Siddaramaiah vs BSY- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ಮುಖಂಡರ ವಾಕ್ಸಮರ ಜೋರಾಗಿಯೇ ನಡೆಯುತ್ತಿದೆ. ಪರಸ್ಪರ ಏಕವಚನದಲ್ಲಿಯೇ ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B S Yediyurappa) ವಿರುದ್ದ ವಾಗ್ದಾಳಿ ನಡೆಸಿದ್ದಾರೆ. 82ರ ವಯಸ್ಸಿನಲ್ಲಿ ಯಡಿಯೂರಪ್ಪನಿಗೆ ಇದೆಲ್ಲಾ ಬೇಕಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddarmaiah) ವ್ಯಂಗವಾಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗಷ್ಟೆ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ (Siddarmaiah) ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು, ಸಿಎಂ ಆಗಿ ಮುಂದುವರೆಯಲು ಅವರು ಯೋಗ್ಯರಲ್ಲ ಎಂದು ಆಗ್ರಹಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddarmaiah) ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪಗೆ ನನ್ನ (Siddarmaiah) ಬಗ್ಗೆ ಮಾತನಾಡುವಂತಹ ನೈತಿಕತೆಯೇ ಇಲ್ಲ. ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪ ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್ ಹಾಕಿಸಿಕೊಂಡಿರುವ ಯಡಿಯೂರಪ್ಪಗೆ ನನ್ನ (Siddarmaiah) ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದೆ ಎಲ್ಲವನ್ನೂ ಶೀಘ್ರದಲ್ಲೆ ಬಯಲಿಗೆ ತರುತ್ತೇನೆ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ (Siddarmaiah) ಮುಡಾ ಪ್ರಕರಣದ ಸಂಬಂಧ ರಾಜ್ಯಪಾಲರು ನೀಡಿರುವ ನೊಟೀಸ್ ಗೆ ಈಗಾಗಲೇ ಉತ್ತರ ನೀಡಲಾಗಿದೆ. ಮುಡಾ ಸೈಟ್ ಹಂಚಿಕೆ ಸಂಪೂರ್ಣವಾಗಿ ಕಾನೂನಿನ ಪ್ರಕಾರವೇ ನಡೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ನಮ್ಮ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ನಿವೇಶನ ಹಂಚಿಕೆಯಲ್ಲಿ ನಾನು ಯಾವುದೇ ರೀತಿಯ ಪ್ರಭಾವವನ್ನು ಬೀರಿಲ್ಲ, ಎಲ್ಲವೂ ಕಾನೂನು ಪ್ರಕಾರವೇ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿದೆ. (Siddarmaiah) ನಮ್ಮ ಸರ್ಕಾರ ಬಡವರ ಪರ ಕೆಲಸ ಮಾಡುತ್ತಿರುವುದು ಸಹಿಸಲು ವಿಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ರೀತಿಯೆಲ್ಲಾ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಎಂದರು.