Onake Obavva Jayanthi – ಬಾಗೇಪಲ್ಲಿ ತಾಲೂಕು ಛಲವಾದಿ ಮಹಾಸಭಾತಿಯಿಂದ ನ.29ರ ಶುಕ್ರವಾರ ವೀರವನಿತೆ ಒನಕೆ ಓಬವ್ವ ಜಯಂತೋತ್ಸವ 303 ನೇ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದು ಛಲವಾದಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಛಲವಾದಿ ಮಹಾಸಭಾ ತಾಲೂಕು ನಿಕಟಪೂರ್ವ ಅಧ್ಯಕ್ಷ ಎನ್.ಶಿವಣ್ಣ ಮನವಿ ಮಾಡಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವೀರವನಿತೆ ಒನಕೆ ಓಬವ್ವ ಸಾಹಸ, ದಿಟ್ಟತನದಿಂದ ಹೈದರಾಲಿಯ ಸೈನ್ಯವನ್ನು ಧೈರ್ಯದಿಂದ ಹೋರಾಡಿ ಹಿಮ್ಮೆಟ್ಟಿಸಿ ಚಿತ್ರದುರ್ಗವನ್ನು ರಕ್ಷಣೆ ಮಾಡಿರುವುದು ನಮ್ಮ ಸಮುದಾಯದವರು ಎಂಬುದು ಹೆಮ್ಮೆಯ ವಿಚಾರ ಎಂದ ಅವರು ಈ ನಿಟ್ಟಿನಲ್ಲಿ ಇಂತಹ ಮಹಾನ್ ವೀರವನಿತೆಯ 303ನೇ ಜಯಂತಿ ಕಾರ್ಯಕ್ರಮವನ್ನು ಛಲವಾದಿ ಮಹಾಸಭಾವತಿಯಿಂದ ಇದೇ ತಿಂಗಳ 29ರ ಶುಕ್ರವಾರ ಪುರಸಭೆ ಕಚೇರಿ ಮುಂಭಾಗದಿಂದ ಡಾ.ಎಚ್.ಎನ್.ವೃತ್ತದವರೆಗೆ ಪಟ್ಟಣದ ಮುಖ್ಯರಸ್ತೆಯಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಿ ನಂತರ ಪಟ್ಟಣದ ಧ್ವಾರಕಾ ಪಾರ್ಟಿ ಹಾಲ್‍ನಲ್ಲಿ ವೇಧಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಅದ್ದೂರಿಯಾಗಿ ಕಾರ್ಯಕ್ರಮವನ್ನು ಆಚರಿಸಲಾಗುವುದು ಈ ಕಾರ್ಯಕ್ರಮದಲ್ಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ವೀರವನಿತೆ ಒನಕೆ ಓಬವ್ವ ರವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ರಜ್ಯ ಗೃಹ ಸಚಿವ ಜಿ.ಪರಮೇಶ್ವರ್, ಸಂಸದ ಡಾ.ಕೆ.ಸುಧಾಕರ್, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರಾದ ವಾಣಿ ಕೆ.ಶಿವರಾಂ ಮತ್ತಿತರರು ಮುಖ್ಯ ಅಥಿತಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಛಲವಾದಿ ಮಹಾಸಭಾ ಮುಖಂಡ ಟಿ.ರಾಮಪ್ಪ ಮಾತನಾಡಿ, ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಣಿಕವಾಗಿ ಹಾಗೂ ರಾಜಕೀಯವಾಗಿ ಛಲವಾದಿ ಸಮುದಾಯ ಹಿಂದುಳಿದ ಸಮುದಾಯವಾಗಿದೆ. ಬಾಗೇಪಲ್ಲಿ ತಾಲೂಕಿನಲ್ಲಿ ಸುಮಾರು 18 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ಸಹ ವಿವಿಧ ರಾಜಕೀಯ ಪಕ್ಷಗಳು ನಮ್ಮ ಸಮುದಾಯವನ್ನು ಕಡೆಗಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು ಸಮುದಾಯದವರು ಒಗ್ಗಟ್ಟಿನಿಂದ ಸಂಘಟಿತರಾಗಿ ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ನಮ್ಮ ಸಮುದಾಯದವರನ್ನು ಗುರ್ತಿಸುವ ರೀತಿಯಲ್ಲಿ ಬೆಳೆಯಬೇಕೆಂದರು. ಈ ಸಂದರ್ಭದಲ್ಲಿ ಛಲವಾದಿ ಮುಖಂಡರಾದ ಕೆ.ವಿ.ರಮೇಶ್, ಆನಂದ್, ಎ.ರಮೇಶ್, ನರಸಿಂಹಮೂರ್ತಿ ಮತ್ತಿತರರು ಇದ್ದರು.