ಮುಡಾ ಸೈಟು ಹಂಚಿಕೆ (MUDA SCAM)ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ನಾಯಕರು ಸಿಎಂ ಸಿದ್ದರಾಮಯ್ಯನವರ (Siddaramaiah) ರಾಜಿನಾಮೆಗೆ ಪಟ್ಟು ಹಿಡಿದಿವೆ. ಈ ಕುರಿತು ಸಿಎಂ ಸಿದ್ದರಾಮಯ್ಯ (Siddaramaiah) ಮಾತನಾಡಿದ್ದಾರೆ. ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಗಬ್ಬೆದ್ದು ಹೋಗಿದೆ. ಅದನ್ನು ಸ್ವಚ್ಚಗೊಳಿಸುವ ಕೆಲಸ ಮಾಡುತ್ತೇನೆ. ನಮ್ಮ ಕಾಲದಲ್ಲೂ ತಪ್ಪಾಗಿದೆ, ಬಿಜೆಪಿ ಕಾಲದಲ್ಲಿ ಹೆಚ್ಚು ತಪ್ಪಾಗಿದೆ ಎಲ್ಲವನ್ನೂ ಸರಿಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ (Siddaramaiah) ಅವರು, ಪತ್ನಿಗೆ ಸೈಟ್ ಕೊಟ್ಟಿರುವ ವಿಚಾರವಾಗಿ ಪ್ರತಿಪಕ್ಷಗಳ ಟೀಕೆಗೆ ಉತ್ತರಿಸಿದರು. ನಮ್ಮದು ಅಕ್ರಮವಲ್ಲ, ಆ ಪ್ರಕರಣವೇ ಬೇರೆ, ಈಗ ನಡೆದಿರುವ ಪ್ರಕರಣಗಳೇ ಬೇರೆ. ಬಿಜೆಪಿ ಅವಧಿಯಲ್ಲಿ ನನ್ನ ಪತ್ನಿಗೆ ಸೈಟ್ ಕೊಟ್ಟಿದ್ದು, ಅವರು ಕೇಳಿ ಸೈಟ್ ಕೊಟ್ಟಿದ್ದಾರಾ? ನನ್ನ ಪತ್ನಿಗೆ ಸೈಟ್ ಹಂಚಿಕೆಯಾದಾಗ ನಾನು ವಿರೋಧ ಪಕ್ಷದ ನಾಯಕನಾಗಿದ್ದೆ. ನಾನು ಈಗ ವಿಪಕ್ಷ ನಾಯಕನನ್ನು ಕೇಳಿ ಕೆಲಸ ಮಾಡುತ್ತೇನಾ, ಮುಡಾ ತಪ್ಪು ಮಾಡಿ ನಂತರ ಪರಿಹಾರದ ಸೈಟ್ ಕೊಟ್ಟಿದೆ. ಭೂಮಿ ಕಳೆದುಕೊಂಡ ನಾವು ಪರಿಹಾರ ಪಡೆಯಬೇಕೋ ಬೇಡವೋ, ಈಗಲೂ ಅವರು ಕೊಟ್ಟಿರುವ ಸೈಟ್ ವಾಪಸ್ ಪಡೆಯಲಿ, ಸದ್ಯ ಲೆಕ್ಕದ ಪ್ರಕಾರ ಬಡ್ಡಿ ಸೇರಿಸಿ 62 ಕೋಟಿ ರೂಪಾಯಿ ಪಾವತಿ ಮಾಡಲಿ ಎಂದು ಹೇಳಿದ್ದೇನೆ. ಸೈಟ್ ಹಂಚಿಕೆ ವಿಚಾರ ಯಾವ ಹಂತದಲ್ಲೂ ಅಕ್ರಮವಾಗಿಲ್ಲ ಎಂದು ಗುಡುಗಿದ್ದಾರೆ.
ಇನ್ನೂ ಹಿಂದುಳಿದ ವರ್ಗದಿಂದ ನಾನು ಎರಡನೇ ಬಾರಿ ಸಿಎಂ (Siddaramaiah) ಆಗಿದ್ದಕ್ಕೆ ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೊಟ್ಟೆ ಕಿಚ್ಚಿನಿಂದ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ನನ್ನ ಮೇಲೇ ಮಾಡೋಕೆ ಬೇರೆ ಆರೋಪವಿಲ್ಲ, ಆದ್ದರಿಂದ ಈ ವಿಚಾರವನ್ನು ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ. ಕಾನೂನಾತ್ಮಕವಾಗಿ ಆಗಿದ್ದನ್ನು ಅಕ್ರಮ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ.ಇದಕ್ಕೆಲ್ಲ ಹೆದರುತ್ತೀನಾ, ನನ್ನ ಹೆದರಿಸಲು ಸಾಧ್ಯವೇ ಇಲ್ಲ. ಇದೇ ಸಮಯದಲ್ಲಿ ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಬಗ್ಗೆ (Siddaramaiah) ಪ್ರತಿಕ್ರಿಯಿಸಿದರು. ಈ ಪ್ರಕರಣದ ಬಗ್ಗೆ ಅಧಿಕೃತವಾದ ಯಾವುದೇ ವರದಿ ಇನ್ನೂ ಬಂದಿಲ್ಲ. ಮಾದ್ಯಮದವರ ವರದಿ ನಾನು ಹೇಗೆ ನಂಬಲಿ. ವರ್ಗಾವಣೆ ಆಗುವ ಹಣದ ಎಲ್ಲಾ ವಿಚಾರ ನನ್ನ ಗಮನಕ್ಕೆ ಬರಲ್ಲ, ವರದಿ ಬಂದ ಬಳಿಕ ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ದ ಕ್ರಮ ಕೈಗೊಳ್ಳುತ್ತೇನೆ ಎಂದರು.