10ನೇ ತರಗತಿ ಪಾಸ್ ಆದವರಿಗೆ ಇಲ್ಲಿದೆ ಭರ್ಜರಿ ಉದ್ಯೋಗಾವಕಾಶ. ಸಿಬ್ಬಂದಿ ನೇಮಕಾತಿ ಆಯೋಗ (SSC Recruitment) 39,481 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸೇನಾ ಇಲಾಖೆಯ ವಿವಿಧ ಭಾಗಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ (SSC Recruitment) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೆ.5 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 14 ಕಡೆಯ ದಿನವಾಗಿದೆ.

ಸಿಬ್ಬಂದಿ ನೇಮಕಾತಿ ಆಯೋಗ (SSC Recruitment) 39,481 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿ.ಎಸ್.ಎಫ್ – 15,654, ಸಿ.ಐ.ಎಸ್.ಎಫ್ – 7145, ಸಿ.ಆರ್.ಪಿ.ಎಫ್ – 11,541, ಎಸ್.ಎಸ್.ಬಿ – 819, ಐ.ಟಿ.ಬಿ.ಪಿ – 3,017, ಎ.ಆರ್ – 1,248, ಎಸ್.ಎಸ್.ಎಫ್ – 35, ಎನ್.ಸಿ.ಬಿ – 22 ಸೇರಿ ಒಟ್ಟು 39481 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. (SSC Recruitment) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನ್ಸ್ಟೇಬಲ್ ಹುದ್ದೆಗೆ 21,700- 69,100 ರೂ, ರೈಫಲ್ಮ್ಯಾನ್, ಸಿಪಾಯಿ ಹುದ್ದೆಗೆ 18,000- 56,900 ರೂಪಾಯಿ ನಿಗದಿಸಲಾಗಿದೆ.
ಇನ್ನೂ ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು ಎಂಬ (SSC Recruitment) ವಿಚಾರಕ್ಕೆ ಬಂದರೇ, ಕನಿಷ್ಠ 18, ಜನವರಿ 2025ಕ್ಕೆ ಅನುಗುಣವಾಗಿ 23 ವರ್ಷ ಮೀರಿರಬಾರದು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಹಾಗೂ ನಿವೃತ್ತ ಸೇವಾದಾರ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ. (SSC Recruitment) ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೇ, ಪ.ಜಾತಿ, ಪ.ಪಂ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಇತರೆ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ.

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, (SSC Recruitment)ದೈಹಿಕ ಗುಣಮಟ್ಟ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ದಾಖಲಾತಿಗಳ ಪರಿಶೀಲನೆ ನಡೆಸಿದ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ssc.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
3 Comments
Ok
Good
Ok