School Day : ಪ್ರತಿಭೆ ಅನಾವರಣಕ್ಕೆ ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ : ಸುಮಂಗಳ ಅಶ್ವತ್ಥಪ್ಪ

School Day – ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವ ಹೋಗಲಾಡಿಸಲು ಹಾಗೂ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಮೂಲಕ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ ಎಂದು ಸೋಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸುಮಂಗಳ ಅಶ್ವತ್ಥಪ್ಪ ಅಭಿಪ್ರಾಯ ಪಟ್ಟರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಗ್ರಾಮದ ಶ್ರೀ ಸತ್ಯ ಸಾಯಿ ಬಾಲ ಮಂದಿರ ಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

School Day in Somenahalli 1

ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಈ ಶಾಲೆಯ ಶಿಕ್ಷಕ ವೃಂದ ಹಾಗೂ ಪೋಷಕ ವರ್ಗ ಶ್ರಮಿಸುತ್ತಿದೆ. ಕೆಲವು ಮಕ್ಕಳು ಕೇವಲ ಒಂದೇ ವಿಷಯಕ್ಕೆ ಸೀಮಿತವಾಗಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳುವುದು ಒಳ್ಳೆಯ ಬೆಳವಣಿಯಾಗಿದೆ. ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್,ಟಿವಿ, ಗೆ ಅಂಟಿಕೊಂಡಿರುತ್ತಾರೆ ಮತ್ತೆ ಕೆಲವರು ಯಾರೊಂದಿಗೂ ಬೆರೆಯದೆ ಒಬ್ಬಂಟಿಯಾಗಿರಲು ಬಯಸುತ್ತಾರೆ ಆದರೆ ಓದು ಬರಹದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳನ್ನೊಳಗೊಂಡ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳಬೇಕು ಎಂದರು.

ನಂತರ ನಿವೃತ್ತ ಶಿಕ್ಷಕ ಮೆಹಬೂಬ್ ಸಾಬ್ ಮಾತನಾಡಿ, ಚಿಕ್ಕಂದಿನಿಂದಲೇ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವುದರಿಂದ ಬುದ್ಧಿಶಕ್ತಿ ಧೈರ್ಯ ಹೆಚ್ಚಿ ಭಯ ಹೋಗಲಾಡಿಸಬಹುದು ವರ್ಷದ ಶಾಲಾ ವಾರ್ಷಿಕೋತ್ಸವದಲ್ಲಿ ಮನರಂಜನೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳ ಬುದ್ದಿ ಬದಲಾಗುತ್ತದೆ ಎಂದು ಹೇಳಿದರು.

School Day in Somenahalli 2

ಈ ಕಾರ್ಯಕ್ರಮದಲ್ಲಿ ಶಾಲೆಯ ವ್ಯವಸ್ಥಾಪಕರು ಹಾಗೂ ಮುಖ್ಯಶಿಕ್ಷಕರಾದ ವೆಂಕಟೇಶ್ ಮಾತನಾಡಿ, ಶಾಲೆಯ ವತಿಯಿಂದ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣದ ಜೊತೆಗೆ ಕಾಲ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಜೊತೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ರೂಢಿಸಿಕೊಂಡು ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಜ್ಞಾನ ಹೆಚ್ಚಿಸುವಲ್ಲಿ ಸರ್ವ ರೀತಿಯ ಪ್ರಯತ್ನ ಮಾಡಲಾಗುತ್ತಿದ್ದಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ರೀತಿಯ ವೇಷ ಭೂಷಣಗಳೊಂದಿಗೆ ನೆರೆದಿದ್ದ ಪೋಷಕರನ್ನು ರಂಜಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗೆ ಸಾಕ್ಷಿ ಎಂಬಂತಿತ್ತು. ದೇಶ ಭಕ್ತಿ ಗೀತೆಗಳನ್ನು, ಸಾಂಸ್ಕೃತಿಕ ನೃತ್ಯಗಳನ್ನು, ಕ್ಲಾಸಿಕಲ್ ಡ್ಯಾನ್ಸ್, ಭರತನಾಟ್ಯ, ನಾಟಕ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.  ಈ ಕಾರ್ಯಕ್ರಮದಲ್ಲಿ ಮುಖಂಡರಾದ ಚಂದ್ರಕಲಾ, ರೂಪ, ಸೌಭಾಗ್, ನಿವೃತ್ತ ಶಿಕ್ಷಕರಾದ ಆಧಿನಾರಾಯಣಪ್ಪ, ಸೇರಿದಂತೆ ನೂರಾರು ಪೋಷಕರು, ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

Leave a Reply

Your email address will not be published. Required fields are marked *

Next Post

Viral News : ಡಾಕ್ಟರ್ ಅಂಕಲ್ ಹಾಗೂ ನರ್ಸ್ ಆಂಟಿಯ ನಡುವೆ ಲವ್ವಿ ಡವ್ವಿ, ಖಾಸಗಿ ಪೊಟೋ, ಚಾಟಿಂಗ್ ವೈರಲ್…!

Tue Feb 4 , 2025
Viral – ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಡಾಕ್ಟರ್‍ ಹಾಗೂ ಅದೇ ಆಸ್ಪತ್ರೆಯಲ್ಲಿ ಎ.ಎನ್.ಎಂ ನರ್ಸ್ ನಡುವೆ ಲವ್ ಹುಟ್ಟಿಕೊಂಡಿದೆ. ಸಾಮಾನ್ಯವಾಗಿ ಪ್ರೀತಿ ಹುಟ್ಟೋದು ಸಹಜ ಆದರೆ ಡಾಕ್ಟರ್‍ ಅಂಕಲ್ ಹಾಗೂ ನರ್ಸ್ ಆಂಟಿಗೂ ಈಗಾಗಲೇ ಮದುವೆಯಾಗಿದ್ದು ಅವರಿಗೆ ಮಕ್ಕಳೂ ಸಹ ಇದ್ದಾರೆ. ಆದರೆ ಅವರಿಬ್ಬರ ನಡುವೆ ವಿವಾಹೇತರ ಸಂಬಂಧ ಹುಟ್ಟಿಕೊಂಡಿದ್ದು, ಯುವ ಪ್ರೇಮಿಗಳಂತೆ ವಿಡಿಯೋಗಳು, ಪೊಟೋಗಳು ಶೇರ್‍ ಮಾಡಿಕೊಳ್ಳುತ್ತಾ ಪ್ರೇಮ ಪಯಣ ಸಾಗಿಸಿದ್ದಾರೆ. ಸದ್ಯ ಅವರಿಬ್ಬರ ರೊಮ್ಯಾನ್ಸ್ ಸೇರಿದಂತೆ […]
Nurse and doctor love in Rajastana 1
error: Content is protected !!