0.9 C
New York
Sunday, February 16, 2025

Buy now

SC-ST Reservation: ಪರಿಶಿಷ್ಟ ಜಾತಿ ಹಾಗೂ ಪಂಗಡದ ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು…!

SC-ST Reservation – ಸುಮಾರು ವರ್ಷಗಳಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮುದಾಯಗಳಲ್ಲಿ ಒಳ ಮೀಸಲಾತಿ‌ಗಾಗಿ ಹೋರಾಟಗಳು, ಪ್ರತಿಭಟನೆಗಳು ನಡೆದಿತ್ತು. ಇದೀಗ ಸುಪ್ರೀಂ ಕೋರ್ಟ್ ಈ ಸಂಬಂಧ ಮಹತ್ತರ ತೀರ್ಪು ನೀಡಿದೆ. ಒಳ ಮೀಸಲಾತಿ ಕಾನೂನು ಬದ್ದವಾಗಿದೆ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ, ಯಾವ ಜಾತಿ ಹಾಗೂ ಪಂಗಡಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಅಧಿಕಾರವನ್ನು ಆಯಾ ರಾಜ್ಯಗಳ ವಿವೇಚನೆಗೆ ನೀಡಿದೆ.

ಎಸ್.ಸಿ-ಎಸ್.ಟಿ ಸಮುದಾಯಗಳಿಗೆ ನೀಡಲಾಗಿರುವ ಮೀಸಲಾತಿ (SC – ST for reservation) ಒಳಗಡೆಯೇ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್‌ (Supreme Court ) ಒಪ್ಪಿಗೆ ನೀಡಿದೆ. ಮುಖ್ಯ ನ್ಯಾಯಮೂತ್ರಿ ಚಂದ್ರಚೂಡ್‌ ನೇತೃತ್ವದ ನ್ಯಾ. ಬಿ.ಆರ್. ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ.ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸಂವಿಧಾನ ಪೀಠ ಈ ಮಹತ್ವದ ಆದೇಶ ಪ್ರಕಟಿಸಿದ್ದು,  ನ್ಯಾಯಮೂರ್ತಿ ಬೇಲಾ ತ್ರಿವೇದಿ ಭಿನ್ನ ತೀರ್ಪು ನೀಡಿ ಅಂತಹ ಉಪ-ವರ್ಗೀಕರಣವನ್ನು ಅನುಮತಿಸಲಾಗುವುದಿಲ್ಲ ಎಂದು ತೀರ್ಪು ಪ್ರಕಟಿಸಿದರು.

Supreme court judgement about SC ST

ಇನ್ನೂ ಪಂಜಾಬ್ ನಲ್ಲಿ ಒಳ ಮೀಸಲಾತಿ ಸಂಬಂಧ  ಪ.ಜಾತಿ ಹಾಗೂ ಹಿಂದುಳಿದ ವರ್ಗಗಳ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಒಳ ಮೀಸಲಾತಿಯ ಮಹತ್ವದ ಆದೇಶ ಪ್ರಕಟಿಸಿದೆ. ಪಂಜಾಬ್, ತಮಿಳುನಾಡು ಮತ್ತು ಇತರ ರಾಜ್ಯಗಳಲ್ಲಿ ಅಂತಹ ಉಪ-ವರ್ಗೀಕರಣವನ್ನು ಒದಗಿಸುವ ಕಾನೂನುಗಳ ಸಿಂಧುತ್ವವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಈ ಹಿಂದೆ ಪಂಜಾಬ್‌ ಸರ್ಕಾರ ರಚನೆ ಮಾಡಿದ್ದ ಕಾಯ್ದೆಯನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ರದ್ದು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಗಸ್ಟ್ 1 ಮಹತ್ವದ ತೀರ್ಪು ನೀಡಿದ್ದು, ಸುಪ್ರೀಂ ಕೋರ್ಟ್‌ನ 7 ನ್ಯಾಯಾಧೀಶರ ಸಾಂವಿಧಾನಿಕ ಪೀಠವು 6:1 ರ ಬಹುಮತದೊಂದಿಗೆ ಎಸ್‌ಸಿ/ಎಸ್‌ಟಿ ವರ್ಗದೊಳಗೆ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾ (ಒಳ ಮೀಸಲಾತಿ) ನೀಡಬಹುದು ಎಂದು ಹೇಳಿದೆ.

by Admin
by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles