R Ashok : ಪ್ರಿಯಾಂಕ್ ಕಲಬುರಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕರರೂ ಅಲ್ಲ ಎಂದ ವಿಪಕ್ಷ ನಾಯಕ ಆರ್.ಅಶೋಕ್…!

R Ashok – ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ರಾಜಿನಾಮೆ ನೀಡಬೇಕೆಂದು ವಿಪಕ್ಷಗಳು ಒತ್ತಾಯಿಸುತ್ತಿದೆ. ಈ ಸಂಬಂಧ ವಿಪಕ್ಷ ನಾಯಕ ಆರ್‍.ಅಶೋಕ್ ಕಿಡಿ ಕಾರಿದ್ದಾರೆ. ಊರಿಗೆಲ್ಲಾ ಉಪದೇಶ ಮಾಡುವಂತಹ ಪ್ರಿಯಾಂಕ್ ಖರ್ಗೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್‍ ಸಂವಿಧಾನ ಅನ್ವಯ ಆಗುವುದಿಲ್ಲವೇ, ಪ್ರಿಯಾಂಕ್ ಖರ್ಗೆ ಕಲಬುರಗಿಯ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕರರೂ ಅಲ್ಲ ಎಂದು ಆಕ್ರೋಷ ಹೊರಹಾಕಿದ್ದಾರೆ.

R Ashok Fires on Priyank Kharge 1

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕಾ ಪ್ರಕಟಣೆ ಹೊರಡಿಸಿರುವ ಆರ್‍.ಅಶೋಕ್, ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಊರಿಗೆಲ್ಲ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕರೂ ಅಲ್ಲ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕು. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಆಕ್ರೋಷ ಹೊರಹಾಕಿದ್ದಾರೆ.

ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್ ನೋಟ್‌ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ. ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು, ಕೂಡಲೇ ಹುಡುಕಿ ಕೊಡುವಂತೆ ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ಆದರೆ ದೂರು ದಾಖಲಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ.

R Ashok Fires on Priyank Kharge 0

ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್ ನೀಡದೇ ವಂಚನೆ ಮಾಡಿದ್ದಾರೆ. ಮಾತ್ರವಲ್ಲದೇ 1 ಕೋಟಿ ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ. ಜೊತೆಗೆ ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. ಇಂತಹ ಗೂಂಡಾಗಳನ್ನು ಆಪ್ತರಾಗಿ ಇಟ್ಟುಕೊಂಡ ಸಚಿವರು ಕೂಡ ಇಲ್ಲಿ ಹೊಣೆಗಾರರು. ಇನ್ನೂ ರಾಜು ಕಪನೂರ್, ಖರ್ಗೆ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾನೆ. ಕಲಬುರಗಿ ಮಹಾನಗರ ಪಾಲಿಕೆ ಸದಸ್ಯನೂ ಆಗಿದ್ದ ರಾಜು ಕಪನೂರ್, ಈ ಹಿಂದೆ ಅಕ್ರಮ ಪಿಸ್ತೂಲ್ ಹೊಂದಿರುವ ಆರೋಪದಲ್ಲಿ ಬಂಧಿತನಾಗಿದ್ದ. ಇವೆಲ್ಲ ಗೊತ್ತಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಆಪ್ತರಿಂದ ದೂರವಾಗಿಲ್ಲ. ಇಂತಹ ಗೂಂಡಾ, ಸಚಿವರ ಆಪ್ತ ಎಂದರೆ ನಮ್ಮ ರಾಜ್ಯದಲ್ಲಿ ಗೂಂಡಾಗಳ, ರೌಡಿಗಳ ಸರ್ಕಾರ ನಡೆಯುತ್ತಿದೆ ಎಂದರ್ಥ ಎಂದು ಆರ್.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *

Scroll to Top