ದೇಶದ ಸಿನಿರಂಗದ ಸ್ಟಾರ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಸೆಪ್ಟೆಂಬರ್ 30 ರಂದು ದಿಢೀರ್ ಅಸ್ವಸ್ಥಗೊಂಡು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ವೇಳೆ ರಜನಿಕಾಂತ್ ರವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಜನಿಕಾಂತ್‌ಗೆ (Rajinikanth) ಎಂಡೋವಾಸ್ಕುಲರ್ ಚಿಕಿತ್ಸೆ ಮೂಲಕ ಸ್ಟಂಟ್ ಅಳವಡಿಕೆ ಮಾಡಲಾಗಿದೆ. ರಕ್ತನಾಳ ಉಬ್ಬಿದ್ದರಿಂದ ಸ್ಟಂಟ್ ಹಾಕಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಸೋಮವಾರ (ಸೆ.30) ತಡರಾತ್ರಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್‌ರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಸೂಕ್ತ ಚಿಕಿತ್ಸೆ ಕೂಡ ನೀಡಲಾಗಿದೆ. ಇದೀಗ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹೃದಯಲ್ಲಿ ಕಂಡು ಬಂದ ರಕ್ತನಾಳಗಳ ಊತಕ್ಕೆ ಸ್ಟಂಟ್ ಅಳವಡಿಕೆ ಮಾಡಲಾಗಿದೆ. ಸದ್ಯ ರಜನಿಕಾಂತ್ ಆರೋಗ್ಯ ಸ್ಥಿರವಾಗಿದೆ. ಸರ್ಜರಿ ಮಾಡದೆ ಟ್ರಾನ್ಸ್‌ಕ್ಯಾಥಟರ್ ಚಿಕಿತ್ಸೆ ಮೂಲಕ ಸ್ಟಂಟ್ ಅಳವಡಿಸಲಾಗಿದೆ. ಈ ಮೂಲಕ ರಜನಿಕಾಂತ್ ಆಪ್ತರು, ಅಭಿಮಾನಿಗಳಿಗೆ ಮಾಹಿತಿ ನೀಡುತ್ತಿದ್ದೆವೆ. ರಜನಿಕಾಂತ್ ರವರ ಆರೋಗ್ಯ ಗಮದಲ್ಲಿಟ್ಟುಕೊಂಡು ಯಶಸ್ವಿಯಾಗಿ ನೀಡಿದ್ದಾರೆ. ರಜನಿಕಾಂತ್ ಸದ್ಯ ಚೇತರಿಸಿಕೊಳ್ಳುತ್ತಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆಯಾಗಲಿದ್ದಾರೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ಉಲ್ಲೇಖಿಸಲಾಗಿದೆ.
ಇನ್ನೂ ರಜನಿಕಾಂತ್ ರವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರೆಟಿಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಇದೀಗ ರಜನಿಕಾಂತ್ ರವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಸುದ್ದಿ ಹೊರಬರುತ್ತಿದ್ದಂತೆ ಅವರ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೂ ರಜನಿಕಾಂತ್ ರವರಿಗೆ 73 ವರ್ಷ ವಯಸ್ಸಾಗಿದ್ದು, ವಯೋಸಹಜ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸದ್ಯ ರಜನಿಕಾಂತ್ ರವರು ವೆಟ್ಟಯ್ಯನ್, ಕೂಲಿ ಸಿನೆಮಾದಲ್ಲಿ ನಟಿಸಿದ್ದಾರೆ. ಅ.10 ರಂದು ವೆಟ್ಟಯ್ಯನ್ ಸಿನೆಮಾ ಬಿಡುಗಡೆಯಾಗಲಿದ್ದು, ಸಿನೆಮಾದ ಪ್ರಮೋಷನ್ ನಲ್ಲಿ ಭಾಗಿಯಾಗುವ ಸಮಯದಲ್ಲಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.