ಅನೇಕ ವಿದ್ಯಾವಂತರು ಕೇಂದ್ರ ಸರ್ಕಾರಿ ಹುದ್ದೆಗಳನ್ನು ಪಡೆಯುವ ನಿರೀಕ್ಷೆಯಲ್ಲಿರುತ್ತಾರೆ. ಅಂತಹವರಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಬರೊಬ್ಬರಿ 4660 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಿದೆ. ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ಅರ್ಜಿ ಸಲ್ಲಿಕೆ ಸೇರಿದಂತೆ ವಿವರಿಗಳಿಗಾಗಿ ಮುಂದೆ ಓದಿ.
ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ರೈಲ್ವೆ ರಕ್ಷಣಾ ಪಡೆಯಲ್ಲಿ ಒಟ್ಟು 4660 ಹುದ್ದೆಗಳು ಖಾಲಿಯಿವೆ. ಸಬ್ ಇನ್ಸ್ ಪೆಕ್ಟರ್ 452 ಹಾಗೂ ಕಾನಿಸ್ಟೇಬಲ್ 4208 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮೇ.15 ಕೊನೆಯ ದಿನಾಂಕವಾಗಿದೆ. ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಯಾವುದಾದರೂ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಕಾನಿಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು SSLC ಉತ್ತೀರ್ಣರಾಗಿರಬೇಕು.
ಇನ್ನೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಮಾಸಿಕ 35400 ರೂಪಾಯಿ ಹಾಗೂ ಕಾನಿಸ್ಟೇಬಲ್ ಹುದ್ದೆಗೆ ಆಯ್ಕೆ ಆಗುವವರಿಗೆ ಮಾಸಿಕವಾಗಿ 21700 ರೂಪಾಯಿ ನೀಡಲಾಗುತ್ತದೆ. ಇದರ ಜೊತೆಗೆ ಕೇಂದ್ರ ಸರ್ಕಾರದ ನಿಯಮದಂತೆ ವೇತನ, ಭತ್ಯೆಗಳು ಸಹ ಲಭ್ಯವಾಗಲಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ಗರಿಷ್ಟ 28 ವರ್ಷ ವಯೋಮಿತಿ ನಿಗಧಿಪಡಿಸಲಾಗಿದೆ. ಮೀಸಲಾತಿಗೆ ಅನುಗುಣವಾಗಿ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷ, ಇತರೆ ಹಿಂದೂಳಿದ ವರ್ಗದವರಿಗೆ 03 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆ ಸಿಗಲಿದೆ.
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 500 ರೂಪಾಯಿ ಹಾಗೂ ಎಸ್‌ಸಿ, ಎಸ್‌ಟಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ / EWS/ PwBD ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ ನಿಗಧಿಪಡಿಸಿದೆ. ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕವೇ ಪಾವತಿ ಮಾಡಬೇಕಿದೆ. ಅರ್ಜಿ ಸಲ್ಲಿಸಿದ ಬಳಿಕ ಇಲಾಖೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ನಡೆಸಿ ಬಳಿಕ ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು. ಕರ್ನಾಟಕದ ಅಭ್ಯರ್ಥಿಗಳು https://www.rrbbnc.gov.in/ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.