Nutritious Food – ಇತ್ತೀಚಿನ ದಿನಗಳಲ್ಲಿ, ನಮ್ಮ ಜೀವನಶೈಲಿ ವೇಗವಾಗಿ ಬದಲಾಗಿದೆ. ಜಂಕ್ ಫುಡ್‌ಗೆ ಮನಸೋತ ನಾವು, ನಮ್ಮ ದೇಹಕ್ಕೆ ನಿಜವಾಗಿಯೂ ಅಗತ್ಯವಾದ ಪೌಷ್ಟಿಕ ಆಹಾರವನ್ನು ಮರೆಯುತ್ತಿದ್ದೇವೆ. ಪ್ರತಿಯೊಬ್ಬರೂ ಆರೋಗ್ಯಕರ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವನೆ ಮಾಡುವುದು ಅತ್ಯಗತ್ಯವಾಗಿದ್ದು, ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಸೆ.1 ರಿಂದ ಸೆ.7ರ ತನಕ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದ ಮೂಲಕ ಕಾನೂನು ಅರಿವು ನೆರವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಗುಡಿಬಂಡೆ ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಸವಿತಾ ರುದ್ರಗೌಡ ಚಿಕ್ಕನಗೌಡರ್ ತಿಳಿಸಿದರು.
Nutritious Food – ಕಾನೂನು ಜಾಗೃತಿ ಮತ್ತು ಪೌಷ್ಟಿಕ ಆಹಾರದ ಅರಿವು
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ರವರುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯರಿಗೆ ಹಸಿವಿಗಾಗಿ ಆಹಾರ ಮಾಡುವ ರೂಢಿಯಿದೆಯೇ ಹೊರತು, ಯಾವುದು ಪೌಷ್ಟಿಕ ಆಹಾರ, ಯಾವುದು ಪೌಷ್ಟಿಕ ಆಹಾರವಲ್ಲ ಎಂಬ ತಿಳಿವಳಿಕೆಯ ಕೊರತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು. ಆರೋಗ್ಯದ ಅಭಿವೃದ್ಧಿಗೆ ಪೂರಕವಾದ ಆಹಾರ ಪದಾರ್ಥಗಳನ್ನು ಸೇವಿಸದ ಪರಿಣಾಮ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. Read this also : ಉತ್ತಮ ನಿದ್ರೆ ಬೇಕೇ? ನಿಮ್ಮ ನಿದ್ರೆ ಕದಿಯುವ 4 ಕೆಟ್ಟ ಅಭ್ಯಾಸಗಳು: ಪರಿಹಾರ ಇಲ್ಲಿದೆ..!
Nutritious Food – ಸೆಪ್ಟೆಂಬರ್ 1ರಿಂದ 7 ತನಕ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ
ಈ ನಿಟ್ಟಿನಲ್ಲಿ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕಿದೆ. ಇಂದಿನ ದಿನಗಳಲ್ಲಿ ಜನರು ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುವುದನ್ನೇ ಮರೆತಿದ್ದಾರೆ ಇದರಿಂದ ಮನುಷ್ಯ ದೈಹಿಕವಾಗಿ ಮತ್ತು ಮಾನಸಿಕವಾಗಿ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದೂ, ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯಕರ ಸದೃಢ ದೇಹ ಮತ್ತು ಪೌಷ್ಟಿಕಾಂಶಯುತ ಆಹಾರ ಅತ್ಯಗತ್ಯ ಎಂಬುದನ್ನು ಮನವರಿಕೆ ಮಾಡಲು ಪ್ರತಿ ವರ್ಷ ಸೆಪ್ಟೆಂಬರ್ 1ರಿಂದ 7 ತನಕ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದ ಮೂಲಕ ಕಾನೂನು ಅರಿವು ನೆರವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
Nutritious Food – ಪೌಷ್ಟಿಕ ಆಹಾರದ ಕುರಿತು ಮಾಹಿತಿ
ಬಳಿಕ ಸಂಪನ್ಮೂಲ ವ್ಯಕ್ತಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಿ.ಎಂ. ರಫೀಕ್ ಮಾತನಾಡಿ, ರಾಷ್ಟ್ರ ಬಲಿಷ್ಠವಾಗಬೇಕಾದರೆ ಶಕ್ತಿಯುತ ಯುವ ಸಮೂಹ ನಿರ್ಮಾಣವಾಗಬೇಕಿದೆ. ವಿದ್ಯಾರ್ಥಿಗಳು ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯದಿಂದ ಇದ್ದರೆ ಮಾತ್ರ ನವ ಭಾರತ ನಿರ್ಮಾಣ ಮಾಡಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆರು ಪೌಷ್ಟಿಕ ಆಹಾರದ ಬಗ್ಗೆ ಜನರಿಗೆ, ಮಕ್ಕಳಿಗೆ ತಿಳುವಳಿಕೆ ಮಾಡಿಸುತ್ತಿದ್ದಾರೆ. ಎಲ್ಲಾ ವಯೋಮಾನದವರು ಸಹ ಹಣ್ಣು, ತರಕಾರಿಗಳನ್ನು ಹೆಚ್ಚು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ನೇರಳೆ ಹಣ್ಣು, ಪಪ್ಪಾಯ, ಬಾಳೆ ಹಣ್ಣು ಸೇರಿದಂತೆ ದೇಹಕ್ಕೆ ಶಕ್ತಿ ನೀಡುವ ಹಣ್ಣುಗಳ ಸೇವನೆ ಅಗತ್ಯ ಎಂದರು.
ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಅಶ್ವತ್ಥ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತರು, ಸಿಡಿಪಿಒ ಇಲಾಖೆಯ ಸಿಬ್ಬಂದಿ, ವಕೀಲರು, ನ್ಯಾಯಾಲಯದ ಸಿಬ್ಬಂದಿ ಸುರೇಶ್, ಸಾರ್ವಜನಿಕರು ಹಾಗೂ ಕಕ್ಷಿದಾರರು ಸೇರಿದಂತೆ ಹಲವರಿದ್ದರು.