ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ವೈಟ್ ಬೋರ್ಡ್ ಇರುವ ವಾಹನಗಳಲ್ಲಿ ಟ್ರಾವೆಲ್ಸ್ ನಡೆಸುತ್ತಿದ್ದ ಕಾರು ಮಾಲೀಕರಿಗೆ RTO ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಅನಧಿಕೃತವಾಗಿ ಟ್ರಾವೆಲ್ಸ್ ನಡೆಸುತ್ತಿದ್ದ ವೈಟ್ ಬೋರ್ಡ್ ಇರುವ ವೋಲ್ವೋ, ಎಲೆಕ್ಟ್ರಿಕ್ ಬಿವೈಡಿ, ಬಿ.ಎಂ.ಡಬ್ಲೂ ಸೇರಿದಂತೆ 40 ಕ್ಕೂ ಹೆಚ್ಚು ವಾಹನಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇದರ ಜೊತೆಗೆ 200 ಕ್ಕೂ ಹೆಚ್ಚು ಕೇಸ್ ಗಳನ್ನು ದಾಖಲು ಮಾಡಿದ್ದಾರೆ.
ಕೆಲವೊಂದು ಆಪ್ ಗಳ ಮೂಲಕ ಅನಧಿಕೃತವಾಗಿ ವೈಟ್ ಬೋರ್ಡ್ ಕಾರುಗಳನ್ನು ಬಾಡಿಗೆಗೆ ನೀಡಲಾಗುತ್ತಿತ್ತು. ಈ ಕುರಿತು ಎಚ್ಚೆತ್ತುಕೊಂಡ RTO ಅಧಿಕಾರಿಗಳು ವೈಟ್ ಬೋರ್ಡ್ ಟ್ರಾವೆಲ್ಸ್ ನಡೆಸುತ್ತಿದ್ದ ಕಾರು ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು ಹತ್ತು ತಂಡಗಳಾಗಿ ಕಾರ್ಯಾಚರಣೆ ನಡೆಸಿದ್ದಾರೆ. ತೆರಿಗೆ ಬಾಕಿಯಿರುವ, ವಾಹನಗಳ ಮೇಲೆ ಅನಧಿಕೃತವಾಗಿ ಅಡ್ವರ್ಟೈಸ್ಮೆಂಟ್ ಹಾಕಿರುವ, ಹೆಚ್ಚುವರಿ ಲೈಟ್ಸ್, ಬಸ್ ಮೆಲೆ ಹೆವಿ ಲೋಡ್ ಹೀಗೆ ಅನೇಕ ವಾಹನಗಳನ್ನು ಸೀಜ್ ಮಾಡಿದ್ದಾರೆ.
ಇನ್ನೂ ಬೆಂಗಳೂರಿನಲ್ಲಿ ಕೆಲವು ಕಾರು ಮಾಲೀಕರು ತಮ್ಮ ವೈಟ್ ಬೋರ್ಡ್ ಕಾರುಗಳಲ್ಲಿ ಟ್ರಾವೆಲ್ಸ್ ನಡೆಸುತ್ತಿರುವ ದೂರಿನ ಮೇರೆಗೆ ಅಂತಹ ವಾಹನಗಳನ್ನು ಸೀಜ್ ಮಾಡಲು ಆರ್.ಟಿ.ಒ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ. ಇನ್ನೂ ಸಂಚಾರಿ ನಿಯಮಗಳ ಪ್ರಕಾರ ವೈಟ್ ಬೋರ್ಡ್ ವಾಹನಗಳಿರುವುದು ಸ್ವಂತ ಬಳಕೆಗೆ, ಎಲ್ಲೋ ಬೋರ್ಡ್ ವಾಹನಗಳನ್‌ಉ ಬಾಡಿಗೆ ನಡೆಸಲು ಬಿಡಬೇಕು. ಆದರೆ ಕೆಲವರು ನಿಯಮಗಳನ್ನು ಬ್ರೇಕ್ ಮಾಡಿ ವಾಹನಗಳನ್ನು ಟ್ರಾವೆಲ್ಸ್ ಆಗಿ ಮಾಡಿದ್ದಾರೆ. ಅಂತಹವರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ ಎನ್ನಲಾಗಿದೆ.