ಬಿಜೆಪಿ ಶಾಸಕ ಮುನಿರತ್ನ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಡಿ ಅರೆಸ್ಟ್ ಆಗಿದ್ದಾರೆ. ಈ ಸಂಬಂದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಮೇಶ್ ಜಾರಕಿಹೋಳಿ (Ramesh Jarkiholi ) ಮಾತನಾಡಿದ್ದು, ಇದು ಸಿಡಿ ಶಿವು ಕೆಲಸ, ಮುನಿರತ್ನ ಬೈದಿದ್ದಾರೆ ಎಂಬುದು ಇನ್ನೂ ಸಾಬೀತಾಗಿಲ್ಲ. ಡಿ.ಕೆ.ಶಿ ತನ್ನ ವಿರೋಧಿಗಳನ್ನು ಜೈಲಿಗೆ ಹಾಕುತ್ತಾನೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಅಥಣಿಯಲ್ಲಿ ಮಾದ್ಯಮಗಳೊಂದಿಗೆ ರಮೇಶ್ ಜಾರಕೀಹೊಳಿ ಮಾತನಾಡಿದ್ದಾರೆ.

ಆರ್.ಆರ್.ನಗರ ಶಾಸಕ ಮುನಿರತ್ನ ನಾಯ್ಡು ಕಳೆದೆರಡು ದಿನಗಳ ಹಿಂದೆಯಷ್ಟೆ ಜಾತಿನಿಂದನೆ ಹಾಗೂ ಬೆದರಿಕೆ ಆರೋಪದ ಮೇರೆಗೆ ಬಂಧನವಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿರೋಧ ಪಕ್ಷಗಳ ನಾಯಕರು ಕಿಡಿಕಾರುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕೀಹೊಳಿ ಮಾತನಾಡಿದ್ದಾರೆ. ಡಿಕೆಶಿ ಕಂಪನಿ ರಾಜ್ಯದಲ್ಲಿ ಮೊದಲು ನನ್ನನ್ನು ಬಲಿ ಪಡೆದರು, ಬಳಿಕ ದೇವೇಗೌಡ ಕುಟುಂಬವನ್ನು ಬಲಿಪಡೆದರು, ಇದೀಗ ಮುನಿರತ್ನ ರವರನ್ನು ಬಲಿ ಪಡೆದುಕೊಳ್ಳುತ್ತಿದ್ದಾರೆ. ಮುಂದೆ ಯಾರನ್ನು ಬಲಿ ಪಡೆಯುತ್ತಾರೆ ಎಂಬುದನ್ನು ನೋಡಬೇಕಿದೆ. ಇದೆಲ್ಲವನ್ನೂ ನೋಡುತ್ತಾ ಇದ್ದರೇ ಒಂದು ಸಿನೆಮಾ ನೋಡಿದಂತಾಗುತ್ತದೆ. ಸಿಡಿ ಶಿವು ನಿಂದ ಕಾಂಗ್ರೇಸ್ ನಾಯಕರೂ ಸಹ ತೊಂದರೆ ಅನುಭವಿಸುತ್ತಿದ್ದು, ಮುಂದಿನ ದಿನಗಳಲ್ಲಿ ಮತಷ್ಟು ಸಿಡಿಗಳು ಹೊರಬರಲಿದೆ. ಸಿಡಿ ಬಗ್ಗೆ ಸಿಬಿಐ ತನಿಖೆಗೆ ನೀಡಬೇಕು, ಕರ್ನಾಟಕದಲ್ಲಿ ನಡೆಯುತ್ತಿರುವ ನಕಲಿ ಸಿಡಿ ಹಾವಳಿಗೆ ಪ್ರಧಾನಿ ಮೋದಿಯವರು ಸಿಬಿಐಗೆ ವಹಿಸುವ ಮೂಲಕ ತಡೆ ಹಾಕಬೇಕು ಎಂದು ಮನವಿ ಮಾಡಿದರು.
ವಿಜಯೇಂದ್ರನನ್ನು ನಾಯಕ ಎಂದು ಒಪ್ಪಲು ಸಾಧ್ಯವಿಲ್ಲ ಎಂದ ರಮೇಶ್ ಜಾರಕೀಹೊಳಿ:
ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ. ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ಆದರೆ ನಾನೆಂದೂ ಯಡಿಯೂರಪ್ಪನವರಿಗೆ ವಿರೋಧಿ ಅಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ. ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಮೊನ್ನೆ ಸಭೆಯಲ್ಲಿ ಹೇಳಿದ್ದೇವೆ. 15 ರಿಂದ 20 ಜನರ ಸಾಮೂಹಿಕ ನಾಯಕತ್ವದ ಕೈಯಲ್ಲಿ ನಾಯಕತ್ವ ಕೊಡುವಂತೆ ಮನವಿ ಮಾಡಿದ್ದೇವೆ ಎಂದರು.

ನಾಗಮಂಗಲ, ಮುಡಾ ಕೇಸ್ ಡೈವರ್ಟ್ ಮಾಡೋಕೆ ನನ್ನನ್ನು ಅರೆಸ್ಟ್ ಮಾಡಲಾಗಿದೆ ಎಂದ ಮುನಿರತ್ನ?
ಬೆಂಗಳೂರಿನ ಗುತ್ತಿಗೆದಾರರಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದ ಮೇರೆಗೆ ಬಂಧನವಾಗಿರುವ ಶಾಸಕ ಮುನಿರತ್ನರವರ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿದ್ದು, ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇನ್ನೂ ಈ ಪ್ರಕರಣದ ಸಂಬಂಧ ವಿಚಾರಣೆಯಲ್ಲಿ ಇದು ನನ್ನ ಆಡಿಯೋ ಅಲ್ಲ, ನನ್ನ ವಿರುದ್ದ ರಾಜಕೀಯ ಷಡ್ಯಂತ್ರ ಮಾಡಲಾಗಿದೆ. ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್ ಮಾಡಲು ನನ್ನನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಮುನಿರತ್ನ ಹೇಳಿದ್ದಾರೆ ಎಂದು ಕೆಲವೊಂದು ಮೂಲಗಳಿಂದ ತಿಳಿದುಬಂದಿದೆ.