ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾರೆ ಎನ್ನಲಾಗಿದ್ದು, ಇದೀಗ ವಿದೇಶದಿಂದ ವಾಪಸ್ಸಾಗಿ ವಿಚಾರಣೆಗೆ ಹಾಜರಾಗುವುದಾಗಿ ಕಳೆದೆರಡು ದಿನಗಳ ಹಿಂದೆಯಷ್ಟೆ ವಿಡಿಯೋ ಮೂಲಕ ಮಾಹಿತಿ ನೀಡಿದ್ದರು. ಮೇ.31 ರಂದು ಎಸ್.ಐ.ಟಿ ಮುಂದೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ವಿಡಿಯೋ ದಲ್ಲಿ ತಿಳಿಸಿದ್ದರು. ಇದೀಗ ವಿದೇಶದಿಂದ ಬರುವುದಕ್ಕೂ ಮುಂಚೆಯೇ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಸಂಸದ ಪ್ರಜ್ವಲ್ ರೇವಣ್ಣ ರವರದ್ದು ಎನ್ನಲಾದ ಪೆನ್ ಡ್ರೈವ್ ಪ್ರಕರಣ ತುಂಬಾನೆ ಸದ್ದು ಮಾಡಿತ್ತು. ಈ ವಿಚಾರ ಬಯಲಿಗೆ ಬರುತ್ತಿದ್ದಂತೆ ರಾಜಕೀಯವಾಗಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದರು. ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಸುಮಾರು ದಿನಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ. ಈ ಸಂಬಂಧ ವಿಡಿಯೋ ಮೂಲಕ ತಿಳಿಸಿರುವ ಅವರು ಮೇ.31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ತಿಳಿಸಿದ್ದರು. ವಿದೇಶದಿಂದ ವಿಡಿಯೋ ರಿಲೀಸ್ ಮಾಡಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್.ಐ.ಟಿ ಮುಂದೆ ಹಾಜರಾಗುತ್ತೇನೆ ಎಂದು ಹೇಳಿದ್ದರು. ಇದೀಗ ವಿದೇಶಕ್ಕೂ ಬರುವ ಮುಂಚೆ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಮೇ.31 ರಂದು ಬೆಂಗಳೂರಿಗೆ ಬರಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರ ವಿರುದ್ದ ಮೂರು ಪ್ರಕರಣ ದಾಖಲಾಗಿದೆ. ಬಂಧನ ಭೀತಿಯಲ್ಲಿರುವ ಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮೂರು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಮೇ.31 ರಂದು ಪ್ರಜ್ವಲ್ ರೇವಣ್ಣ ಬೆಳಗ್ಗೆ 10 ಗಂಟೆಗೆ ಎಸ್.ಐ.ಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ವಿಡಿಯೋ ಮೂಲಕ ಹೇಳಿದ್ದರು. ಸದ್ಯ ಕೇಳಿಬರುತ್ತಿರುವ ಸುದ್ದಿಯಂತೆ ಶುಕ್ರವಾರ ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನೂ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಎಸ್.ಐ.ಟಿ ನೊಟೀಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಬಂಧಿಸಬೇಕು ಎಂದು ಎಸ್.ಐ.ಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಮೇ.31 ರಂದು ಬರಲಿದ್ದು, ಮೇ.30 ರಂದು ಅರ್ಜಿ ವಿಚಾರಣೆ ಮಾಡಬೇಕೆಂದು ಪ್ರಜ್ವಲ್ ಪರ ವಕೀಲರು ಮನವಿ ಮಾಡಿದ್ದು, ಅದನ್ನು ನ್ಯಾಯಾಧೀಶರು ತಿರಸ್ಕಾರ ಮಾಡಿದರು.