ಸದ್ಯ ದೇಶದ ಅನೇಕ ಕಡೆ ಮಳೆಯ ಆರ್ಭಟ ಜೋರಾಗಿದೆ. ನದಿ ಕಾಲುವೆಗಳು ಜೋರಾಗಿ ಹರಿಯುತ್ತಿವೆ, ನೀರು ಅಂದರೇ ಬಹುತೇಕ ಎಲ್ಲರಿಗೂ ಇಷ್ಟ. ನೀರನ್ನು ನೋಡಲು ಹೋಗಿದ್ದ ಅನೇಕರು ಆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವಂತಹ ಘಟನೆಗಳು ನಡೆದಿರುತ್ತವೆ, ಇದೀಗ ಅಂತಹುದೇ ಘಟನೆಯೊಂದು ನಡೆದಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಬಾಲಕನ್ನನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿದ್ದಾರೆ. ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಬಾಲಕನನ್ನು ರಕ್ಷಣೆ ಮಾಡಿದ್ದು, ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಸದ್ಯ ಮಳೆಗಾಲ ಆರಂಭವಾಗಿದ್ದು, ಮಳೆಯಿಂದ ಅನೇಕ ಕಡೆ ಅವಾಂತರಗಳು ಸೃಷ್ಟಿಯಾಗಿದೆ. ಮರಗಳು ಉರುಳಿ ಬೀಳುತ್ತಿದೆ, ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಕೇರಳದಲ್ಲಿ ಕೆಲವು ದಿನಗಳ ಹಿಂದೆ ಮಳೆಯ ಆರ್ಭಟ ಜೋರಾಗಿಯೇ ಇತ್ತು. ನದಿ ದಡಕ್ಕೆ ಹೋದವರು ಅನೇಕರು ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುತ್ತಾರೆ. ನದಿ ದಡದಲ್ಲಿ ಆಟವಾಡುತ್ತಿದ್ದ ಬಾಲಕನೋರ್ವ ಆಯತಪ್ಪಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಅದನ್ನು ಕಂಡ ಸ್ಥಳೀಯರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ.
ಅಂದಹಾಗೆ ಈ ಘಟನೆ ನಡೆದಿರೋದು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ. ಶ್ರೀನಗರದ ಸಫಗತಲ್ ಪ್ರದೇಶದ ಸ್ಥಳೀಯ ನಿವಾಸಿಗಳು ಝೀಲಂ ನದಿಗೆ ಬಿದ್ದ ಏಳು ವರ್ಷ ಬಾಲಕನ ಪ್ರಾಣ ರಕ್ಷಿಸಿದ್ದಾರೆ. ನದಿಯ ದಡದಲ್ಲಿ ಆಟವಾಡುತ್ತಿದ್ದ ಬಾಲಕ ಇದ್ದಕ್ಕಿದ್ದಂತೆ ನದಿಗೆ ಬಿದ್ದಿದ್ದಾನೆ. ಹರಿಯುತ್ತಿರುವ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ, ಅದನ್ನು ಕಂಡ ಸ್ಥಳೀಯ ಯುವಕರು ನದಿಗೆ ಹಾರಿ ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ ಬಾಲಕನಿಗೆ ಸಿಪಿಆರ್ ಮಾಡುವ ಮೂಲಕ ಆತನ ಪ್ರಾಣ ರಕ್ಷಣೆ ಮಾಡಿದ್ದಾರೆ. ಅಂತಹ ಘಟನೆಗಳನ್ನು ನಾವು ಸಿನೆಮಾಗಳಲ್ಲಿ ನೋಡಿರುತ್ತೇವೆ. ಅದೇ ಮಾದರಿಯಲ್ಲಿ ರಿಯಲ್ ಆಗಿ ರಕ್ಷಣೆ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅನೇಕರು ಈ ವಿಡಿಯೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಭಾರಿ ಸದ್ದು ಮಾಡುತ್ತಿದೆ.
watch video: https://x.com/TheYouthPlus/status/1794689038324220347
ಇನ್ನೂ ಈ ವಿಡಿಯೋವನ್ನು @TheYouthPlus ಎಂಬ ಹೆಸರಿನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ 7 ವರ್ಷದ ಬಾಲಕನೋರ್ವ ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿರುತ್ತಾನೆ. ಈ ವೇಳೆ ಸ್ಥಳೀಯ ಯುವಕರು ಆತನನ್ನು ರಕ್ಷಣೆ ಮಾಡಿದ್ದಾರೆ. ಈ ವಿಡಿಯೋ ಕಳೆದ ಮೇ.26 ರಂದು ಹಂಚಿಕೊಂಡಿದ್ದು, ಮಿಲಿಯನ್ ಗಟ್ಟಲೇ ವೀಕ್ಷಣೆ ಪಡೆದುಕೊಂಡಿದ್ದು, ಬಾಲಕನನ್ನು ರಕ್ಷಣೆ ಮಾಡಿದ ಯುವಕರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.