ಪುಷ್ಪಾ-2 ಸಿನೆಮಾದ ನಾಯಕ ಅಲ್ಲು ಅರ್ಜುನ್ ರವರಿಗೆ ದಿನಕ್ಕೊಂದು ಸಂಕಷ್ಟ ಎದುರಾಗುತ್ತಲೇ ಇದೆ. ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣದ ಸಂಬಂಧ ಅಲ್ಲು ಅರ್ಜುನ್ (Allu Arjun) ಹೈದರಾಬಾದ್‌ನ ಜುಬಿಲಿ ಹಿಲ್ಸ್ ಮನೆಯ ಮೇಲೆ ಉಸ್ಮಾನಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಜುಬಿಲಿ ಹಿಲ್ಸ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಈ ಪ್ರತಿಭಟನೆ ಮಾಡುವ ಸಮಯದಲ್ಲಿ (Allu Arjun) ಅಲ್ಲು ಅರ್ಜುನ್ ರವರ ಮನೆಯ ಮೇಲೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.

ಹೈದರಾಬಾದ್ ನ ಉಸ್ಮಾನಿಯಾ ವಿಶ್ವವಿದ್ಯಾನಿಲಯದ ಜೆಎಸಿಯ ಹಲವು ಮುಖಂಡರನ್ನು ಒಳಗೊಂಡ ಗುಂಪು, ನಟನ ಮನೆಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸಿದೆ. ಡಿಸೆಂಬರ್ 4 ರಂದು ಥಿಯೇಟರ್‌ನಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 35 ವರ್ಷದ ಮಹಿಳೆಯ ಕುಟುಂಬಕ್ಕೆ ಪರಿಹಾರವಾಗಿ ಒಂದು ಕೋಟಿ ನೀಡುವಂತೆ ಒತ್ತಾಯಿಸಿ ಈ ಪ್ರತಿಭಟನೆ ನಡೆದಿದೆ. ಈ ವೇಳೆ ಅಲ್ಲು ಅರ್ಜುನ್ ರವರ ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಅಲ್ಲು ಅರ್ಜುನ್ ರವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಜೊತೆಗೆ ಮನೆಯ ಭದ್ರತಾ ಸಿಬ್ಬಂದಿಯ ಮೇಲೂ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗಿದೆ.
Viral Video is here : Click Here
ಇನ್ನೂ ಈ ಘಟನೆಯ ವೀಡಿಯೊ ವೈರಲ್ ಆಗಿದ್ದು, ಹಲವು ಮಂದಿ ನಟನ ಮನೆಯೊಳಗೆ ನುಗ್ಗಿ ಆಸ್ತಿ, ಮನೆಯೊಳಗಿರುವ ವಸ್ತುಗಳಿಗೆ ಹಾನಿ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮನೆಯ ಆವರಣದೊಳಗಿದ್ದ ಹೂವಿನ ಕುಂಡಗಳನ್ನೂ ಗುಂಪು ನಾಶಪಡಿಸಿದೆ. ಘಟನೆ ನಡೆದಾಗ ಅಲ್ಲು ಅರ್ಜುನ್ ತಮ್ಮ ನಿವಾಸದಲ್ಲಿ ಇರಲಿಲ್ಲ ಎನ್ನಲಾಗಿದೆ. ಕಳೆದ ಶನಿವಾರವಷ್ಟೆ ನಟ ಅಲ್ಲು ಅರ್ಜುನ್ ಪತ್ರಿಕಾಗೋಷ್ಟಿಯನ್ನು ಕರೆದು ಸಂಧ್ಯಾ ಥಿಯೇಟರ್ ಘಟನೆಯ ಬಗ್ಗೆ ಮಾತನಾಡಿದ್ದರು. ತನ್ನ ಚಾರಿತ್ಯ್ರ ಹರಣ ಮಾಡುವಂತಹ ಕೆಲಸ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಇನ್ನೂ ಈ ಘಟನೆಯ ಕುರಿತು ಅಲ್ಲು ಅರ್ಜುನ್ ರವರ ತಂದೆ ಅಲ್ಲು ಅರವಿಂದ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಮನೆಯಲ್ಲಿ ನಡೆದ ಘಟನೆಯನ್ನು ಎಲ್ಲರೂ ನೋಡಿದ್ದಾರೆ. ಜುಬಿಲಿ ಹಿಲ್ಸ್ ಮನೆಗೆ ಪೊಲೀಸರು ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮ ಮನೆಯಲ್ಲಿ ಯಾರೇ ಜಗಳ ಮಾಡಿದರೂ ಪೊಲೀಸರು ಅವರನ್ನು ಕರೆದುಕೊಂಡು ಹೋಗಲು ಸಿದ್ದವಾಗಿದ್ದಾರೆ. ಈ ರೀತಿಯ ಕೃತ್ಯಗಳಿಗೆ ಯಾರೂ ಪ್ರಚೋದನೆ ನೀಡಬಾರದು. ಸದ್ಯ ಈ ವಿಚಾರದಲ್ಲಿ ಸಂಯಮ ಸಾಧಿಸುವ ಅಗತ್ಯವಿದ್ದು, ಅದಕ್ಕಾಗಿಯೇ ನಾವು ನಮ್ಮ ಸಮಯವನ್ನು ತೆಗೆದುಕೊಳ್ಳುತ್ತಿದ್ದೇವೆ. ಎಲ್ಲರೂ ಅರ್ಥಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.