Friday, November 22, 2024

ಇನ್ನು ಮುಂದೆ ಹೊರಗುತ್ತಿಗೆ ನೌಕರಿಗೂ ಮೀಸಲಾತಿ, ಕರ್ನಾಟಕ ಸರ್ಕಾರದ ಹೊಸ ಆದೇಶ….!

ಕರ್ನಾಟಕ ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ಮೇರೆಗೆ ನೇಮಕಾತಿ ಮಾಡಿಕೊಳ್ಳುವಂತಹ ಹುದ್ದೆಗಳಿಗೆ ಇನ್ನು ಮುಂದೆ ಮೀಸಲಾತಿಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂಬ ಆದೇಶವೊಂದನ್ನು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್‍, ಸ್ವಚ್ಚತಾ ಸಿಬ್ಬಂದಿ ಹಾಗೂ ಗ್ರೂಪ್ ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ಭರ್ತಿ ಮಾಡಿಕೊಳ್ಳುವಾಗ ಹೊಸ ಆದೇಶ ಪಾಲನೆ ಮಾಡಬೇಕೆಂದು ಹೊಸ ಆದೇಶದಲ್ಲಿ ಸೂಚಿಸಿದೆ.

ಇನ್ನೂ ರಾಜ್ಯ ಸರ್ಕಾರದಲ್ಲಿ ಇನ್ನು ಮುಂದೆ ಯಾವುದೇ ಹೊರಗುತ್ತಿಗೆ ನೇಮಕಾತಿ ಮಾಡುವಾಗ ಮೀಸಲಾತಿಯನ್ನು ಪಾಲನೆ ಮಾಡಬೇಕಿದೆ. ಕಳೆದ 2023ರ ಡಿಸೆಂಬರ್‍ ಮಾಹೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಗೆ ಸಂಬಂಧಿಸಿದಂತೆ ಮೀಸಲಾತಿ ನೀಡಿಯನ್ನು ಜಾರಿಗೊಳಿಸಲು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಅದರಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವಂತ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

karnataka government new order for outsourceing recruitment 1

ಕರ್ನಾಟಕ ರಾಜ್ಯ ಮೀಸಲಾತಿ ನಿಯಮಗಳು ಈ ಕೆಳಕಂಡತಿದೆ:

  • ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
  • ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
  • ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
  • ಟೆಂಡರ್‌ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ, ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಟೆಂಡರ್ ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
  • ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ/ ಅರ್ಧದಲ್ಲಿ ಬಿಟ್ಟಿದ್ದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
  • ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
  • ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
  • ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ. ಅಲ್ಲದೇ ಸೂತ್ತೋಲೆಯಲ್ಲಿ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು/ ಸ್ವಾಯತ್ತ ಸಂಸ್ಥೆಗಳು/ ನಿಗಮಗಳು/ ಮಂಡಳಿಗಳು/ ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
by Admin
by Adminhttp://ismkannadanews.com
Welcome to ISM News, if you want to contact us, then feel free to say anything about www.ismkannadanews.com. We'll appreciate your feedback.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles

error: Content is protected !!