ಹಿರಿಯ ನಾಗರಿಕರು ತಮ್ಮ ಹಕ್ಕುಗಳು ಹಾಗೂ ಕಾನೂನುಬದ್ಧ ಸೌಲಭ್ಯಗಳ ಬಗ್ಗೆ (Senior Citizens Rights) ಸಂಪೂರ್ಣ ಅರಿವು ಹೊಂದಿರಬೇಕು. ವಯಸ್ಸಾದ ಕಾರಣಕ್ಕೆ ಯಾರೂ ತಮ್ಮ ಹಕ್ಕುಗಳಿಂದ ವಂಚಿತರಾಗಬಾರದು ಎಂದು ಗುಡಿಬಂಡೆ ಜೆ.ಎಂ.ಎಫ್.ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಸವಿತಾ ರುದ್ರಗೌಡ ಚಿಕ್ಕನಗೌಡರ್ ತಿಳಿಸಿದರು.

Senior Citizens Rights – ಹಿರಿಯ ನಾಗರಿಕರು ತಮ್ಮ ಹಕ್ಕುಗಳನ್ನು ತಿಳಿಯಬೇಕು
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ನ್ಯಾಯಾಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸರ್ಕಾರಿ ನಿವೃತ್ತ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ಸಂವಿಧಾನಾತ್ಮಕ ಹಾಗೂ ಕಾನೂನುಬದ್ಧವಾಗಿ ಹಲವು ಹಕ್ಕುಗಳು ಮತ್ತು ಸೌಲಭ್ಯಗಳು ಲಭ್ಯವಿವೆ. ಅವುಗಳ ಬಗ್ಗೆ ತಿಳಿದುಕೊಂಡು ಅಗತ್ಯ ಸಂದರ್ಭಗಳಲ್ಲಿ ಸೂಕ್ತ ಕಾನೂನು ನೆರವು ಪಡೆದುಕೊಳ್ಳಬೇಕು. (Senior Citizens Rights) ಹಿರಿಯ ನಾಗರಿಕರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದುವುದರ ಜೊತೆಗೆ, ಸಮಾಜದಲ್ಲಿ ತಮ್ಮ ಗೌರವ ಮತ್ತು ಘನತೆಯನ್ನು ಕಾಪಾಡಿಕೊಳ್ಳಲು ಮುಂದಾಗಬೇಕು. ಯಾವುದೇ ರೀತಿಯ ಸಮಸ್ಯೆ ಅಥವಾ ಅನ್ಯಾಯ ಎದುರಾದ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಕಾನೂನು ಸೇವಾ ಸಂಸ್ಥೆಗಳ ನೆರವನ್ನು ಪಡೆಯಬಹುದು ಎಂದರು. Read this also : KEA Recruitment 2026: 4,699 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಕಂಪ್ಲೀಟ್ ಗೈಡ್…!
ಕುಟುಂಬ ಹಾಗೂ ಸಮಾಜಕ್ಕೆ ಹಿರಿಯರೇ ಬೆನ್ನೆಲುಬು
ಬಳಿಕ ಸರ್ಕಾರಿ ನಿವೃತ್ತ ನೌಕರರ ಸಂಘದ ಗೌರವಾಧ್ಯಕ್ಷ ಬಿ. ಅಮೀರ್ ಜಾನ್ ಮಾತನಾಡಿ, ಹಿರಿಯ ನಾಗರಿಕರು ಕುಟುಂಬ ಹಾಗೂ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ತಮ್ಮ ಜೀವನದ ಬಹುಭಾಗವನ್ನು ಕುಟುಂಬದ ಜವಾಬ್ದಾರಿ ಹಾಗೂ ಸಮಾಜದ ಸೇವೆಗೆ ಮೀಸಲಿಟ್ಟಿರುವ ಹಿರಿಯರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಿರಿಯ ನಾಗರಿಕರಿಗೆ ಕುಟುಂಬದ ಸದಸ್ಯರು ಪ್ರೀತಿ, ಗೌರವ ಮತ್ತು ಆತ್ಮೀಯತೆಯಿಂದ ಬೆಂಬಲ ನೀಡಬೇಕು. ವಯೋಸಹಜವಾಗಿ (Senior Citizens Rights) ಎದುರಾಗುವ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರಿಗೆ ಅಗತ್ಯವಾದ ಸಹಕಾರ ನೀಡಬೇಕು. ಹಿರಿಯರನ್ನು ಕುಟುಂಬದಿಂದ ದೂರ ಮಾಡದೆ, ಅವರ ಅನುಭವ ಮತ್ತು ಸಲಹೆಗಳನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಹಿರಿಯ ನಾಗರಿಕರಿಗೆ ಲಭ್ಯವಿರುವ ಸರ್ಕಾರಿ ಸೌಲಭ್ಯಗಳ ಮಾಹಿತಿ
ಕಾರ್ಯಕ್ರಮದಲ್ಲಿ (Senior Citizens Rights) ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್.ಎಂ. ಜಗದೀಶ್ ರವರು ಹಿರಿಯ ನಾಗರಿಕರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳು ಹಾಗೂ ಸಂಬಂಧಿತ ವಿಷಯಗಳ ಕುರಿತು ಮಾಹಿತಿ ನೀಡಿದರು. ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಆರ್.ವರುಣ್ ರಾಜ್, ವಕೀಲರ ಸಂಘದ ಅಧ್ಯಕ್ಷ ಅಶ್ವತ್ಥ ರೆಡ್ಡಿ, ವಕೀಲರಾದ ನರೇಂದ್ರ, ನಿವೃತ್ತ ನೌಕರರ ಸಂಘದ ಕೆ.ವಿ.ನಾರಾಯಣಸ್ವಾಮಿ, ವೆಂಕಟನಾರಾಯಣರೆಡ್ಡಿ, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ನ್ಯಾಯಾಲಯದ ಸಿಬ್ಬಂದಿ ಸುರೇಶ್ ಸೇರಿದಂತೆ ಹಲವರು ಇದ್ದರು.



