Ramanagara – ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನಡೆದ ಅಮಾನುಷ ಘಟನೆಯೊಂದು ತೀವ್ರ ಆಘಾತವನ್ನುಂಟು ಮಾಡಿದೆ. ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ (Hakkipikki Colony) ವಿಕಲಚೇತನ ಬಾಲಕಿ (14 ವರ್ಷ) ಅವರು ಮೇ 11 ರಂದು ನಾಪತ್ತೆಯಾಗಿದ್ದು, ಮರುದಿನ ಆಕೆಯ ಮೃತದೇಹವು ಗ್ರಾಮದ ಸಮೀಪದ ರೈಲು ಹಳಿ ಪಕ್ಕದಲ್ಲಿ ಪತ್ತೆಯಾಗಿದೆ. ಬಾಲಕಿಯನ್ನು ಅತ್ಯಾಚಾರ (Rape) ಎಸಗಿ ಕೊಲೆ (Murder) ಮಾಡಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆ ರಾಮನಗರ ಜಿಲ್ಲೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Ramanagara – ಪೊಲೀಸರಿಂದ ತೀವ್ರ ತನಿಖೆ
ಈ ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸರು (Bidadi Police) ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚುವ ಭರವಸೆಯಲ್ಲಿದ್ದಾರೆ. ಖುಷಿ ಮೇಲೆ ಅತ್ಯಾಚಾರ ನಡೆದಿದೆ ಎಂಬ ಕುಟುಂಬಸ್ಥರ ಸಂಶಯದ ಹಿನ್ನೆಲೆಯಲ್ಲಿ, ಪೊಲೀಸರು ಕೆಲವು ನಿರ್ಣಾಯಕ ಸಾಕ್ಷ್ಯಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇಂತಹ ಹೇಯ ಕೃತ್ಯ ಎಸಗಿದವರಿಗೆ ಗಲ್ಲು ಶಿಕ್ಷೆಯೇ ಸೂಕ್ತ ಎಂದು ಅವರು ಒತ್ತಾಯಿಸಿದ್ದಾರೆ.
Ramanagara – ಭದ್ರಾಪುರ ಗ್ರಾಮಸ್ಥರಿಂದ ಪ್ರತಿಭಟನೆ, ಆರೋಪಿಗಳ ಬಂಧನಕ್ಕೆ ಒತ್ತಾಯ
ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಭದ್ರಾಪುರ ಗ್ರಾಮಸ್ಥರು ರಾಮನಗರದಲ್ಲಿ ಪ್ರತಿಭಟನೆಯನ್ನು ನಡೆಸಿದರು. ಪ್ರತಿಭಟನಾಕಾರರು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ, ಗಲ್ಲಿಗೇರಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ, ರಾಜ್ಯ ಎಸ್ಸಿ-ಎಸ್ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಅವರು ಗ್ರಾಮಕ್ಕೆ ಹಾಗೂ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ಅಲ್ಲದೆ, ಸರ್ಕಾರದಿಂದ ನ್ಯಾಯ ಒದಗಿಸಿಕೊಡುವ ಭರವಸೆಯನ್ನು ನೀಡಿದರು.
Ramanagara – ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ, ಪರಿಹಾರ ವಿತರಣೆ ಮತ್ತು ನ್ಯಾಯದ ಭರವಸೆ
ಬುಧವಾರ (ಮೇ 14) ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DCM D.K.Shivakumar) ಅವರು ಭದ್ರಾಪುರ ಗ್ರಾಮಕ್ಕೆ ಭೇಟಿ ನೀಡಿ ಖುಷಿಯ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅವರು ಕುಟುಂಬಸ್ಥರಿಗೆ ಪರಿಹಾರದ ಚೆಕ್ ಅನ್ನು ವಿತರಿಸುವುದರ ಜೊತೆಗೆ, ಸೂಕ್ತ ತನಿಖೆ ನಡೆಸಿ ಬಾಲಕಿಯ ಸಾವಿಗೆ ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು. Read this also : ಹುಬ್ಬಳ್ಳಿಯಲ್ಲಿ ದಾರುಣ ಘಟನೆ: ಬಾಲಕಿಯ ಕೊಲೆ ಆರೋಪಿ ಪೊಲೀಸ್ ಗುಂಡಿಗೆ ಬಲಿ…!
ಪ್ರಕರಣದ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನಾಪತ್ತೆಯಾಗಿದ್ದ ಬಾಲಕಿ ರೈಲು ಹಳಿ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿರುವುದು ದುರದೃಷ್ಟಕರ. ಮೇಲ್ನೋಟಕ್ಕೆ ಇದು ಮಾರಣಾಂತಿಕ ಹಲ್ಲೆ ನಡೆಸಿ ಮಾಡಿರುವ ಕೊಲೆ ಎಂದು ತಿಳಿದುಬಂದಿದೆ. ಈ ಕೊಲೆ ಪ್ರಕರಣವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ತಾವು ಖುದ್ದಾಗಿ ಕುಟುಂಬಸ್ಥರ ಬಳಿ ಮಾಹಿತಿಯನ್ನು ಪಡೆದಿದ್ದು, ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕೆಲವು ಪ್ರಮುಖ ಸಾಕ್ಷ್ಯಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ವಿಶೇಷಚೇತನ ಬಾಲಕಿ ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದವಳಾಗಿದ್ದು, ಆಕೆಯ ತಾಯಿ ಮತ್ತು ಸಹೋದರಿಯೊಂದಿಗೆ ಮಾತನಾಡಿದ್ದೇನೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಂತ್ಯಸಂಸ್ಕಾರಕ್ಕೆ ಪರಿಹಾರವನ್ನು ನೀಡಲಾಗಿದ್ದು, ಅತ್ಯಾಚಾರ ನಡೆದಿದೆಯೇ ಅಥವಾ ಇಲ್ಲವೇ ಎಂಬುದು ಎಫ್‌ಎಸ್‌ಎಲ್ ವರದಿ ಬಂದ ನಂತರ ಖಚಿತವಾಗಲಿದೆ ಎಂದಿದ್ದಾರೆ.