ಲೋಕಸಭಾ ಚುನಾವಣೆಯಲ್ಲಿ 2024 ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಈ ಹಿಂದೆ ಶಾಸಕ ಪ್ರದೀಪ್ ಈಶ್ವರ್ ಹಾಕಿದ್ದಂತಹ ಸವಾಲಿನ ಬಗ್ಗೆ ಜೋರು ಚರ್ಚೆ ನಡೆಯುತ್ತಿದೆ. ಇದರ ಜೊತೆಗೆ ಶಾಸಕ ಪ್ರದೀಪ್ ಈಶ್ವರ್ ಹೆಸರಿನ ರಾಜೀನಾಮೆ ಪತ್ರವೊಂದು ಸೋಷಿಯಲ್ ಮಿಡಿಯಾದಲ್ಲಿದಲ್ಲಿ ವೈರಲ್ ಆಗಿದ್ದು, ಈ ಕುರಿತು ಶಾಸಕ ಪ್ರದೀಪ್ ಈಶ್ವರ್ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಫೇಕ್ ರಾಜೀನಾಮೆ ಪತ್ರದ ಬಗ್ಗೆ ಪ್ರದೀಪ್ ಈಶ್ವರ್ ಹೇಳಿದ್ದು ಏನು ಎಂಬ ವಿಚಾರಕ್ಕೆ ಬಂದರೇ,
ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಸೋಷಿಯಲ್ ಮಿಡಿಯಾದಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆಯ ಬಗ್ಗೆ ಟ್ರೋಲ್ ಗಳು ಜೋರಾಗಿಯೇ ಕೇಳಿಬಂದವು. ತಾವು ಹಾಕಿದ ಸವಾಲಿನಂತೆ ಯಾವಾಗ ರಾಜೀನಾಮೆ ಕೊಡ್ತೀರಾ ಅಣ್ಣಾ, ಬುಜ್ಜಿ ಲೀಡ್ ಚುಸ್ಯಾವಾ ಎಂಬೆಲ್ಲಾ ಕಾಮೆಂಟ್ ಗಳ ಮೂಲಕ ಸಖತ್ ಟ್ರೋಲ್ ಮಾಡಿದ್ದರು. ಇದೀಗ ಶಾಸಕ ಪ್ರದೀಪ್ ಈಶ್ವರ್ ಕೊಟ್ಟ ಮಾತಿನಂತೆ ರಾಜೀನಾಮೆ ನೀಡಿದ್ದಾರೆ ಎಂದು ರಾಜೀನಾಮೆ ಪತ್ರವೊಂದು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ. ಈ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಪ್ರದೀಪ್ ಅದೊಂದು ನಕಲಿ ಪತ್ರ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಯಾರೋ ಕಿಡಿಗೇಡಿಗಳು ನಕಲಿ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ. ಈ ಕುರಿತು ನಾನು ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ನಕಲಿ ರಾಜೀನಾಮೆ ಪತ್ರದ ಬಗ್ಗೆ ಸ್ಪಷ್ಟನೆ ನೀಡಿರುವ ಶಾಸಕ ಪ್ರದೀಪ್ ಈಶ್ವರ್, ನಕಲಿ ರಾಜೀನಾಮೆ ಪತ್ರವನ್ನು ಯಾರೋ ಕಿಡಿಗೇಡಿಗಳು ಸೋಷಿಯಲ್ ಮಿಡಿಯಾದಲ್ಲಿ ಹರಿಬಿಟ್ಟಿದ್ದಾರೆ. ನಾನು ಯಾವುದೇ ರಾಜೀನಾಮೆ ಪತ್ರ ನೀಡಿಲ್ಲ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ಎಲ್ಲವನ್ನೂ ನಾನು ಪೊಲೀಸರ ಗಮನಕ್ಕೆ ತಂದಿದ್ದೇನೆ. ನಕಲಿ ರಾಜೀನಾಮೆ ಪತ್ರ ಹರಿಬಿಟ್ಟವರ ವಿರುದ್ದ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳುತ್ತೇನೆ ಎಂದೂ ಸಹ ಶಾಸಕ ಪ್ರದೀಪ್ ಈಶ್ವರ್ ಕೆಲವೊಂದು ಮಾದ್ಯಮ ಸಂಸ್ಥೆಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿದುಬಂದಿದೆ