Sports News – ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡಾಕೂಟಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಕ್ರೀಡೆಗಳಲ್ಲಿ ಭಾಗುವಹಿಸುವುದು (Sports News) ಮುಖ್ಯವೇ ಹೊರತು ಸೋಲು ಗೆಲುವು ಮುಖ್ಯವಲ್ಲ. ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾಸ್ಪೂರ್ತಿ ಬೆಳೆಸಿಕೊಳ್ಳಬೇಕೆಂದು ಬಿಇಒ ಕೃಷ್ಣಪ್ಪ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಕಸಬಾ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ (Sports News) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಹೆಚ್ಚಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯ. (Sports News) ಕ್ರೀಡೆಗಳು ವಿದ್ಯಾರ್ಥಿಗಳಿಗೆ ಹಬ್ಬ ವಾತವರಣ ಮೂಡಿಸುವಂತದ್ದಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳವುದರ ಮೂಲಕ ಒಳ್ಳೆಯ ಕ್ರೀಡಾಪಟುಗಳಾಗಿ ರೂಪುಗೊಳ್ಳಲು ಸಾಧ್ಯ. ಅಲ್ಲದೇ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಈ ಕ್ರೀಡಾಕೂಟದಲ್ಲಿ ಭಾಗಿಯಾದ (Sports News) ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ತಾಲೂಕು, ಜಿಲ್ಲಾ, ವಿಭಾಗ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಬೇಕೆಂದು ಸಲಹೆ ನೀಡಿದರು.
ಬಳಿಕ ಗುಡಿಬಂಡೆ (Sports News) ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಕ ಮುರಳಿ ಮಾತನಾಡಿ, ಇತ್ತೀಚಿಗೆ ವಿದ್ಯಾರ್ಥಿಗಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಕೇವಲ ತರಗತಿಗಳಿಗೆ ಸೀಮಿತವಾಗದೇ ಕ್ರೀಡಾಕೂಟಗಳಲ್ಲಿ ಸಹ ಭಾಗಿಯಾಗಬೇಕು. ಜೊತೆಗೆ ಕೆಲವು ಮಕ್ಕಳು ಮೊಬೈಲ್, ಟಿವಿಗಳಿಗೆ ಸೀಮಿತರಾಗಿದ್ದಾರೆ. (Sports News) ಅವುಗಳಲ್ಲೇ ತಲ್ಲೀನರಾಗಿಬಿಟ್ಟಿದ್ದಾರೆ. ಇದರಿಂದ ಮಾನಸಿಕ ಖಿನ್ನತೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳೂ ಸಹ ಎದುರಾಗುತ್ತವೆ. ಇನ್ನೂ ಗುಡಿಬಂಡೆ ಭಾಗದಲ್ಲಿ ಅನೇಕ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ. (Sports News) ಆ ಮೂಲಕ ಗುಡಿಬಂಡೆಗೆ ಹೆಸರು ತಂದುಕೊಟ್ಟಿದ್ದಾರೆ. ಅವರಂತೆ ತಾವುಗಳೂ ಸಹ ಉತ್ತಮ ಸಾಧನೆ ಮಾಡಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಬೇಕೆಂದರು.
ಈ (Sports News) ಕ್ರೀಡಾಕೂಟದಲ್ಲಿ ಕಬ್ಬಡಿ, ವಾಲಿಬಾಲ್, ಖೊಖೊ ಸೇರಿದಂತೆ ವಿವಿಧ ಕ್ರೀಡೆಗಳನ್ನು ನಡೆಸಲಾಗಿದ್ದು, ಹೋಬಳಿ ಮಟ್ಟದ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ಸಮಯದಲ್ಲಿ ವಿವಿಧ ಶಾಲೆಗಳ ದೈಹಿಕ ಶಿಕ್ಷಕರು ಹಾಜರಿದ್ದರು.