ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರನ್ನು ‘ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್’ (ವಿಬಿ-ಜಿರಾಮ್ ಜಿ) ಎಂದು ಬದಲಿಸಿರುವುದು (NREGA name change) ಗ್ರಾಮೀಣ ಜನರಿಗೆ ಮಾಡುತ್ತಿರುವ ದೊಡ್ಡ ವಂಚನೆಯಾಗಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ಪಿ. ಮುನಿವೆಂಕಟಪ್ಪ ಕಿಡಿ ಕಾರಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಸಿಪಿಎಂ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

NREGA name change – ಗಾಂಧಿ ಹೆಸರಿನ ಯೋಜನೆಯ ಹತ್ಯೆ
ಜನವರಿ 30 ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವಾಗಿದ್ದು, ಅಂದೇ ಅವರ ಹೆಸರಿನಲ್ಲಿ ಜಾರಿಯಲ್ಲಿದ್ದ ಮಹತ್ವದ ಯೋಜನೆಯನ್ನು ಕೇಂದ್ರ ಸರ್ಕಾರ ಕೊಲೆ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವು ಯಾವಾಗಲೂ ಶ್ರೀಮಂತರ ಪರವಾಗಿಯೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಇದೀಗ ನರೇಗಾ ಹೆಸರನ್ನು ಬದಲಿಸಿ ಅದರಲ್ಲಿ ತಂದಿರುವ ಮಾರ್ಪಾಡುಗಳು ಕೂಲಿಕಾರರ ಹೊಟ್ಟೆ ಮೇಲೆ ಬರೆ ಎಳೆದಂತಿದೆ. ಏಪ್ರಿಲ್‌ನಿಂದ ಜಾರಿಗೆ ಬರಲಿರುವ ಈ ಹೊಸ ಕಾಯ್ದೆಯು ಭ್ರಷ್ಟಾಚಾರ ತಡೆಯುವ ನೆಪದಲ್ಲಿ ಗ್ರಾಮೀಣ ಭಾಗದ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಅವರು ದೂರಿದರು.
Read this also : ಹ್ಯಾಟ್ಸಾಫ್ ಬ್ರೋ.. ರೀಲ್ಸ್ ಮಾಡಿದರೆ ಇವರಂತೆ ಇರಬೇಕು! ಈ ಮೂವರು ಗೆಳೆಯರ ಕೆಲಸಕ್ಕೆ ಸೋಶಿಯಲ್ ಮೀಡಿಯಾ ಫಿದಾ
ಬಡವರ ವಿರೋಧಿ ನೀತಿಗಳ ವಿರುದ್ಧ ಎಚ್ಚರಿಕೆ
ಗ್ರಾಮೀಣರಿಗೆ ಅತ್ಯಂತ ಉಪಯುಕ್ತವಾಗಿರುವ ಮೂಲ ನರೇಗಾ ಕಾಯ್ದೆಯನ್ನೇ ಮುಂದುವರಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಅವರು ಇದೇ ವೇಳೆ ಎಚ್ಚರಿಕೆ ನೀಡಿದರು. ಬಳಿಕ ಮಾತನಾಡಿದ ಸಿಪಿಎಂ ಮುಖಂಡ ಶ್ರೀನಿವಾಸ್ ಅವರು, ಗ್ರಾಮೀಣ ಭಾಗದ ಜನರು (NREGA name change) ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಎಡಪಕ್ಷಗಳು ಮತ್ತು ಕಾಂಗ್ರೆಸ್ ಸರ್ಕಾರ ಸೇರಿ ಈ ಯೋಜನೆಯನ್ನು ತಂದಿದ್ದವು. ಆದರೆ ಪ್ರಸ್ತುತ ಕೇಂದ್ರ ಸರ್ಕಾರವು ಶ್ರೀಮಂತರಿಗೆ ಅನುಕೂಲವಾಗುವಂತಹ ನೀತಿಗಳನ್ನು ರೂಪಿಸುತ್ತಿದ್ದು, ಇದು ಕಾರ್ಮಿಕರು ಹಾಗೂ ರೈತರ ಜೀವನಕ್ಕೆ ಮಾರಕವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹೋರಾಟಕ್ಕೆ ಸಾಥ್ ನೀಡಿದ ಕಾರ್ಯಕರ್ತರು
ಈ ಕೂಡಲೇ ಬಡವರ ವಿರೋಧಿಯಾಗಿರುವ ಈ ಹೊಸ ಕಾಯ್ದೆಯನ್ನು ಹಿಂಪಡೆಯಬೇಕೆಂದು ಅವರು ಆಗ್ರಹಿಸಿದರು. ಈ ಸತ್ಯಾಗ್ರಹದಲ್ಲಿ (NREGA name change) ಸಿಪಿಎಂ ತಾಲೂಕು ಸದಸ್ಯರಾದ ಬಿ. ಜಯರಾಮ್ ರೆಡ್ಡಿ, ತಾಲೂಕು ಕಾರ್ಯದರ್ಶಿ ವೆಂಕಟರಾಜು, ಮುಖಂಡರಾದ ಆದಿನಾರಾಯಣಸ್ವಾಮಿ, ಲಕ್ಷ್ಮಿನಾರಾಯಣ ಸೇರಿದಂತೆ ಮಸಣ ಕಾರ್ಮಿಕರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
