Thursday, November 21, 2024

Donald Trump: ಡೊನಾಲ್ಡ್ ಟ್ರಂಪ್ ಗೆಲುವು, ಐತಿಹಾಸಿಕ ವಿಜಯಕ್ಕಾಗಿ ಸ್ನೇಹಿತನ ಅಭಿನಂದಿಸಿದ ಮೋದಿ….!

ಅಮೆರಿಕಾದ ​ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಅವರು ಅಧಿಕಾರದ ಗದ್ದುಗೆ ಏರಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಾಗೂ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಸೋತಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್‌ ಟ್ರಂಪ್‌ (Donald Trump) ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂಧಿಸಿದ್ದಾರೆ. ನರೇಂದ್ರ ಮೋದಿಯವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ರಂಪ್ ಜೊತೆಗಿರುವ ಪೊಟೋ ಪೋಸ್ಟ್ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

modi wished ronald trump 1

ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೊನಾಲ್ಡ್ ಟ್ರಂಪ್ (Donald Trump)  ರವರನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿಯವರು ಟ್ರಂಪ್ ಜೊತೆಗಿರುವ ಪೊಟೋವನ್ನು ಪೋಸ್ಟ್ ಮಾಡಿ, ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತನಿಗೆ ಹೃದಯಪೂರ್ವಕ ಅಭಿನಂದನೆಗಳು. (Donald Trump)  ನಮ್ಮ ಜನರ ಯೋಗಕ್ಷೇಮಕ್ಕಾಗಿ ಹಾಗೂ ಜಾಗತಿಕ ಶಾಂತಿ, (Donald Trump)  ಸಮೃದ್ದಿ ಹಾಗೂ ಸ್ಥಿರತೆಯನ್ನು ಕಾಪಾಡಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದು ಪೋಸ್ಟ್ ಮಾಡಿದ್ದಾರೆ. ಈ ಹಿಂದಿನಂತೆಯೇ  ಭಾರತ-ಯುಎಸ್ ಸಮಗ್ರ ಜಾಗತಿಕ ಹಾಗೂ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಹಕಾರವನ್ನು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಪೋಸ್ಟ್ ಇಲ್ಲಿದೆ ನೋಡಿ: Click Here

ಈ ಭಾರಿ ಕುತೂಹಲ ಮೂಡಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ನ ಡೊನಾಲ್ಡ್‌ ಟ್ರಂಪ್‌ (Donald Trump) ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಲು ಸಜ್ಜಾಗಿರುವ ಟ್ರಂಪ್‌, ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ 2ನೇ ಬಾರಿಗೆ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಲಿದ್ದಾರೆ. ಇದುವರೆಗೂ 539 ಚುನಾವಣಾ ಮತಗಳ ಪೈಕಿ 501 ಚುನಾವಣಾ ಮತಗಳ ಫಲಿತಾಂಶ ಬಂದಿದ್ದು, ಟ್ರಂಪ್ ಮ್ಯಾಜಿಕ್ ನಂಬರ್‍ ದಾಟಿದ್ದಾರೆ. ಮ್ಯಾಜಿಕ್ ನಂಬರ್‍ 270 ಆಗಿದೆ. (Donald Trump)  ಡೋನಾಲ್ಡ್ ಟ್ರಂಪ್ ರವರಿಗೆ 277 ಮತಗಳು ಬಂದಿದ್ದು, ಕಮಲಾ ಹ್ಯಾರೀಸ್ ರವರಿಗೆ 224 ಮತಗಳು ಬಂದಿದೆ.

by Admin
by Adminhttp://ismkannadanews.com
Welcome to ISM News, if you want to contact us, then feel free to say anything about www.ismkannadanews.com. We'll appreciate your feedback.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles

error: Content is protected !!