ಸ್ಟೈಲೀಷ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಸಿನೆಮಾ ದೇಶ ಮಾತ್ರವಲ್ಲದೇ ವಿಶ್ವದಾದ್ಯಂತ ಭಾರಿ ಸದ್ದು ಮಾಡಿದೆ. ಬಾಕ್ಸ್ ಆಫೀಸ್ ನಲ್ಲಿ ಕೋಟಿಗಟ್ಟಲೇ ಕಲೆಕ್ಷನ್ ಮಾಡಿದೆ. ಜೊತೆಗೆ ಅನೇಕ ಅವಾರ್ಡ್‌ಗಳನ್ನು ಸಹ ಪಡೆದುಕೊಂಡಿದೆ. ಇದೀಗ ಪುಷ್ಪಾ-2 (Pushpa 2) ಸಿನೆಮಾ ಸಹ ಶೀಘ್ರದಲ್ಲೇ ತೆರೆಕಾಣಲಿದೆ. ಈ ಸಂಬಂಧ ಚಿತ್ರತಂಡ ಸಿನೆಮಾ ಟ್ರೈಲರ್ ಸಹ ಬಿಡುಗಡೆ ಮಾಡಲು ಪ್ಲಾನ್ ಮಾಡಿದೆ. ನವೆಂಬರ್ 17 ರಂದು ಪುಷ್ಪಾ-2 (Pushpa 2) ಸಿನೆಮಾದ ಟ್ರೈಲರ್ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಸೋಷಿಯಲ್ ಮಿಡಿಯಾದಲ್ಲಿ ಅಪ್ಡೇಟ್ ನೀಡಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಅಲ್ಲು ಅರ್ಜುನ್ ಫ್ಯಾನ್ಸ್ ಪುಲ್ ಖುಷಿಯಾಗಿದ್ದಾರೆ.

ಕೆಲವು ದಿನಗಳಿಂದ ಪುಷ್ಪಾ-2 (Pushpa 2) ಸಿನೆಮಾದ ಟ್ರೈಲರ್ ಬಿಡುಗಡೆಯ ಬಗ್ಗೆ ಅಂತೆ ಕಂತೆಗಳು ಉದ್ಬವಿಸಿದ್ದವು. ನ.15 ರಂದು ಪುಷ್ಪಾ-2 (Pushpa 2) ಸಿನೆಮಾದ ಟ್ರೈಲರ್ ಬಿಡುಗಡೆಯಾಗಲಿದೆ ಎಂದು ಗಾಸಿಪ್ ಹಬ್ಬಿಸಿದ್ದರು. ಆದರೆ ಇದೀಗ ಸ್ವತಃ ಅಲ್ಲು ಅರ್ಜುನ್ ರವರೇ ನ.17 ರಂದು ಪುಷ್ಪಾ-2 ಸಿನೆಮಾದ ಟ್ರೈಲರ್ ರಿಲೀಸ್ ಆಗಲಿದೆ ಎಂದು ಸೋಷಿಯಲ್ ಮಿಡಿಯಾ ಮೂಲಕ ಅಪ್ಡೇಟ್ ನೀಡಿದ್ದಾರೆ. ಪುಷ್ಪಾ-2 ಸಿನಿಮಾದ ಟ್ರೇಲರ್ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ನೀಡಲು ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಇದರಲ್ಲಿ ಅಲ್ಲು ಅರ್ಜುನ್ ಅವರು ರಗಡ್ ಲುಕ್ ಕೊಟ್ಟಿದ್ದಾರೆ. ಹೆಗಲ ಮೇಲೆ ಬಂದೂಕು ಹಿಡಿದು ಬರುತ್ತಿರುವ ರೀತಿಯಲ್ಲಿ ಅವರು ಪೋಸ್ ನೀಡಿದ್ದಾರೆ. ಈ ಪೋಸ್ಟರ್ ನೋಡಿದ ಬಳಿಕ ಅಭಿಮಾನಿಗಳಲ್ಲಿ ಟ್ರೈಲರ್ ಮೇಲೆ ಮತಷ್ಟು ನಿರೀಕ್ಷೆ ಹುಟ್ಟುವಂತೆ ಮಾಡಿದೆ.
ಪುಷ್ಪಾ-2 (Pushpa 2) ಸಿನೆಮಾದ ಟ್ರೈಲರ್ ಪೋಸ್ಟ್ ಇಲ್ಲಿದೆ ನೋಡಿ: Click Here
ಸದ್ಯ ಲಭ್ಯವಾಗಿರುವ ಮಾಹಿತಿಯಂತೆ ನ.17 ರಂದು ಸಂಜೆ 6 ಗಂಟೆ 3 ನಿಮಿಷಕ್ಕೆ ಪುಷ್ಪಾ-2 ಸಿನೆಮಾದ ಟ್ರೈಲರ್ ಬಿಡುಗಡೆಯಾಗಲಿದೆ. ಈ ಟ್ರೈಲರ್ ರಿಲೀಸ್ ಆದ ಬಳಿಕ ಸಿನೆಮಾದ ಮೇಲೆ ಕೊಂಚ ಐಡಿಯಾ ಸಿಗಲಿದೆ. ಈ ಸಿನೆಮಾದ ನಿರ್ದೇಶಕ ಸುಕುಮಾರ್ ತುಂಬಾನೆ ಸಮಯ ತೆಗೆದುಕೊಂಡು ಸಿನೆಮಾ ಮಾಡಿದ್ದಾರೆ. ಸದ್ಯ ಸಿನೆಮಾದ ಕೊನೆಯ ಹಂತದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಸಿನೆಮಾ ಪ್ಯಾನ್ ಇಂಡಿಯಾ ರೇಂಜ್ ನಲ್ಲಿ ಬಿಡುಗಡೆಯಾಗಲಿದೆ. ಡಿಸೆಂಬರ್ 5 ರಂದು ಈ ಸಿನೆಮಾ ಅದ್ದೂರಿಯಾಗಿ ತೆರೆಕಾಣಲಿದೆ. ತೆಲುಗು, ತಮಿಳು, ಕನ್ನಡ, ಮಲಯಾಳಂ, ಹಿಂದೆ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅಲ್ಲು ಅರ್ಜುನ್ ಜೊತೆಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಸೇರಿದಂತೆ ಡಾಲಿ ಧನಂಜಯ್, ಫಹಾದ್ ಫಾಸಿಲ್ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಈ ಸಿನೆಮಾ ದೇಶದ ಯಾವೆಲ್ಲಾ ಸಿನೆಮಾಗಳ ರೆಕಾರ್ಡ್‌ಗಳನ್ನು ಬ್ರೇಕ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.