Shiva Rajkumar – ಸ್ಯಾಂಡಲ್ ವುಡ್ ನ ಸ್ಟಾರ್ ನಟ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ರವರಿಗೆ ಅಮೇರಿಕಾದಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಅವರು (Shiva Rajkumar) ಶೀಘ್ರ ಗುಣಮುಖರಾಗಲಿ ಹಾಗೂ ಅವರ ಆರೋಗ್ಯ ಸುಧಾರಿಸಲಿ ಎಂದು ಅಭಿಮಾನಿಗಳು ರಾಜ್ಯದ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯದ ಮಲೆ ಮಹದೇಶ್ವರ, ಘಾಟಿ ಸುಬ್ರಮಣ್ಯ ದೇವಾಲಯ, ಕೆಂಗಲ್ ಆಂಜನೇಯಸ್ವಾಮಿ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮೂತ್ರನಾಳ ಸಮಸ್ಯೆಯಿಂದ ಬಳಲುತ್ತಿರುವ ಶಿವರಾಜ್‌ಕುಮಾರ್ (Shiva Rajkumar) ಅಮೆರಿಕಾದಲ್ಲಿ ಶಸ್ತçಚಿಕಿತ್ಸೆಗೆ ಒಳಗಾಗುತ್ತಿರುವ ಹಿನ್ನೆಲೆ ಅವರ ಆರೋಗ್ಯ ಚೇತರಿಕೆಗೆ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shiva Rajkumar) ಶಸ್ತ್ರಚಿಕಿತ್ಸೆ ಯಶಸ್ವಿಯಾಗಲೆಂದು ಅವರ ಅಭಿಮಾನಿಗಳು ಪೂಜೆ ನೆರವೇರಿಸಿದ್ದಾರೆ. ಮೈಸೂರಿನ ಕೆ.ಜಿ. ಕೊಪ್ಪಲಿನ ಶಿವು ಹಾಗೂ ಅವರ ಸ್ನೇಹಿತರು ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. (Shiva Rajkumar) ಮಹದೇಶ್ವರ ಬೆಟ್ಟದಲ್ಲಿ ಶಿವ ರವರು ಅಷ್ಟೋತ್ತರ, ಬಿಲ್ವಾರ್ಚನೆ ಪೂಜೆ ಮಾಡಿಸಿದ್ದಾರೆ. ದೇವಾಲಯದ ಸುತ್ತಲೂ ಮೂರು ಬಾರಿ ಉರುಳು ಸೇವೆ ಮಾಡಿ ಕೇಶ ಮುಂಡನೆ (Shiva Rajkumar) ಮಾಡಿಸುವ ಮೂಲಕ ಹರಕೆ ತೀರಿಸಿದ್ದಾರೆ. ಇವರ ಜೊತೆಗೆ ದರ್ಶನ್, ಅಭಿರಾಜ್, ಮನೋಹರ್, ಟಿ.ನಾರಾಯಣ್ ರವರು ಹಾಜರಿದ್ದರು.
ಇನ್ನೂ ಚೆನ್ನಪಟ್ಟಣದ ಪ್ರಸಿದ್ದ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಲ್ಲೂ (Shiva Rajkumar) ಶಿವಣ್ಣ ಅಭಿಮಾನಿಗಳು ಅವರ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿ ಪ್ರಸಾದ ವಿತರಣೆ ಮಾಡಿದ್ದಾರೆ. ದೇವಾಲಯದಲ್ಲಿ 101 ಈಡುಗಾಯಿ ಹೊಡೆದು ಶಿವರಾಜ್ ಕುಮಾರ್ ಪೊಟೋ ಹಿಡಿದು ಅವರು ಶೀಘ್ರ ಗುಣಮುಖರಾಗಲಿ ಎಂದು ಶುಭಹಾರೈಸಿದ್ದಾರೆ. (Shiva Rajkumar) ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲೂ ಶಿವರಾಜ್ ಕುಮಾರ್ ರವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.