Price Hike – ಕೆಲವು ತಿಂಗಳುಗಳ ಹಿಂದೆಯಷ್ಟೆ ನಂದಿನಿ ಹಾಲಿನ ಬೆಲೆ ಹೆಚ್ಚಳ ಮಾಡಲಾಗಿತ್ತು. ಇದರಿಂದ ಜನರು ಆಕ್ರೋಷ ಹೊರಹಾಕಿದ್ದರು. ಇದೀಗ ಮತ್ತೊಮ್ಮೆ ನಂದಿನಿ ಹಾಲಿನ ದರವನ್ನು ಏರಿಕೆ ಮಾಡಲಾಗುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. ಹೊಸ ವರ್ಷಕ್ಕೆ ಸರ್ಕಾರದಿಂದ ನಂದಿನಿ ಹಾಲಿನ ದರ ಏರಿಕೆ ಮಾಡುವ ಮೂಲಕ ಜನರಿಗೆ ಶಾಕ್ ನೀಡಲು ಮುಂದಾಗಿದೆ ಎನ್ನಲಾಗುತ್ತಿದ್ದು, ಪ್ರತಿ ಲೀಟರ್ ನಂದಿನಿ ಹಾಲಿಗೆ 5 ರೂಪಾಯಿ ಏರಿಕೆ ಮಾಡಲು ಚಿಂತನಡೆ ನಡೆಸಿದೆ ಎಂದು ಹೇಳಲಾಗಿದೆ.

ಕರ್ನಾಟಕ ಹಾಲು ಮಹಾ ಮಂಡಳಿಯಿಂದ ನಂದಿನಿ ಹಾಲಿನ ದರ ಏರಿಕೆಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ ಎನ್ನಲಾಗಿದೆ. ಚಳಿಗಾಲದ ಅಧಿವೇಶನದ ಬಳಿಕ ಹಾಲಿನ ದರ ಏರಿಕೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಡಿಸೆಂಬರ್ 19 ರವರೆಗೂ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಇದಾದ ಬಳಿಕ ಡಿಸೆಂಬರ್ 20 ರಿಂದ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ ಕೆಎಂಎಫ್ ಅಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಡಿ.21 ಅಥವಾ ಡಿ.22 ರಂದು ಸಭೆ ನಡೆಸಿ, ಸಭೆಯ ಬಳಿಕ ಹಾಲಿನ ದರ ಏರಿಕೆಯ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

ಕೆಎಂಎಫ್ ಅಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆಯ ಬಳಿಕ ಹಾಲಿನ ದರ ನಿರ್ಧಾರವಾಗಲಿದೆ ಎನ್ನಲಾಗಿದೆ. ಒಂದು ವೇಳೆ ಹಾಲಿನ ದರ ಏರಿಕೆಯ ಪ್ರಸ್ತಾವನೆಗೆ ಸಿಎಂ ಒಪ್ಪಿಗೆ ನೀಡಿದರೇ ಮುಂದಿನ ವರ್ಷದಿಂದ ನೂತನ ದರ ಜಾರಿಗೆ ಬರಬಹುದು ಎನ್ನಲಾಗಿದೆ. ಸದ್ಯ ಇರುವ ಹಾಲಿನ ದರದಲ್ಲಿ 5 ರೂಪಾಯಿ ಏರಿಕೆಯಾಗಲಿದೆ ಎನ್ನಲಾಗಿದೆ. ಈಗಾಗಲೇ ಅನೇಕ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ಇದೀಗ ದಿನನಿತ್ಯ ಬಳಕೆ ಮಾಡುವಂತಹ ಹಾಲಿನ ದರ ಏರಿಕೆಯಾದರೇ ಜನಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಬಹುದಾಗಿದೆ.