PDO Recruitment 2024: ಡಿಗ್ರಿ ಪಾಸ್ ಆದವರಿಗೆ ಇಲ್ಲಿದೆ ಸರ್ಕಾರಿ ಹುದ್ದೆ, ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ…!

ಡಿಗ್ರಿ ಪಾಸ್ ಆದವರಿಗೆ ಇಲ್ಲೊಂದು ಗುಡ್ ನ್ಯೂಸ್. ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯತಿ ಅಭಿವೃದ್ದಿ ಅಧಿಕಾರಿ (PDO Recruitment 2024) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ಕುರಿತು ಕೆ.ಪಿ.ಎಸ್.ಸಿ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿದೆ. ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ತೇರ್ಗಡೆಯಾದ ಅಭ್ಯರ್ಥಿಗಳು ಈ ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

KPSC PDO Recruitment 2024 0

ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್- ಸಿ ಹಾಗೂ ಗ್ರೂಪ್- ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾದ (PDO Recruitment 2024) ಅಧಿಸೂಚನೆಗಳಿಗೆ ಹಾಗೂ ಮುಂದಿನ 1 ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲ ಪ್ರವರ್ಗದ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ. ಇದು ಕೇವಲ ಈ ಹುದ್ದೆಗೆ ಮಾತ್ರ ಈ ಬಾರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇನ್ನೂ (PDO Recruitment 2024)ಅಧಿಸೂಚನೆಯಲ್ಲಿರುವ ಪ್ರಮುಖ ಅಂಶಗಳ ವಿಚಾರಕ್ಕೆ ಬಂದರೇ.

ಹುದ್ದೆಗಳ ವಿವರ: (PDO Recruitment 2024)

  • ಒಟ್ಟು ಹುದ್ದೆಗಳು- 247
  • ಪಿಡಿಒ ಉಳಿಕೆ ಮೂಲ ವೃಂದದ 150 ಹುದ್ದೆಗಳು
  • ಹೈದರಾಬಾದ್‌ ಕರ್ನಾಟಕ ವೃಂದದ 97 ಹುದ್ದೆಗಳು

KPSC PDO Recruitment 2024 2

ಅರ್ಜಿ ಶುಲ್ಕ: (PDO Recruitment 2024)

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
  • ಇತರೆ ಹಿಂದುಳಿದ ಅಭ್ಯರ್ಥಿಗಳು- 300 ರೂ.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ- 50 ರೂ.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳು- 600 ರೂ.

ಅಭ್ಯರ್ಥಿಗಳ ವಯೋಮಿತಿ: ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ:

  • ಅರ್ಜಿ ಸಲ್ಲಿಸಲು ಕನಿಷ್ಠ-18 ವರ್ಷಗಳು ಪೂರ್ಣವಾಗಿರಬೇಕು.
  • ಸಾಮಾನ್ಯ ವರ್ಗದವರಿಗೆ- 35 ವರ್ಷಗಳು ಇತ್ತು, ಇದೀಗ 38 ವರ್ಷಗಳು ಮಾಡಲಾಗಿದೆ.
  • 2ಎ, 2ಬಿ, 3ಎ, 3ಬಿ, 38- 38 ವರ್ಷಗಳು ಇತ್ತು, ಇದೀಗ 41 ವರ್ಷಕ್ಕೆ ಏರಿಕೆ ಮಾಡಿದೆ.
  • ಎಸ್​​ಸಿ, ಎಸ್​ಟಿ, ಪ್ರವರ್ಗ1- 40 ವರ್ಷ ಇತ್ತು, ಇದೀಗ 43 ವರ್ಷಕ್ಕೆ ಏರಿಸಲಾಗಿದೆ.

ಅಭ್ಯರ್ಥಿಗಳಿಗೆ ವಿಶೇಷ ಸೂಚನೆ: (PDO Recruitment 2024)

  • ತಾಂತ್ರಿಕ ಕಾರಣದಿಂದ ಈ ಹಿಂದೆ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.
  • ವಯೋಮಿತಿಯನ್ನು ಹೊರತು ಪಡಿಸಿ ಉಳಿದಂತೆ ಆಯೋಗದ ಈ ಮೊದಲು ಹೊರಡಿಸಿದ ಅಧಿಸೂಚನೆಯಲ್ಲಿರುವಂತೆ ಎಲ್ಲ ನಿಯಮಗಳು ಅನ್ವಯವಾಗುತ್ತವೆ.
  • ಈಗಾಗಲೇ ಅಯೋಗದ ಅಂತರ್ಜಾಲದಲ್ಲಿ ಪ್ರಕಟಣೆ ಮಾಡಿರುವಂತೆ ಪಿಡಿಒ ಹುದ್ದೆಗಳ ಪರೀಕ್ಷಾ ದಿನಾಂಕಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ :

  • ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
  • ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
  • ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
  • ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
  • ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಇನ್ನೂ ಪಿಡಿಒ ಹುದ್ದೆಗೆ ಸೆಪ್ಟೆಂಬರ್‍ 15 ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅ.03 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು  ಕೆಪಿಎಸ್‌ಸಿ ಅಧಿಕೃತ ವೆಬ್​ಸೈಟ್​ https://www.kpsc.kar.nic.in/ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

Leave a Comment

Your email address will not be published. Required fields are marked *

Scroll to Top