Rain Alert – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರ ನಡುವೆ, ಮುಂದಿನ ಮೂರು ದಿನಗಳ ಕಾಲ ರಣಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಮತ್ತಷ್ಟು ಮಾಹಿತಿ ಇಲ್ಲಿದೆ.
Rain Alert – ಬೆಂಗಳೂರಿನಲ್ಲಿ ಮಳೆ ಹವಾಮಾನ
ಬೆಂಗಳೂರು ನಗರದಲ್ಲಿ ಇಂದು (ಆಗಸ್ಟ್ 18) ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಈಗಾಗಲೇ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಶುರುವಾಗಿದೆ. ನಗರದಾದ್ಯಂತ ಕೆಲವೇ ಕ್ಷಣಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಜಿನುಗು ಮಳೆ ಬೀಳುತ್ತಿದ್ದು, ಮುಂದಿನ ಕೆಲ ದಿನಗಳ ಕಾಲ ಈ ಮಳೆ ಮುಂದುವರಿಯಲಿದೆ.
Rain Alert – ಯಾವ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ?
ಮಳೆ ಹವಾಮಾನ ಇಲಾಖೆಯ ಪ್ರಕಾರ, ಆಗಸ್ಟ್ 21ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣಕ್ಕೆ ಹಲವು ಪ್ರದೇಶಗಳಲ್ಲಿ ವಿವಿಧ ಹಂತದ ಅಲರ್ಟ್‌ಗಳನ್ನು ಘೋಷಿಸಲಾಗಿದೆ:
ರೆಡ್ ಅಲರ್ಟ್ : ಇಂದು (ಆಗಸ್ಟ್ 18) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
Read this also : ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 500 ಜನರಲಿಸ್ಟ್ ಆಫೀಸರ್ ಹುದ್ದೆಗಳು, ಅವಶ್ಯಕ ಮಾಹಿತಿಗಾಗಿ ಈ ಸುದ್ದಿ ಓದಿ…!
ಆರೆಂಜ್ ಅಲರ್ಟ್ : ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಯೆಲ್ಲೋ ಅಲರ್ಟ್ : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ಧಾರವಾಡ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Rain Alert – ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!
ಭಾರೀ ಮಳೆಯ ಮುನ್ಸೂಚನೆ ಇರುವ ಕಾರಣ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
- ಶಿವಮೊಗ್ಗ ಜಿಲ್ಲೆ: ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ.
- ದಕ್ಷಿಣ ಕನ್ನಡ ಜಿಲ್ಲೆ: ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಹಾಗೂ ಕಾಲೇಜುಗಳಿಗೆ ರಜೆ.
- ಉತ್ತರ ಕನ್ನಡ ಜಿಲ್ಲೆ: ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, ಜೊಯಿಡಾ ಮತ್ತು ದಾಂಡೇಲಿ ಸೇರಿದಂತೆ 10 ತಾಲೂಕುಗಳಲ್ಲಿ ಆಗಸ್ಟ್ 18ರಿಂದ 19ರವರೆಗೆ ರಜೆ.
- ಹಾಸನ ಜಿಲ್ಲೆ: ಸಕಲೇಶಪುರ, ಬೇಲೂರು ಮತ್ತು ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಗಳ ಶಾಲೆ-ಕಾಲೇಜುಗಳಿಗೆ ರಜೆ.
- ಚಿಕ್ಕಮಗಳೂರು ಜಿಲ್ಲೆ: ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕು ಹಾಗೂ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಲ್ಲಿ ರಜೆ ಘೋಷಿಸಲಾಗಿದೆ.
- ಕೊಡಗು ಜಿಲ್ಲೆ: ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ.
ಭಾರೀ ಮಳೆ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ವಾಸಿಸುವ ಜನರು ಹಾಗೂ ಮಕ್ಕಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸೂಚನೆ ನೀಡಿವೆ.