NIACL – The New India assurance ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. NIACL ನಲ್ಲಿ ಖಾಲಿಯಿರುವ 500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವಿಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿ.17 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಈ ಹುದ್ದೆಗಳಿಗೆ ಏನೆಲ್ಲಾ ನಿಯಮಗಳಿವೆ. ಅರ್ಜಿ ಸಲ್ಲಿಕೆಯ ವಿಧಾನ, ವಯೋಮಿತಿ, ಅರ್ಜಿ ಶುಲ್ಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.
ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿ. ನಲ್ಲಿ ಖಾಲಿಯಿರುವ 500 ಹುದ್ದೆಗಳ ನೇಮಕಾತಿ ನಡೆಯಲಿದೆ. NIACL ನಲ್ಲಿ ಖಾಲಿಯಿರುವ 500 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿ.17 ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭ ಮಾಡಲಾಗುತ್ತದೆ. ಈ ಅಧಿಸೂಚನೆಗೆ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿ ಇರುವ ನೋಟಿಫಿಕೆಶನ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.
NIACL – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- NIACL ನ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಗಳಿಂದ ಯಾವುದೇ ಪದವಿ ಪಡೆದಿರಬೇಕು. ತಾಂತ್ರಿಕ ಅಥವಾ ತಾಂತ್ರಿಕೇತರ ವಿಷಯದ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.
- ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಗಳಾಗಿರಬೇಕು.
- ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯಸ್ಸು ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
NIACL – ಪ್ರಮುಖ ದಿನಾಂಕಗಳು ಇಲ್ಲಿವೆ:
- ವಿವರವಾದ ಅಧಿಸೂಚನೆ ರಿಲೀಸ್ ದಿನ- 17 ಡಿಸೆಂಬರ್ 2024
- ಅರ್ಜಿ ಆರಂಭ ಆಗುವ ದಿನಾಂಕ- 17 ಡಿಸೆಂಬರ್ 2024
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ- 01 ಜನವರಿ 2025
NIACL – Important Links :
Description | Link |
NIACL Assistant Recruitment 2024 Short Notice | Notice |
NIACL Assistant Recruitment 2024 Official Notification (Soon) | Download Here |
NIACL Assistant Recruitment 2024 OLD Notification | OLD Notification |
NIACL Assistant Recruitment 2024 Apply Online (From 17.12.2024) | Click Here |
NIACL Official Website | Visit Here |