ರಾಜ್ಯ ಕಾಂಗ್ರೇಸ್ ಸರ್ಕಾರ ಬೆಂಗಳೂರು ಅಭಿವೃದ್ದಿಗೆ ಒಂದು ನಯಾಪೈಸೆ ಸಹ ಅನುದಾನ ಬಿಡುಗಡೆ ಮಾಡಿಲ್ಲ. ಬ್ರಾಂಡ್ ಬೆಂಗಳೂರು ಇದೆಯೇ? ಅದು ಸತ್ತು ಹೊಗಿದೆಯಾ ಎಂದು ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ದ ಗುಡುಗಿದ್ದಾರೆ. ಈ ಸಂಬಂಧ ಇದೇ ತಿಂಗಳ 28 ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ನಗರದ ಅಭಿವೃದ್ದಿಗೆ ಕಾಂಗ್ರೇಸ್ ಸರ್ಕಾರ ಬಿಡಿಗಾಸು ಬಿಡುಗಡೆ ಮಾಡಿಲ್ಲ. ಸಿಎಂ ಹೋಗೋದು ಪೊಟೋಗೆ ಶೋ ಕೊಡೋದು ಬಿಟ್ಟರೇ ಬೇರೆ ಏನು ಕೆಲಸ ಆಗಿಲ್ಲ. ಈಗಾಗಲೇ ಕಮಿಷನರ್ ಅವರು ಮಳೆಗೆ ಸಂಬಂಧಿಸಿದ ಎಲ್ಲಾ ಮಾಡಿದ್ದಾಗಿ ಒಂದು ತಿಂಗಳ ಹಿಂದೆಯೇ ಹೇಳಿಕೆ ನೀಡಿದ್ದರು. ಪಾಲಿಕೆ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದರೇ ಸಿಎಂ ಸ್ಥಳಕ್ಕೆ ಭೇಟಿ ನೀಡುವ ಪ್ರಮೇಯ ಏಕೆ ಬಂತು. ಯಡಿಯೂರಪ್ಪ ರವರು ಒಂದು ವರ್ಷದಲ್ಲಿ ಏಳು ಸಾವಿರ ಕೋಟಿ ವಿಶೇಷ ಅನುದಾನ ನೀಡಿದ್ದರು. ಬಸವರಾರಜ ಬೊಮ್ಮಾಯಿ ರವರಿ 6700 ಕೋಟಿ ಬಿಡುಗಡೆ ಮಾಡಿದ್ದರು. ಕಾಂಗ್ರೇಸ್ಸಿನ ಯೋಗ್ಯತೆಗೆ ಎಷ್ಟು ಅನುದಾ ಬಿಡುಗಡೆ ಮಾಡಿದ್ದಾರೆ ಎಂಬುದನ್ನು ಹೇಳಲಿ, ರಾಜಕಾಲುವೆ ದುರಸ್ಥಿಗಾಗಿ ಎಷ್ಟು ಹಣ ನೀಡಿದ್ದೀರಾ, ರಾಜ್ಯ ಸರ್ಕಾರ ಪಾಪರ್ ಆಗಿದಯೇ ಎಂದು ಪ್ರಶ್ನೆ ಮಾಡಿದರು.
ಇನ್ನೂ ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಹಣ ಇಲ್ಲದ ಕಾರಣ ಅವರು ಆತ್ಮಹತ್ಯೆಗೆ ಮುಂದಾಗಿದ್ದರು. ಕಮಿಷನ್ ಆರೋಪ ಮಾಡಿದ್ದರು. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವೇನು. ರಾಜ್ಯ ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡಲಿದೆ? ಯಾವಾಗ ಹೊಂಡದ ಗುಂಡಿ ಮುಚ್ಚುತ್ತೀರಿ ಎಂದ ಅವರು, ಕುಡಿಯುವ ನೀರಿಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಮರ್ಯಾದೆ ಹರಾಜಾಗಿದೆ. ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಎಷ್ಟು ಹಣ ನೀಡಿದ್ದೀರಿ ಲೆಕ್ಕ ಕೊಡಿ ಕಾಂಗ್ರಸಿಗರೇ, ಬಿಲ್ ಸಿಗದೇ ಕಸ ತೆಗೆಯುವವರು ಸಮಸ್ಯೆಯಲ್ಲಿದ್ದಾರೆ. ರಾಶಿ ರಾಶಿ ಕಸ ಬಿದಿದ್ದೆ. ಕುಡಿಯುವ ನೀರಿಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಮರ್ಯಾದೆ ಹರಾಜಾಗಿದೆ ಎಂದು ವಾಗ್ದಾಳಿ ನಡೆಸಿದರು. ಈ ಸಮಸ್ಯೆಗಳ ಬಗ್ಗೆ ಮೇ.28 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.