Sad News: ಇತ್ತೀಚಿಗೆ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಗಳಿಂದ ಆತ್ಮಹತ್ಯೆಗೆ ಶರಣಾಗುವಂತಹ ಘಟನೆಗಳು ನಡೆಯುತ್ತಿವೆ. ಕೋಲಾರದ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ವಸತಿ ನಿಲಯದಲ್ಲಿನ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿ ಖಾಸಗಿ ಕಾಲೇಜಿನ ಹಾಸ್ಟಲ್ ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮೃತ ದುರ್ದೈವಿಯನ್ನು ಬಿಂದುಶ್ರೀ (17) ಎಂದು ಗುರ್ತಿಸಲಾಗಿದೆ. ಮೃತ ವಿದ್ಯಾರ್ಥಿನಿ ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇಕಾಲುವೆಯ ಗ್ರಾಮದವಳು. ಕೋಲಾರದ ಶ್ರೀನಿವಾಸಪುರದಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಹಾಸ್ಟಲ್ ನಲ್ಲಿದ್ದುಕೊಂಡು ಓದುತ್ತಿದ್ದ ಬಿಂದುಶ್ರೀ ತಾನು ಮಲಗುವ ಮಂಚದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಸ್ವಾಮಿ ಆತ್ಮಹತ್ಯೆ?
ಇನ್ನೂ ಬೆಂಗಳೂರಿನಲ್ಲಿ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ನಿವಾಸಿ ಲಾರಿ ಮಾಲೀಕ ಸೋಮಶೇಖರ್ (45) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಈ ಕಾರಣದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ನಿನ್ನೆ ರಾತ್ರಿ 11 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಸೋಮಶೇಖರ್ ಅವರು ಪತ್ನಿ ಪವಿತ್ರಾ, ಇಬ್ಬರು ಗಂಡು ಮಕ್ಕಳ ಜೊತೆ ಮಹಾಲಕ್ಷ್ಮಿಲೇಔಟ್ ವ್ಯಾಪ್ತಿಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ.
ಮೃತರ ಸಂಬಂಧಿಕರು ಹೇಳುವಂತೆ, ಮೃತ ಸೋಮಶೇಖರ್ ರವರ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಆಧಾರದಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸ ಮಾಡುತ್ತಿದ್ದರು. ಆಗ ಅಲ್ಲಿ ಮೈಲಾರಪ್ಪ ಎಂಬುವವರು ವಿಶ್ವವಿದ್ಯಾಲಯದ ರಿಜಿಸ್ಟರ್ ಆಗಿದ್ದರು. ಆತನೊಂದಿಗೆ ಮೃತರ ಪತ್ನಿ ಸಂಬಂಧ ಇಟ್ಟುಕೊಂಡಿದ್ದನಂತೆ. ಈ ವಿಚಾರ ಮೈಲಾರಪ್ಪ ಪತ್ನಿಗೂ ಸಹ ಗೊತ್ತಿತ್ತಂತೆ. ಅವರೂ ಸಹ ಸೋಮಶೇಖರ್ ಮನೆಗೆ ಬಂದು ಬುದ್ದಿ ಹೇಳಿದ್ದರಂತೆ. ಆದರೂ ಸಹ ಸೋಮಶೇಖರ್ ಪತ್ನಿ ಮೈಲಾರಪ್ಪ ನೊಂದಿಗೆ ಸಂಬಂಧ ಬಿಟ್ಟಿರಲಿಲ್ಲವಂತೆ. ಈ ಕಾರಣದಿಂದ ಮನನೊಂದ ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾರೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.