ಕರ್ನಾಟಕದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಂತೂ ಮಳೆಯ ಅವಾಂತರ ಹೇಳತೀರದ್ದಾಗಿದ್ದೆ. ಇಡೀ ಬೆಂಗಳೂರು ಮಳೆಗೆ ತತ್ತರಿಸಿಹೋಗಿದೆ. ಜೊತೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಸಹ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇನ್ನೂ ರಾಜ್ಯದ ಹಲವು ಕಡೆ ಮುಂದಿನ 6 ದಿನಗಳ ಕಾಲ ಭಾರಿ (Rain Alert) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದಿನಿಂದ 6 ದಿನಗಳ ಕಾಲ ಕರ್ನಾಟಕದ ಹಲವು ಕಡೆ ಭಾರಿ ಮಳೆಯಾಗಲಿದೆ. ಬೆಂಗಳೂರು, ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಧಾರವಾಡ, ಕೋಲಾರ, ಮಂಡ್ಯ, ಚಿತ್ರದುರ್ಗ ದಾವಣಗೆರೆ, ಹಾವೇರಿ, ಕಡೂರು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಉಡುಪಿ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
Weather update : https://x.com/KarnatakaSNDMC/status/1848899880086839782
ಇನ್ನೂ ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಹಾಸನ, ಕೊಡಗು, ರಾಮನಗರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾದರೆ, ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳು ಹಾಗೂ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಎಚ್ಚರಿಸಿದೆ. ಇನ್ನು ಉತ್ತರ ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Weather update : https://x.com/Indiametdept/status/1848695189818441934
ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಅ.23) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬುಧವಾರ, ಗುರುವಾರ ಎರಡು ದಿನ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ಕಾರಣಕ್ಕೆ ಅ.23 ರಂದು ನಗರದ ಪ್ರಾಥಮಿಕ, ಫ್ರೌಡಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಇತ್ತ ಮಳೆ ಹೆಚ್ಚಾಗಿದ್ದರ ಎಫೆಕ್ಟ್ ಐಟಿ ವಲಯಗಳಿಗೂ ತಟ್ಟಿದ್ದು, ಅಲರ್ಟ್ ಘೋಷಣೆ ಹಿನ್ನೆಲೆ ಹಲವು ಕಂಪನಿಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿವೆ ಎಂದು ತಿಳಿದುಬಂದಿದೆ.