವೆಂಬರ್ ಕ್ರಾಂತಿ’ಯ ಸಂದೇಶ ಹೈಕಮಾಂಡ್‌ಗೆ?
ಪಕ್ಷದ ಆಂತರಿಕ ವರದಿಗಳ ಪ್ರಕಾರ, ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ (High Command) ಗೂ, ತಮ್ಮ ಆಪ್ತ ಶಾಸಕರಿಗೂ ನವೆಂಬರ್ ತಿಂಗಳಲ್ಲಿ ‘ಕ್ರಾಂತಿ’ಯಾಗುವ ಬಗ್ಗೆ ಸಂದೇಶ ರವಾನಿಸಿದ್ದಾರಂತೆ. ನವೆಂಬರ್ 21ರೊಳಗೆ ತಾನೇ ಸಿಎಂ ಆಗಬೇಕು ಎಂದು ಡಿಕೆಶಿ ಹೈಕಮಾಂಡ್‌ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಅಷ್ಟೇ ಅಲ್ಲದೆ, ಡಿಕೆಶಿ ಅವರು ಸಿದ್ದರಾಮಯ್ಯ ಅವರ ಆಪ್ತರೊಬ್ಬರಿಗೂ ಕರೆ ಮಾಡಿ, “ನಿಗದಿತ ದಿನಾಂಕದೊಳಗೆ ಬದಲಾವಣೆ ಆಗದಿದ್ದರೆ ಮುಂದೇನು ಮಾಡಬೇಕೆಂದು ನನಗೆ ಗೊತ್ತಿದೆ” ಎಂಬ ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಇದೇ ಸಂದೇಶವನ್ನು ಅವರು ರಾಹುಲ್ ಗಾಂಧಿ (Rahul Gandhi) ಅವರ ಆಪ್ತರ ಮೂಲಕ ‘ಪಕ್ಷದ ಹಿತಕ್ಕಾಗಿ ತೀರ್ಮಾನ ತೆಗೆದುಕೊಳ್ಳುವಂತೆ’ ಭಾವನಾತ್ಮಕವಾಗಿ ರವಾನಿಸಿದ್ದಾರೆ ಎಂದೂ ಹೇಳಲಾಗಿದೆ.
November Kranti – ಸಿದ್ದರಾಮಯ್ಯ ಪಾಳೆಯದಲ್ಲಿ ತೀವ್ರ ಚರ್ಚೆ
ಡಿಕೆಶಿ ನಿಗದಿಪಡಿಸಿರುವ ‘ಡೆಡ್‌ಲೈನ್’ ಮಾತುಗಳು ಈಗ ಸಿಎಂ ಸಿದ್ದರಾಮಯ್ಯ ಪಾಳೆಯದಲ್ಲಿಯೂ ಚರ್ಚೆಗೆ ಗ್ರಾಸವಾಗಿವೆ. “ಇದು ನಿಜವೇ? ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸುತ್ತಾ?” ಎಂಬ ಪ್ರಶ್ನೆಗಳು ಸಿಎಂ ಬೆಂಬಲಿಗರನ್ನು ಕಾಡುತ್ತಿವೆ. ಹಿರಿಯ ನಾಯಕರು ಈ ಬಗ್ಗೆ ಯಾವುದೇ ಅಭಿಪ್ರಾಯ ನೀಡದಿದ್ದರೂ, ಸಿಎಂ ಸಿದ್ದರಾಮಯ್ಯ ಅವರ ಕೋಪದ ಪ್ರತಿಕ್ರಿಯೆಯೇ ಈ ವಿಷಯಕ್ಕೆ ಮಹತ್ವ ನೀಡಿದೆ.

November Kranti – ನವೆಂಬರ್‌ನಲ್ಲಿ ರಾಜಕೀಯ ತಿರುವು?
ಡಿಕೆ ಶಿವಕುಮಾರ್ ಅವರು ನವೆಂಬರ್‌ನಲ್ಲಿ ಮೂರು ದಿನಾಂಕಗಳನ್ನು ಸಿಎಂ ಬದಲಾವಣೆಗೆ ನಿಗದಿ ಮಾಡಿಕೊಂಡಿದ್ದಾರೆ ಎಂಬ ಚರ್ಚೆಯೂ ಇದೆ, ಆದರೆ ಅದು ಯಾವುದು ಎಂಬುದು ಸ್ಪಷ್ಟವಾಗಿಲ್ಲ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವಿನ ‘ಅಧಿಕಾರ ಹಂಚಿಕೆ ಸೂತ್ರದ’ (Power-Sharing Formula) ಬಗ್ಗೆ ಹೈಕಮಾಂಡ್ ಹಂತದಲ್ಲಿ ಎಷ್ಟು ಗಂಭೀರವಾಗಿ ಮಾತುಕತೆ ನಡೆಯುತ್ತಿದೆ ಎಂಬುದೇ ಈಗ ರಾಜ್ಯ ರಾಜಕೀಯದ ಹಾಟ್ ಟಾಪಿಕ್ ಆಗಿದೆ. Read this also : ನವೆಂಬರ್ 1 ರಿಂದ ಬ್ಯಾಂಕ್ ವಹಿವಾಟುಗಳಲ್ಲಿ ದೊಡ್ಡ ಬದಲಾವಣೆಗಳು: ನಿಮ್ಮ ಹಣಕಾಸು ಮೇಲೆ ನೇರ ಪರಿಣಾಮ!
ಸದ್ಯಕ್ಕೆ, ಸಿಎಂ ಸಿದ್ದರಾಮಯ್ಯನವರ ಐದು ವರ್ಷಗಳ ಪೂರ್ಣಾವಧಿಯ ಹೇಳಿಕೆಗಳು ಮತ್ತು ಡಿಕೆಶಿ ಅವರ ‘ನವೆಂಬರ್ ಡೆಡ್‌ಲೈನ್’ ಪ್ರಚಾರದ ನಡುವೆ ಕಾಂಗ್ರೆಸ್ ಪಕ್ಷದೊಳಗೆ ಮತ್ತೆ ಕಿಚ್ಚು ಹತ್ತಿದೆ. ನವೆಂಬರ್ ತಿಂಗಳು ರಾಜ್ಯ ರಾಜಕಾರಣಕ್ಕೆ ಮತ್ತೊಂದು ದೊಡ್ಡ ತಿರುವು ನೀಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
