Government Employee – ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರು, ಸಿಬ್ಬಂದಿ ಸೇರಿದಂತೆ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವಂತಹ ಎಲ್ಲಾ ಸಿಬ್ಬಂಧಿಗಳು ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸಬೇಕೆಂದು ಸಚಿವ ಸಂತೋಷ್ ಲಾಡ್ ರವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಸರ್ಕಾರಿ ನೌಕರರು, ನಿಗಮ ಮಂಡಳಿಯ ಅಧಿಕಾರಿಗಳು ಹಾಗೂ ನೌಕರರಿಗೆ ಕೆಲಸದ ದಿನಗಳಲ್ಲಿ ವಾರದಲ್ಲಿ ಕಡ್ಡಾಯವಾಗಿ ಒಂದು ದಿನ ಖಾದಿ ಬಟ್ಟೆಗಳನ್ನು ಧರಿಸುವಂತೆ ಆದೇಶ ಹೊರಡಿಸಲು ಸಿಎಂ ಸಿದ್ದರಾಮಯ್ಯನವರಿಗೆ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ರವರು ಪ್ರಸ್ತಾವನೆ ಸಲ್ಲಿಸಿದ್ದಾರೆ.
ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ರವರು ಸಿಎಂ ಸಿದ್ದರಾಮಯ್ಯನವರಿಗೆ ಈ ಸಂಬಂಧ ಸುಧೀರ್ಘ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯದ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಾರದ ಕೆಲಸದ ದಿನಗಳಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸಬೇಕು. ಖಾದಿ ಎನ್ನುವುದು ಕೇವಲ ಬಟ್ಟೆಯಲ್ಲ, ಅದೊಂದು ಜೀವನ ಪದ್ದತಿ, ಸ್ವಾವಲಂಬಿ ಬದುಕಿನ ರೂಪಕ, ಖಾದಿ ತೊಟ್ಟವರಿಗೆ ಸತ್ಯ ಹಾಗೂ ಅಹಿಂಸೆ ಸಹ ಒಂದು ವ್ರತ ಎಂದು ಸಂತೋಷ್ ಲಾಡ್ ರವರು ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ.
ಸಂತೋಷ್ ಲಾಡ್ ರವರ ಪೋಸ್ಟ್ ಇಲ್ಲಿದೆ ನೋಡಿ: Click Here
ಇನ್ನೂ ಬೆಳಗಾವಿ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು, ನಿಗಮ ಮಂಡಳಿಯ ಅಧಿಕಾರಿಗಳು ಹಾಗೂ ನೌಕರರಿಗೆ ಕೆಲಸದ ದಿನಗಳಲ್ಲಿ ವಾರದಲ್ಲಿ ಕಡ್ಡಾಯವಾಗಿ ಒಂದು ದಿನ ಖಾದಿ ಬಟ್ಟೆ ಧರಿಸಬೇಕೆಂಬ ಆದೇಶವನ್ನು ಹೊರಡಿಸಲು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಹಾಗೂ ರಾಷ್ಟ್ರಪಿತ ಗಾಂಧೀಜಿಯವರ ಸ್ಮರಣೆಯು ಚಿರಕಾಲ ಸರ್ಕಾರಿ ನೌಕರರು ವಾರದ ಒಂದು ದಿನ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕೆನ್ನುವ ಆದೇಶವನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಅವರು ಮನವಿ ಮಾಡಿದ್ದಾರೆ. ಸದ್ಯ ಈ ವಿಚಾರ ಚರ್ಚೆಗೆ ಕಾರಣವಾಗಿದೆ.