ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್. ಭಗವಾನ್ ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಇದೀಗ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಶ್ರೀರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿರೋದು, ದೇವತೆಗಳಿಂದ ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ಈ ಮಾತಿಗೆ ನನ್ನ ಬಳಿ ಪುರಾವೆಗಳಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಪರ-ವಿರೋಧ ಚರ್ಚೆಗಳು ಶುರುವಾಗಿದೆ.
ದಾವಣಗೆರೆ ಜಿಲ್ಲೆಯ ಹರಿಹರ ನಗರದ ಹೊರವಲಯದ ಕೃಷ್ಣಪ್ಪ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಕಳೆದ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ರವರ 133ನೇ ಹಾಗೂ ಪ್ರೊ.ಬಿ.ಕೃಷ್ಣಪ್ಪರವರ 86ನೇ ಜನ್ಮ ದಿನಾಚರಣೆ ಹಾಗೂ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಅವರು ಮಾತನಾಡಿದರು. ರಾಮಾಯಣದ ರಾಮ ದಶರಥ ಮಹಾರಾಜರ ಮಗ ಎಂಬುದಷ್ಟೆ ತಿಳಿದ ವಿಷಯ. ಆದರೆ ರಾಮ ದಶರಥ ಮಹಾರಾರಜರಿಂದ ಹುಟ್ಟಿಲ್ಲ, ಆತ ಓರ್ವ ಪುರೋಹಿತನೊಬ್ಬನಿಂದ ಹುಟ್ಟಿದ. ಅದೇ ಮಾದರಿ ಮಹಾಭಾರತದ ವಿಚಾರಕ್ಕೆ ಬಂದರೇ ಮಕ್ಕಳು ಹುಟ್ಟಿಸಲಾಗಲ್ಲ ಎಂಬ ಶಾಪಗ್ರಸ್ಥನಾಗಿದ್ದ ಯುಧಿಷ್ಟಿರ, ಭೀಮ, ಅರ್ಜುನ, ನಕುಲ ಮತ್ತು ಸಹದೇವ ಎಂಬ ಐವರು ಪಾಂಡವ ಸಹೋದದರ ತಂದೆ ಕುರು ರಾಜ್ಯದ ರಾಜ ಪಾಂಡು ಎಂದಿದ್ದರು. ಪಾಂಡವರು ಮಾತ್ರ ದೇವತೆಗಳ ಅನುಗ್ರಹದಿಂದ ಹುಟ್ಟಿದ್ದರು ಎಂದು ಭಗವಾನ್ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೂ ಪುರಣಾಗಳನ್ನು ಅಭ್ಯಾಸ ಮಾಡುವುದರಿಂದ ಯಾವುದೇ ಪ್ರಯೋಜನವಾಗಲ್ಲ. ಈ ಪುರಾಣಗಳು ಹಾಗೂ ಮನುಸ್ಮೃತಿಯಲ್ಲಿ ಬ್ರಾಹ್ಮಣರನ್ನು ಬಿಟ್ಟು ಉಳಿದೆಲ್ಲಾ ಜಾತಿ, ಜನಾಂಗದವರನ್ನು ಶೂದ್ರರು ಎಂದು ಕರೆಯಲಾಗಿದೆ. ಶೂದ್ರರೆಲ್ಲಾ ಬ್ರಾಹ್ಮಣರ ಸೇವಕರು ಎಂದು ಹೇಳಿದೆ. ಮನುಷ್ಯರನ್ನು ಮನುಷ್ಯರಂತೆ ಕಾಣದ ಈ ಪುರಾಣ, ಮನುಸ್ಮೃತಿ ದೇಶದ ಬಹುಸಂಖ್ಯಾತರಿಗೆ ಏನು ಪ್ರಯೋಜನವಿಲ್ಲ. ಆದರೆ ಕೆಲವರು ಪುರಾಣ, ಮನುಸ್ಮೃತಿಯನ್ನು ತಲೆಯ ಮೇಲೆ ಹೊತ್ತುಕೊಂಡು ಅದರಂತೆ ಆಡಳಿ ನಡೆಸುತ್ತೇವೆಂದು ಕುಣಿಯುತ್ತಿರುತ್ತಾರೆ. ಅಮೇರಿಕಾದ ಜಗತ್ ಪ್ರಸಿದ್ದ ಕೊಲಂಬಿಯಾ ವಿಶ್ವವಿದ್ಯಾನಿಲಯದ ಅಧ್ಯಾಪಕರು ಜಗತ್ತಿನ ಶ್ರೇಷ್ಟ ವಿದ್ವಾಂಸ ಡಾ.ಅಂಬೇಡ್ಕರ್ ಎಂದು ನಿರ್ಣಯ ಮಾಡಿದ್ದಾರೆ. ಅಂಬೇಡ್ಕರ್ ರವರಿಗೆ ತಿಳಿಯದ ವಿಷಯವೇ ಇರಲಿಲ್ಲ. ಅವರು ಅಸ್ಪೃಶ್ಯರಿಗೆ ನ್ಯಾಯ ಕೊಡಿಸುವ ಉದ್ದೇಶದಿಂದ ಜಗತ್ತಿನ ಎಲ್ಲಾ ವಿಷಯಗಳನ್ನು ಅಭ್ಯಾಸ ಮಾಡಿದ್ದರು ಎಂದರು.
ಇನ್ನೂ ಹಿಂದೂ ಧರ್ಮದಿಂದ ಬೇಸತ್ತ ಅಂಬೇಡ್ಕರ್ ರವರು ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕಿಂತ ಹೆಚ್ಚು ಸಮಾನತೆ ಹಾಗೂ ವೈಜ್ಞಾನಿಕತೆಯನ್ನು ಪ್ರತಿಪಾದಿಸುವ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಬ್ರಾಹ್ಮಣರನ್ನು ಹೊರತುಪಡಿಸಿ ಲಿಂಗಾಯಿತರು, ಕುರುಬರು ಸೇರಿದಂತೆ ಎಲ್ಲಾ ಜಾತಿ, ಜನಾಂಗದವರು ಶೂದ್ರು ಎಂದು ಪರಿಗಣಿಸಲ್ಪಡುತ್ತಾರೆ. ದಲಿತರೆಂದರೇ ಕೇವಲ ಎಸ್.ಸಿ-ಎಸ್.ಟಿ ಮಾತ್ರವಲ್ಲ ಎಲ್ಲಾ ಜಾತಿ ಜನಾಂಗದ ಬಡವರು, ಶೋಷಿತರೂ ಸಹ ದಲಿತರೇ ಆಗಿರುತ್ತಾರೆ ಎಂದರು.