SBI Recruitment – ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಅದರಲ್ಲೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಬಯಸುವಂತಹವರಿಗೆ State Bank of India (SBI) ಬ್ಯಾಂಕ್ ನಲ್ಲಿ ಖಾಲಿಯಿರುವ ಜೂನಿಯರ್ ಅಸೋಸಿಯೇಟ್ಸ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಿ.17 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಹ ಆರಂಭವಾಗಿದ್ದು, ಜ.7 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಇರಬೇಕಾದ ಮಾನದಂಡಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಈ ಸುದ್ದಿಯ ಮೂಲಕ ಹಂಚಿಕೊಳ್ಳಲಾಗಿದೆ.
SBI Recruitment : SBI ಬ್ಯಾಂಕ್ ನಲ್ಲಿ ಖಾಲಿಯಿರುವ ಜೂನಿಯರ್ ಅಸೋಸಿಯೇಟ್ಸ್ ಕ್ಲರ್ಕ್ ಹುದ್ದೆಗಳ ಸಂಕ್ಷಿಪ್ತ ನೋಟ
- ಹುದ್ದೆ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)
- ಹುದ್ದೆಗಳ ಸಂಖ್ಯೆ : 13,735 ಹುದ್ದೆಗಳು, ಕರ್ನಾಟಕದಲ್ಲಿ ಸುಮಾರು 50 ಹುದ್ದೆಗಳಿವೆ.
- ವೇತನಶ್ರೇಣಿ : ಮಾಸಿಕ ಆರಂಭಿಕ ವೇತನ ರೂ 26730 /-
ವಿದ್ಯಾರ್ಹತೆ : SBI ಬ್ಯಾಂಕ್ ನಲ್ಲಿ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆ ಇದಾಗಿದ್ದು, ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ವಯೋಮಿತಿ
ವಯೋಮಿತಿ : (SBI)ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಿದೆ.
ಆಯ್ಕೆ ವಿಧಾನ: ಪ್ರಾಥಮಿಕ ಪರೀಕ್ಷೆ, ಮೈನ್ ಪರೀಕ್ಷೆ ಮತ್ತು ಭಾಷಾ ಪ್ರಾವೀಣ್ಯತೆ ಪರೀಕ್ಷೆ (Preliminary Examination, Main Examination, Language Proficiency Test) ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಮಾಸಿಕ ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 24,050 ರೂ.- 64,480 ರೂ. ಮಾಸಿಕ ವೇತನ ದೊರೆಯಲಿದೆ. ಪ್ರಾಥಮಿಕ ಪರೀಕ್ಷೆ 2025ರ ಫೆಬ್ರವರಿ ಮತ್ತು ಮುಖ್ಯ ಪರೀಕ್ಷೆ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ :
- ಅರ್ಜಿ ಸಲ್ಲಿಸಲು ಈ ಕ್ಲಿಕ್ ಮಾಡಿ (https://ibpsonline.ibps.in/sbidrjadec24/)
- ಹೆಸರು ನೋಂದಾಯಿಸಿ.
- ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
- ಅಗತ್ಯವಿದ್ದವರು ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17 ಡಿಸೆಂಬರ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ಜನವರಿ 2025
- ಪೂರ್ವಭಾವಿ ಪರೀಕ್ಷೆಯ ಸಂಭಾವ್ಯ ದಿನಾಂಕ : 2025 ರ ಫೆಬ್ರವರಿ
- ಮುಖ್ಯ ಪರೀಕ್ಷೆಯ ಸಂಭಾವ್ಯ ದಿನಾಂಕ : 2025 ರ ಮಾರ್ಚ್ / ಏಪ್ರಿಲ್
ಹೆಚ್ಚಿನ ವಿವರಗಳಿಗೆ ಎಸ್‌ಬಿಐಯ ಅಧಿಕೃತ ವೆಬ್‌ಸೈಟ್ ವಿಳಾಸ: sbi.co.inಗೆ ಭೇಟಿ ನೀಡಿ ಅಥವಾ ದೂರವಾಣಿ 022-22820427ಕ್ಕೆ ಕರೆ ಮಾಡಿ.
Yes