ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಆರೋಪದ ಮೇರೆಗೆ ದೇಶ ಬಿಟ್ಟು ತಲೆ ಮರೆಸಿಕೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಭಾರತಕ್ಕೆ ಬಂದಿದ್ದು, ವಿಮಾನ ನಿಲ್ದಾಣದಲ್ಲೇ ಆತನನ್ನು ಎಸ್.ಐ.ಟಿ. ಪೊಲೀಸರು ಬಂಧಿಸಿದ್ದಾರೆ. ಕಳೆದ ಮದ್ಯರಾತ್ರಿ 12.47ರ ಸುಮಾರಿಗೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ಬರುತ್ತಿದ್ದಂತೆ ಎಸ್.ಐ.ಟಿ ಮಹಿಳಾ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ. ಮೂವರು ಮಹಿಳಾ ಅಧಿಕಾರಿಗಳ ಮೂಲಕ ಆರೋಪಿಯನ್ನು ಎಸ್‌ಐಟಿ ಬಂಧಿಸಿದೆ. ಅದು ಯಾಕೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.
ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು 35 ದಿನಗಳ ಬಳಿಕ ಬಂಧಿಸಲಾಗಿದೆ. ವಿದೇಶದಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸುತ್ತಿದ್ದಂತೆ ಪ್ರಜ್ವಲ್‌ರನ್ನು ಮಹಿಳಾ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಜ್ವಲ್ ಕಳೆದ ಮದ್ಯರಾತ್ರಿ 12.47ರ ಸುಮಾರಿಗೆ ಲುಫ್ತಾನ್ಸಾ ಏರ್ ಲೈನ್ಸ್ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ. ಪ್ರಜ್ವಲ್ ರವರನ್ನು ಬಂಧನ ಮಾಡಲು ಸಂಜೆಯಿಂದ ಎಸ್.ಐ.ಟಿ ಪೊಲೀಸರು ವಿಮಾನ ನಿಲ್ದಾಣದಲ್ಲೇ ಬೀಡು ಬಿಟ್ಟಿದ್ದರು. ಪ್ರಜ್ವಲ್ ಬರುತ್ತಿದ್ದಂತೆ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಜ್ವಲ್ ರನ್ನು ಬಂಧನ ಮಾಡಿದ್ದು, ಮಹಿಳಾ ಪೊಲೀಸ್ ಅಧಿಕಾರಿಗಳು. ಇದೀಗ ಈ ಕುರಿತು ಚರ್ಚೆ ಶುರುವಾಗಿದೆ.
ಆರೋಪಿ ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣದಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿ ಹೊರ ಬರುತ್ತಿದ್ದಂತೆ, ಮಹಿಳಾ ಇನ್ಸ್ ಪೆಕ್ಟರ್ ಸಹಿತ ಕೆಲ ಮಹಿಳಾ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ಎಸ್.ಐ.ಟಿ ಕಚೇರಿಗೆ ಕರೆ ತಂದರು. ಪ್ರಜ್ವಲ್ ನನ್ನು ಕರೆತರಲು ಎಲ್ಲಾ ಮಹಿಳಾ ಅಧಿಕಾರಿಗಳೇ ಇದ್ದರು, ವಾಹನದ ಚಾಲಕ ಹೊರತುಪಡಿಸಿ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣರನ್ನು ಮಹಿಳಾ ಅಧಿಕಾರಿಗಳು ಬಂಧಿಸಿ ಕರೆ ತಂದಿದ್ದು, ಆರೋಪಿ ರೇವಣ್ಣಗೂ ಸಹ ಮುಜುಗರಕ್ಕೆ ಕಾರಣವಾಯ್ತು ಎಂದು ಸಹ ಹೇಳಲಾಗುತ್ತಿದೆ. ಮಹಿಳೆಯರಿಗೆ ಧೈರ್ಯ ಬರಬೇಕು, ಧೈರ್ಯವಾಗಿ ಬಂದು ದೂರು ನೀಡುವಂತೆ ಸಂದೇಶ ರವಾನಿಸುವ ನಿಟ್ಟಿನಲ್ಲಿ ಮಹಿಳಾ ಅಧಿಕಾರಿಗಳಿಂದ ಪ್ರಜ್ವಲ್ ರನ್ನು ಬಂಧನ ಮಾಡಿಸಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.
ಇನ್ನೂ ಪ್ರಜ್ವಲ್ ರೇವಣ್ಣ ಪರ ವಕೀಲರು ಇಂದು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಆದರೆ ಪ್ರಜ್ಬಲ್ ರೇವಣ್ಣನನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ದೊರೆಯುವ ಸಾಧ್ಯತೆಇಲ್ಲ. ಈ ಹಿನ್ನೆಲೆಯಲ್ಲಿ ಸಾಮಾನ್ಯ ರೀತಿಯಲ್ಲೇ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಲಾಗಿದೆ.