PM Vidyalaxmi: ಪಿಎಂ ವಿದ್ಯಾಲಕ್ಷ್ಮೀ ಯೋಜನೆಗೆ ಕೇಂದ್ರ ಸಂಪುಟ ಅಸ್ತು, ಅರ್ಹ ವಿದ್ಯಾರ್ಥಿಗಳಿಗೆ ಸಿಗಲಿದೆ 10 ಲಕ್ಷದವರೆಗಿನ ಸಾಲ….!

ಪ್ರತಿಭಾವಂತ ವಿದ್ಯಾರ್ಥಿಗೆ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯಲು ಹಣಕಾಸಿನ ಸಮಸ್ಯೆಯಿರುತ್ತದೆ. ಈ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ಪಿಎಂ ವಿದ್ಯಾಲಕ್ಷ್ಮಿ (PM Vidyalaxmi) ಎಂಬ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲಾಗುತ್ತಿದೆ. ಉನ್ನತ ವ್ಯಾಸಂಗಕ್ಕೆ ಆರ್ಥಿಕ ಸಮಸ್ಯೆಯಿಂದ ಹಿಂಜರಿಯುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.

ಕೇಂದ್ರ ಸರ್ಕಾರ ಪಿಎಂ ವಿದ್ಯಾಲಕ್ಷ್ಮಿ (PM Vidyalaxmi) ಎಂಬ ಯೋಜನೆಯನ್ನು ಸರ್ಕಾರದ ವೆಬ್ ಸೈಟ್ ಮೂಲಕ ಜಾರಿಗೊಳಿಸಲಾಗುತ್ತದೆ. ಅದರ ಮೂಲಕ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಬ್ಯಾಂಕ್ ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಕೊಲ್ಯಾಟರಲ್ ಅಥವಾ ಗ್ಯಾರಂಟಿದಾರರ ಅಗತ್ಯವಿಲ್ಲದೇ ಸಾಲವನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ಸಾಲ ಪೂರ್ಣ ಪ್ರಮಾಣದ ಬೋಧನಾ ಶುಲ್ಕ ಸೇರಿದಂತೆ ಇತರೆ ವೆಚ್ಚಗಳನ್ನು ಸಹ ಒಳಗೊಂಡಿರುತ್ತದೆ. ಈ ಯೋಜನೆಯು NIRF ಶ್ರೇಯಾಂಕದಲ್ಲಿ ಅಗ್ರ 100ರೊಳಗೆ ಸ್ಥಾನ ಪಡೆದಿರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತದೆ. ಜೊತೆಗೆ NIRFನಲ್ಲಿ 101-200ರಲ್ಲಿ ರಾಜ್ಯ ಸರ್ಕಾರದ HEI ಗಳು ಮತ್ತು ಎಲ್ಲಾ ಕೇಂದ್ರ ಸರ್ಕಾರದ ಆಡಳಿತದ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದೆ. ಎಂದು ಹೇಳಲಾಗಿದೆ.

ಈ ಕುರಿತು ಪೋಸ್ಟ್ ಇಲ್ಲಿದೆ ನೋಡಿ: https://x.com/PIB_India/status/1854101718965076093

ಇನ್ನೂ ಸಾಲ ಪಡೆಯುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷರೂ ವರೆಗಿನ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ 10 ಲಕ್ಷ ರೂಪಾಯಿವರೆಗಿನ ಸಾಲದ ಮೇಲೆ ಶೇ.3 ರಷ್ಟು ರಿಯಾಯಿತಿಯನ್ನು ನೀಡುತ್ತದೆ. ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಪಿಎಂ ವಿದ್ಯಾಲಕ್ಷ್ಮಿ (PM Vidyalaxmi) ಎಂಬ ಯೋಜನೆ ಕೇಂದ್ರ ವಲಯದ ಬಡ್ಡಿ ಸಬ್ಸಿಡಿ (CSIS) ಮತ್ತು ಶಿಕ್ಷಣ ಸಾಲಗಳ ಕ್ರೆಡಿಟ್ ಗ್ಯಾರಂಟಿ ಫಂಡ್ ಯೋಜನೆ (CGFSEL), ವಾರ್ಷಿಕ ಕುಟುಂಬ ಆದಾಯ 4.5 ಲಕ್ಷ ರೂ.ವರೆಗೆ ಮತ್ತು ಅನುಮೋದಿತ ಸಂಸ್ಥೆಗಳಿಂದ ತಾಂತ್ರಿಕ ಅಥವಾ ವೃತ್ತಿಪರ ಕೋರ್ಸ್ ಅನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ಪೂರಕವಾಗಿರುತ್ತದೆ.

Leave a Reply

Your email address will not be published. Required fields are marked *

Next Post

Pratibha Karanji: ಮಕ್ಕಳಲ್ಲಿನ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಕೃಷ್ಣಪ್ಪ

Thu Nov 7 , 2024
ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಪ್ರತಿಭಾವಂತರಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಅಭಿಪ್ರಾಯಪಟ್ಟರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯ ಆವರಣದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ (Pratibha Karanji) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವ ನಿಟ್ಟಿನಲ್ಲಿ ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು […]
Taluk Level Pratibha kharanji in GBD
error: Content is protected !!