ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯವಿರುದ್ದ ಕೇಳಿಬಂದಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ದ (Siddaramaiah) ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಈ ರೀತಿಯ ತನಿಖೆಗಳಿಗೆ ನಾನು ಹೆದರೊಲ್ಲ. ಕಾನೂನಿನಡಿ ಹೋರಾಟ ಮಾಡುತ್ತೇವೆ. ತನಿಖೆ ಎದುರಿಸಲು ನಾನು ತಯಾರಿದ್ದೇನೆ ಎಂದಿದ್ದಾರೆ.
ಮುಡಾ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ನೀಡಿದ ತೀರ್ಪಿನ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ (Siddaramaiah)ಸಿದ್ದರಾಮಯ್ಯ, ನಿನ್ನೆ ಹೈಕೋರ್ಟ್ 17ಎ ಅನ್ವಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಹೈಕೋರ್ಟ್ ಆದೇಶ ಮೇರೆಗೆ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ. ಕೋರ್ಟ್ ತೀರ್ಪಿನ ಪ್ರತಿ ಸಿಕ್ಕಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ತನಿಖೆ ಎದುರಿಸಲು ನಾವು ತಯಾರಿದ್ದೇವೆ ತನಿಖೆ ಮಾಡಲು ಮೈಸೂರು ಲೋಕಾಯುಕ್ತಗೆ ಕೋರ್ಟ್ ಸೂಚನೆ. ಪೂರ್ಣ ಆದೇಶದ ಪ್ರತಿ ಸಿಕ್ಕಿದ ಬಳಿಕ ಮುಂದಿನ ತೀರ್ಮಾನ ಮಾಡುತ್ತೇನೆ. ನಿನ್ನೆಯೇ ಹೇಳಿದ್ದೇನೆ, (Siddaramaiah) ನಾವು ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ದರಿದ್ದೇವೆ. ದೂರುದಾರರು ಮೈಸೂರಿನವರಾದ್ದರಿಂದ ಅಲ್ಲೇ ತನಿಖೆ ನಡೆಯಲಿದೆ ಎಂದರು.
ಇನ್ನೂ (Muda Scam) ಮುಡಾ ಹಗರಣದ ಸಂಬಂಧ ಸಿಎಂ ಗೆ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸಲಹೆ ನೀಡಿದ್ದಾರೆ. ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ (Santosh Hegde) ರವರು, ಲಾಲ್ ಬಹದ್ದೂರ್ ಶಾಸ್ತ್ರಿಯವರ ಉದಾಹರಣೆಯನ್ನು ನೀಡಿ ಸಿಎಂ ಸಿದ್ದರಾಮಯ್ಯನವರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಹಿಂದೆ ರೈಲ್ವೆ ಸಚಿವರಾಗಿದ್ದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅಪಘಾಥ ಪ್ರಕರಣವೊಂದರಲ್ಲಿ ರಾಜೀನಾಮೆ ನೀಡಿದ್ದರು. ರಾಜೀನಾಮೆ ಕೊಡಬೇಕಾ ಅಥವಾ ಬೇಡವಾ ಎಂಬುದು ಅವರಿಗೆ ಬಿಟ್ಟ ವಿಚಾರ. ಆದರೆ ಇಂತಹ ಗಂಭೀರ ಆರೋಪಗಳು ಕೇಳಿಬಂದಾಗ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡದೇ ಇದ್ದರೂ ಕಾನೂನಿನಲ್ಲಿ ಯಾವುದೇ ತಪ್ಪಿಲ್ಲ ಎಂದು ಸ್ಪಷ್ಟಪಡಿಸಿದರು.