ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಕ್ಕಾಗಿ ಎದುರು ನೋಡುತ್ತಿರುವ ಯುವಕ-ಯುವತಿಯರಿಗೆ ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆದ ‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ’ (SBI) ಸಿಹಿಸುದ್ದಿ ನೀಡಿದೆ. 2025ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿರುವ ಎಸ್‌ಬಿಐ, ಬರೋಬ್ಬರಿ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ನೀವು ಪದವಿ ಅಥವಾ ಎಂಬಿಎ (MBA) ಮುಗಿಸಿ, ಒಳ್ಳೆಯ ಸಂಬಳದೊಂದಿಗೆ ಸರ್ಕಾರಿ ಉದ್ಯೋಗವನ್ನು (SBI Recruitment 2025) ಹುಡುಕುತ್ತಿದ್ದರೆ, ಇದೊಂದು ಸುವರ್ಣಾವಕಾಶವಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
SBI Recruitment 2025 – ನೇಮಕಾತಿ ವಿವರಗಳು
- ಸಂಸ್ಥೆಯ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
- ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಕೇಡರ್ ಆಫೀಸರ್ (Specialist Cadre Officer)
- ಒಟ್ಟು ಹುದ್ದೆಗಳು: 996
- ಉದ್ಯೋಗ ಸ್ಥಳ: ಅಖಿಲ ಭಾರತ (All India)
- ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ
ವಿದ್ಯಾರ್ಹತೆ ಮತ್ತು ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಈ ಕೆಳಗಿನಂತಿವೆ: (SBI Recruitment 2025)
- ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಅಥವಾ ಎಂಬಿಎ (MBA) ಪೂರ್ಣಗೊಳಿರಬೇಕು.
- ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 42 ವರ್ಷಗಳು ಮೀಿರಬಾರದು.

ವೇತನ ಶ್ರೇಣಿ (Salary Details):
ಎಸ್‌ಬಿಐನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SBI Recruitment 2025) ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಪ್ಯಾಕೇಜ್ ಲಭ್ಯವಿದೆ. ಹುದ್ದೆಗೆ ಅನುಗುಣವಾಗಿ ಮಾಸಿಕ ₹51,600 ರಿಂದ ಆರಂಭವಾಗಿ ₹3,72,500 ರವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ ವಿವರ:
- SC/ST/PwBD ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ (ಉಚಿತ).
- ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: ₹750/-
- ಪಾವತಿ ವಿಧಾನ: ಆನ್‌ಲೈನ್ (ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್) ಮೂಲಕ ಪಾವತಿಸಬಹುದು.
ಆಯ್ಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳನ್ನು (SBI Recruitment 2025) ಅವರ ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಿ, ನಂತರ ಸಂದರ್ಶನ (Interview) ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Read this also : ಭಾರತದಲ್ಲಿ ಹೊಸ ಟ್ರೆಂಡ್: ಮದುವೆಗೂ ಬಂತು ಇನ್ಶೂರೆನ್ಸ್ (Insurance)! ಮದುವೆ ರದ್ದಾದರೆ ಖರ್ಚಾದ ಹಣವನ್ನೆಲ್ಲಾ ವಾಪಸ್ ಪಡೆಯಬಹುದು!
ಪ್ರಮುಖ ದಿನಾಂಕಗಳು (Important Dates):
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-12-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-12-2025
- ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23-12-2025

SBI Recruitment 2025 – ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://sbi.bank.in/ ಗೆ ಭೇಟಿ ನೀಡಿ.
- ಅಲ್ಲಿ ‘Careers’ ಅಥವಾ ‘Recruitment’ ವಿಭಾಗವನ್ನು ಆಯ್ಕೆ ಮಾಡಿ.
- ‘Specialist Cadre Officer’ ಹುದ್ದೆಯ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ, ಸಂಪೂರ್ಣವಾಗಿ ಓದಿ.
- ನಂತರ ‘Apply Online’ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
- ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
- ಅರ್ಜಿಯನ್ನು ಸಬ್ಮಿಟ್ ಮಾಡಿ ಮತ್ತು ಮುಂದಿನ ಉಲ್ಲೇಖಕ್ಕಾಗಿ ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ಪ್ರಮುಖ ಲಿಂಕ್ಗಳು:
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್‌ಸೈಟ್ | Click Here |
