SBI Recruitment 2025 – ಅನೇಕರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡುವ ಬಯಕೆ ಇರುತ್ತದೆ. ಅಂತಹ ಉದ್ಯೋಗಾಸಕ್ತರಿಗೆ ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅವಕಾಶ ಕಲ್ಪಿಸಲಿದೆ. SBI ನಲ್ಲಿ ಖಾಲಿಯಿರುವ 600 ಪ್ರೊಬೆಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪದವಿ ಪಡೆದಿರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಜನವರಿ 16, 2025 ಕೊನೆಯ ದಿನಾಂಕವಾಗಿದ್ದು, ಕಡೆಯ ದಿನಾಂಕದವರೆಗೂ ಕಾಯದೇ ಕೂಡಲೇ ಅರ್ಜಿ ಸಲ್ಲಿಸುವುದು ಸೂಕ್ತ.

SBI Recruitment 2025 – ವಿದ್ಯಾರ್ಹತೆ ಮತ್ತು ವಯೋಮಿತಿ :
ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
SBI Recruitment 2025- ಸಂಕ್ಷಿಪ್ತ ವಿವರ:
- Organization Name: State Bank of India
- Total No of Vacancies: 600 Probationary Officers (PO) Posts
- Place of Posting: All Over India
- Starting Date: 27.12.2024
- Last Date: 16.01.2025
- Apply Mode: Online (https://ibpsonline.ibps.in/sbiponov24/)
- Official Website: https://sbi.co.in/
- Official Notification : Click here
SBI Recruitment 2025 – ವರ್ಗವಾರು ಹುದ್ದೆಗಳ ವಿವರ:
| Category | Regular Vacancies | Backlog Vacancies | Total Vacancies |
| General (UR) | 240 | 0 | 240 |
| OBC | 144 | 0 | 144 |
| SC | 80 | 13 | 93 |
| ST | 40 | 1 | 41 |
| EWS | 82 | 0 | 82 |
| Total | 586 | 14 | 600 |
SBI Recruitment 2025 – ಅರ್ಜಿ ಶುಲ್ಕ :
- SBI ನಲ್ಲಿ ಖಾಲಿಯಿರುವ 600 ಪ್ರೊಬೆಷನರಿ ಆಫೀಸರ್ ಹುದ್ದೆಗಳ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಿದೆ. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು.

SBI Recruitment 2025 – ಆಯ್ಕೆ ವಿಧಾನ ಹಾಗೂ ವೇತನ ವಿವರ:
- SBI ನಲ್ಲಿ ಖಾಲಿಯಿರುವ 600 ಪ್ರೊಬೆಷನರಿ ಆಫೀಸರ್ ಹುದ್ದೆಗಳ ನೇಮಕಾತಿಯು ಪ್ರಿಲಿಮಿನರಿ ಪರೀಕ್ಷೆ, ಮೈನ್ ಪರೀಕ್ಷೆ, ಸೈಕೋಮ್ಯಾಟ್ರಿಕ್ ಟೆಸ್ಟ್, ಗ್ರೂಪ್ ಡಿಸ್ಕಷನ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಇನ್ನೂ ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. – 85,920 ರೂ. ಮಾಸಿಕ ವೇತನ ದೊರೆಯಲಿದೆ. ಅಭ್ಯರ್ಥಿಗಳನ್ನು 3 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
SBI Recruitment 2025 – Important Dates :
- Application Start Date: December 27, 2025
- Last Date to Apply Online: January 16, 2025
- Preliminary Exam Call Letter Download: Third/Fourth Week of February 2025
- Preliminary Exam Dates: March 8 and March 15, 2025
SBI Recruitment 2025 – step-by-step process is as follows:
- Visit the SBI careers page: sbi.co.in/web/careers/probationary-officers
- Click on the “Apply Online” link.
- Register yourself by providing basic details.
- Log in with the registration credentials.
- Fill out the application form carefully.
- Upload scanned copies of your photograph, signature, and required documents.
- Pay the application fee.
- Submit the form and take a printout for future reference.

ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
