Allu Arjun – ಪುಷ್ಪಾ-2 ಸಿನೆಮಾದ ಪ್ರೀಮಿಯರ್ ಶೋ ಸಮಯದಲ್ಲಿ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ರವರಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರವರು ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್‌ನಲ್ಲೂ ಸಹ ಈ ಅರ್ಜಿಯ ವಿಚಾರಣೆ ನಡೆದಿತ್ತು. ಇದೀಗ ಅಲ್ಲು ಅರ್ಜುನ್ ರವರಿಗೆ ಹೈದರಾಬಾದ್ ನ ನಾಂಪಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕಳೆದ ಡಿ.04 ರಂದು ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಗೆ ನಟ ಅಲ್ಲು ಅರ್ಜುನ್ ಪುಷ್ಪಾ-2 ಸಿನೆಮಾದ ಸಂಬಂಧ ಭೇಟಿ ನೀಡಿದ್ದರು. ಈ ವೇಳೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗಿಯಾಗಿದ್ದರು. ಈ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದು, ಆಕೆಯ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ಈ ಯುವಕ ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನಂತೆ ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ಹಾಗೂ ಸಂಧ್ಯಾ ಥಿಯೇಟರ್ ನ ಮಾಲೀಕ ಹಾಗೂ ಮ್ಯಾನೇಜರ್ ರವರನ್ನು ಬಂಧಿಸಿದ್ದರು. ಈ ಸುದ್ದಿ ದೇಶದಾದ್ಯಂತ ಭಾರಿ ಸದ್ದು ಮಾಡಿತ್ತು.
ಇನ್ನೂ ಅಲ್ಲು ಅರ್ಜುನ್ ಬಂಧವಾದ ದಿನದಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಜೊತೆಗೆ ನಾಂಪಲ್ಲಿ ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ಅರ್ಜಿ ಹಾಕಿದ್ದರು. ಕೆಲವು ದಿನಗಳ ಹಿಂದೆ ಸಹ ಈ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ಈ ಆದೇಶವನ್ನು ಜನವರಿ 03ಕ್ಕೆ ಕಾಯ್ದಿರಿಸಲಾಗಿತ್ತು. ಇದೀಗ ಈ ಆದೇಶ ಹೊರಬಂದಿದ್ದು, ಅಲ್ಲು ಅರ್ಜುನ್ ರವರಿಗೆ ಜಾಮೀನು ಮಂಜೂರಾಗಿದೆ. ಅಲ್ಲು ಅರ್ಜುನ್ ರವರಿಗೆ ಜಾಮೀನು ನೀಡಿದ ನಾಂಪಲ್ಲಿ ಕೋರ್ಟ್, 1 ಲಕ್ಷ ರೂಪಾಯಿ ಭದ್ರತಾ ಮೊತ್ತ ಹಾಗೂ ಇಬ್ಬರು ವ್ಯಕ್ತಿಗಳ ಶೂರಿಟಿಯನ್ನು ಕೇಳಿದೆ. ಜೊತೆಗೆ ವಿದೇಶ ಪ್ರಯಾಣದ ಮೇಲೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎನ್ನಲಾಗಿದೆ.